ರೈತ ಚಳವಳಿ ಒಡೆಯಲು ಜೆಡಿಎಸ್‌ ಸುಪಾರಿ

Team Udayavani, Feb 12, 2019, 7:26 AM IST

m1raitra.jpg

ಮೈಸೂರು: ರೈತ ಚಳವಳಿಯನ್ನು ಒಡೆಯಲು ಷಡ್ಯಂತ್ರ ನಡೆಸಿರುವ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬದವರು ಕೆಲವರಿಗೆ ಸುಫಾರಿ ಕೊಟ್ಟಿರುವ ಸಂಶಯವಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ನೇತೃತ್ವದಲ್ಲಿ ಸರ್ಕಾರ ರಚನೆಯಾದ ಮೇಲೆ ಕಳೆದ ಆರು ತಿಂಗಳಿಂದ ನಿರಂತರವಾಗಿ ಚಳವಳಿಯನ್ನು ಒಡೆಯುವ ಕೆಲಸವಾಗುತ್ತಿದೆ. ಜೆಡಿಎಸ್‌ ಪ್ರಬಲವಾಗಿರುವ ಜಿಲ್ಲೆಗಳಲ್ಲೇ ರೈತಸಂಘ ಕೂಡ ರಾಜಕೀಯವಾಗಿ ಎದಿರೇಟು ಕೊಡುತ್ತಿರುವುದರಿಂದ ಕೆಲ ರೈತಸಂಘಟನೆಗಳನ್ನು ಬಳಸಿಕೊಂಡು ಗೊಂದಲ ಸೃಷ್ಟಿಸಲು ಸುಫಾರಿ ಕೊಡಲಾಗಿದೆ. ಆ ಸುಪಾರಿಗೆ ಪಚ್ಚೆ ನಂಜುಂಡಸ್ವಾಮಿ ಕೂಡ ಒಳಗಾಗಿರಬಹುದು ಎಂದು ತಿರುಗೇಟು ನೀಡಿದರು.

ಹುಚ್ಚಾಟ: ರೈತಸಂಘದ ಪದಾಧಿಕಾರಿಯೇ ಅಲ್ಲದ ಪಚ್ಚೆ ನಂಜುಂಡಸ್ವಾಮಿ ಮತ್ತು ಲಕ್ಷ್ಮೀನಾರಾಯಣ ಗೌಡ ಅವರಿಗೆ ನನ್ನನ್ನು ಉಚ್ಚಾಟನೆ ಮಾಡಲು ಅಧಿಕಾರ ಕೊಟ್ಟವರ್ಯಾರು? ಪಚ್ಚೆ, ಎಂ.ಡಿ.ನಂಜುಂಡಸ್ವಾಮಿ ಅವರ ಮಗ ಅಷ್ಟೆ, ರೈತ ಸಂಘದ ಮುಖಂಡನಲ್ಲ. ಲಕ್ಷ್ಮೀನಾರಾಯಣಗೌಡರನ್ನು ಪ್ರೊ.ನಂಜುಂಡಸ್ವಾಮಿ ಅವರೇ ಸಂಘದಿಂದ ಉಚ್ಚಾಟನೆ ಮಾಡಿದ್ದು, ಹೀಗಾಗಿ ರೈತಸಂಘಕ್ಕೆ ಸಂಬಂಧವೇ ಇಲ್ಲದ ಅವರು ಹೇಳುತ್ತಿರುವುದು ಉಚ್ಚಾಟನೆಯಲ್ಲ, ಹುಚ್ಚಾಟ ಎಂದು ಲೇವಡಿ ಮಾಡಿದರು.

ಸರ್ವಾನುಮತದ ಆಯ್ಕೆ: ಅಧ್ಯಕ್ಷ ಸ್ಥಾನಕ್ಕೆ ನಾನು ಆಸೆ ಪಟ್ಟವನಲ್ಲ. ಸ್ವಯಂಘೋಷಿತ ಅಧ್ಯಕ್ಷನಾಗಬೇಕಾದ ಅನಿವಾರ್ಯತೆಯೂ ನನಗಿಲ್ಲ. ರಾಜ್ಯಾಧ್ಯಕ್ಷರಾಗಿದ್ದ ಕೆ.ಟಿ. ಗಂಗಾಧರ್‌ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಉಳಿದ ಏಳು ತಿಂಗಳ ಅವಧಿಗೆ ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ 37 ಜನ ಪದಾಧಿಕಾರಿಗಳ ಪೈಕಿ ಸಭೆಯಲ್ಲಿ ಹಾಜರಿದ್ದ 33ಜನರು ತಮ್ಮನ್ನು ಸರ್ವಾನುಮತದಿಂದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ ಎಂದರು.

ಜನವರಿ 5ರಂದು ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಗೆ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬರಲಾಗುತ್ತಿಲ್ಲ, ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಪತ್ರ ಕಳುಹಿಸಿದ್ದರು. ಅದರಂತೆ ಸಭೆಯಲ್ಲಿ ಹಾಜರಿದ್ದ 33 ಜನ ಪದಾಧಿಕಾರಿಗಳು ಹೊಸ ಅಧ್ಯಕ್ಷರ ಆಯ್ಕೆಗೆ ಒಪ್ಪಿದರಾದರೂ ತಾವೇ ಗಂಗಾಧರ್‌ ಅವರ ಉಪಸ್ಥಿತಿಯಲ್ಲೇ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡೋಣ ಎಂದು ಸಲಹೆ ನೀಡಿ, ಗಂಗಾಧರ್‌ ಅವರು ಸೂಚಿಸಿದಂತೆಯೇ ಫೆ.5ರಂದು ಚಿತ್ರದುರ್ಗದಲ್ಲಿ ಕರೆಯಲಾದ ರಾಜ್ಯ ಪದಾಧಿಕಾರಿಗಳ ಸಭೆಗೂ ಕೆ.ಟಿ.ಗಂಗಾಧರ್‌ ಗೈರಾದರು, ಚುಕ್ಕಿ ನಂಜುಂಡಸ್ವಾಮಿ ಸಭೆ ಮುಗಿದ ನಂತರ ಬಂದರು ಎಂದು ತಿಳಿಸಿದರು.

ಆಸ್ತಿ ತನಿಖೆ ಮಾಡಲಿ: ವಕೀಲ ವೃತ್ತಿ ಮಾಡುತ್ತಾ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ವಿಚಾರಗಳಿಂದ ಪ್ರೇರಿತನಾಗಿ ರೈತಸಂಘಕ್ಕೆ ಬಂದವನು ನಾನು. ರೈತಸಂಘದಲ್ಲಿನ 37 ವರ್ಷದ ನನ್ನ ಹೋರಾಟದಲ್ಲಿ ಜೀವನ ಮಾಡಲು ಸಂಘವನ್ನು ಬಳಸಿಕೊಂಡಿಲ್ಲ. ರಿಯಲ್‌ ಎಸ್ಟೇಟ್ ನನಗೆ ಗೊತ್ತಿಲ್ಲ. ಜಮೀನ್ದಾರಿ, ಸ್ಥಿತಿವಂತ ಕುಟುಂಬದಿಂದ ಬಂದವನು ನಾನು. ನನ್ನ ಮತ್ತು ಕುಟುಂಬದ ಆಸ್ತಿ, ಆರ್ಥಿಕ ಮೂಲದ ಪ್ರಮಾಣಪತ್ರ ಮಾಡಿಸಿ ರಾಜ್ಯ ಪದಾಧಿಕಾರಿಗಳ ಮುಂದೆ ಇಡುತ್ತೇನೆ. ಅಕ್ರಮ ಹಣ ಇದ್ದರೆ ಯಾರು ಬೇಕಾದರೂ ತನಿಖೆ ಮಾಡಲಿ ಎಂದು ಸವಾಲು ಹಾಕಿದರು.

ರೈತಸಂಘದ ವರಿಷ್ಠರಾದ ಅಶ್ವತ್ಥನಾರಾಯಣ ರಾಜೇ ಅರಸ್‌, ಲೋಕೇಶ್‌ ರಾಜೇ ಅರಸ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್‌ ಪುಣಚ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್‌, ಮುಖಂಡರಾದ ನೇತ್ರಾವತಿ, ಮರಂಕಯ್ಯ, ಮಂಡಕಳ್ಳಿ ಮಹೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.