ಜಿಗ್ನೇಶ್ ಮೇವಾನಿ ಸವಾಲು
Team Udayavani, May 3, 2018, 3:48 PM IST
ಮೈಸೂರು: ದೇಶದಲ್ಲಿ ಉದ್ಯೋಗ ಸೃಷ್ಟಿ, ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ, ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ್ದ, ಪ್ರಧಾನಿ ಈವರೆಗೂ ಶೇ.1 ಉದ್ಯೋಗ ಸೃಷ್ಟಿಸಿಲ್ಲ. ಇನ್ನೂ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು, ದಲಿತರು, ಹಿಂದುಳಿದ ವರ್ಗದವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರು ಕರ್ನಾಟಕಕ್ಕೆ ಬಂದು ಮಾತನಾಡುವ ಮೋದಿ, ಈ ವಿಷಯಗಳ ಬಗ್ಗೆ ಕಾರವೆತ್ತದೆ ಮೌನಕ್ಕೆ ಶರಣಾಗಿದ್ದಾರೆ. ಮೋದಿ ಅವರು 20 ವರ್ಷಗಳಲ್ಲಿ ಗುಜರಾತ್‌ನಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ? ನಾನು ಗುಜರಾತ್ ಮೂಲದವನೇ ಆಗಿರುವುದರಿಂದ ಈ ಕುರಿತು
ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದರು.
ದೇಶದ ಯುವಜನತೆ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಉದ್ಯೋಗ ಕಲ್ಪಿಸಲಿದ್ದಾರೆ ಎಂಬ ವಿಶ್ವಾಸ ಹೊಂದಿದ್ದರು. ಆದರೆ ಮೋದಿ ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ಈ ನಂಬಿಕೆಯನ್ನು ಹುಸಿಗೊಳಿಸಿದ್ದಾರೆ. ದೇಶದಲ್ಲಿ ನೋಟು ರದ್ದತಿ ಹಾಗೂ ಜಿಎಸ್‌ಟಿ ಜಾರಿಯಾದ ಬಳಿಕ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಗುಜರಾತ್ ವಿಧಾನಸಬೆಯಲ್ಲಿ ಕೆಲಸ ಮಾಡುವ ಕೆಳಹಂತದ ಸಿಬ್ಬಂದಿ ಕನಿಷ್ಠ ವೇತನವಿಲ್ಲದೆ ಪರದಾಡುತ್ತಿರುವುದು ಯಾವ ಅಭಿವೃದ್ಧಿ ಎಂದು ಪ್ರಶ್ನಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಾಯಲ್ಲಿ ಅಂಬೇಡ್ಕರ್ ಹೆಸರಿದೆ, ಆದರೆ ಹೃದಯದಲ್ಲಿ ಮನುಸೃತಿ ಇದೆ. ಕೇವಲ ಅಂಬೇಡ್ಕರ್ ಜಯಂತಿ ಆಚರಣೆ ಮಾಡುವುದು ಯಾವ ದೊಡ್ಡತನವಲ್ಲ, ಬದಲಿಗೆ ದೇಶದ ದಲಿತರು ಮತ್ತು ಶೋಷಿತರನ್ನು ರಕ್ಷಿಸಲು ಮುಂದಾಗಬೇಕಿದೆ. ದೇಶದಲ್ಲಿ ಬಿಜೆಪಿ ಹಾಗೂ ಸಂಘ ಪರಿವಾದವರು ನ್ಯಾಯಾಂಗ ವ್ಯವಸ್ಥೆಗೆ
ಕುತ್ತುತರುವ ರೀತಿಯಲ್ಲಿ ನೆಡೆದುಕೊಳ್ಳುತ್ತಿದ್ದಾರೆ.
ಗುಜರಾತ್‌ನಲ್ಲಿ ಸಂಘ ಪರಿವಾರದವರಿಂದ ಕೋಮುವಾದ ಹೆಚ್ಚಾಗಿದೆ ಎಂದು ಹೇಳಿದರು. ವಿಧಾನಸಬಾ ಚುನಾವಣೆಯಲ್ಲಿ ದಲಿತ ಸಮುದಾಯದವರು ಇಂತವರಿಗೆ ಮತ ನೀಡಿ ಎಂದು ಹೇಳುವುದಿಲ್ಲ. ಆದರೆ ಬಿಜೆಪಿಗೆ ಏಕೆ ಮತ ಹಾಕಬಾರದೆಂದು ಹೇಳುತ್ತೇನೆ. ನನ್ನ ದೃಷ್ಟಿ ಕರ್ನಾಟಕದ ಜನತೆಯನ್ನು ಜಾಗೃತಗೊಳಿಸುವು ದಾಗಿದ್ದು, 2019ರಲ್ಲಿ ನಮ್ಮ ಅಜೆಂಡಾ ಇಂಡಿಯಾ ಹಾಗೂ ಬಿಜೆಪಿ ನಡುವೆ ಆಗಿರಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ನೂರ್‌ಶಿಧರ್, ಗೋಪಾಲಕೃಷ್ಣ, ರೈತ ಸಂಘದ ಹೊಸಕೋಟೆ ಬಸವರಾಜು ಹಾಜರಿದ್ದರು
ಪುಟ್ಟಣ್ಣಯ್ಯ ಸ್ಮರಣೆ ಕೆ.ಎಸ್.ಪುಟ್ಟಣ್ಣಯ್ಯ ನಿಜವಾದ ಕಾಳಜಿಯುಳ್ಳ ಮಣ್ಣಿನಮಗನಾಗಿದ್ದು, ಅಂತಹವರು ಇಂದು
ನಮ್ಮ ನಡುವೆ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಪುಟ್ಟಣ್ಣಯ್ಯ ಅವರ ಮಗ ದರ್ಶನ್ ಅವರನ್ನು ಗೆಲ್ಲಿಸುವ ಮೂಲಕ ನಿಜವಾದ ಕೃಷಿಕರಿಗೆ ಬೆಲೆ ನೀಡಬೇಕಿದೆ. ವಿಧಾನಸೌಧದಲ್ಲಿ ದರ್ಶನ್ ಪುಟ್ಟಣ್ಣಯ್ಯ ಕೂರುವುದನ್ನು ನೋಡುವ ಆಸೆ
ತಮ್ಮದಾಗಿದ್ದು, ದರ್ಶನ್ ಅವರು ಗೆದ್ದರೆ ಕೃಷಿಕ ಸಮುದಾಯಕ್ಕೆ ಹೆಚ್ಚು ಅನುಕೂಲವಾಗಲಿದೆ.
ಜಿಗ್ನೇಶ್ ಮೇವಾನಿ, ಗುಜರಾತ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.