ಜೆಡಿಎಸ್‌ಗೆ ಬೆಂಬಲ ನೀಡಲು ರೈತಸಂಘದ ಸಭೆಯಲ್ಲಿ ನಿರ್ಣಯ


Team Udayavani, Sep 8, 2017, 11:24 AM IST

mys5.jpg

ತಿ.ನರಸೀಪುರ: ಮುಂಬರುವ 2018 ರ ವಿಧಾನ ಸಭಾ ಚುನಾವಣೆಯಲ್ಲಿ ತಿ.ನರಸೀಪುರ ಮೀಸಲು ವಿಧಾನ ಸಭಾ ಕ್ಷೇತ್ರದಲ್ಲಿ  ಜೆಡಿಎಸ್‌ ಅಭ್ಯರ್ಥಿಯನ್ನು ಬೆಂಬಲಿಸಲು ರೈತ ಸಂಘದ ಸದಸ್ಯರು ತೀರ್ಮಾನಿಸಿದರು. 

ಪಟ್ಟಣದ ಎಪಿಎಂಸಿ ಆವರಣದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಆಲಗೂಡು ಮಹದೇವ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ   ರೈತರ ಸಭೆಯಲ್ಲಿ ರೈತರು ತೀರ್ಮಾನ ತೆಗೆದುಕೊಂಡರು. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿ ಜನ, ಜಾನುವಾರುಗಳಿಗೆ ಮೇವು, ಕುಡಿಯುವ ನೀರಿನ ಸಮಸ್ಯೆ ಕಾಡತೊಡಗಿದೆ.

ರೈತರ ಬೆಳೆಗಳಿಗೆ ನೀರು ಸಿಗದೇ ರೈತರು ನಷ್ಟ ಅನುಭವಿಸಿ ಸಂಕಷ್ಟಕ್ಕಿಡಾಗಿರುವ ಸಂದರ್ಭದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ರೈತರ ಬೆಳೆಗಳಿಗೆ ನೀರು ಹರಿಸಿ ರೈತರ ಹಿತ ಕಾಪಾಡದೇ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಹರಿಸಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ದೂರಿದರು.

ಇದರ ಜೊತೆಗೆ ವಿರೋಧ ಪಕ್ಷದಲ್ಲಿರುವ ಬಿಜೆಪಿ ಸರ್ಕಾರ ಕೂಡ ರೈತರ ಬೆಂಬಲಕ್ಕೆ ನಿಲ್ಲುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ಆರೋಪಿಸಿದರು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಜೆಡಿಎಸ್‌ ರಾಜಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಲು ಮುಖಂಡರು ತೀರ್ಮಾನಿಸಿದರು.

ಸಭೆಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ಶಿವಪ್ರಸಾದ್‌, ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್‌, ರೈತ ಮುಖಂಡರಾದ ಅತ್ತಹಳ್ಳಿ ಶಿವನಂಜು, ಕಳ್ಳಿಪುರ ಮಹದೇವಸ್ವಾಮಿ, ಚಿದರವಳ್ಳಿ ನಾಗೇಂದ್ರ, ತಲಕಾಡು ದಿನೇಶ್‌, ವೆಂಕಟೇಶ್‌, ಕುರುಬೂರು ಶಾಂತರಾಜ್‌ ಇದ್ದರು.

ಟಾಪ್ ನ್ಯೂಸ್

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.