MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ
ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ರಾಜ್ಯ ಸರ್ಕಾರ
Team Udayavani, Oct 16, 2024, 7:00 AM IST
ಮೈಸೂರು: ರಾಜ್ಯವಷ್ಟೇ ಅಲ್ಲದೇ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಗರದ ಆಯಕಟ್ಟಿನ ಸ್ಥಳದಲ್ಲಿ 14 ನಿವೇಶನ ಮಂಜೂರಾದ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಲ ಭೂಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿರುವುದಲ್ಲದೇ ತನಿಖೆಯೂ ನಡೆಯುತ್ತಿದೆ.
ಇದರ ಬೆನ್ನಲ್ಲೇ ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು. ಆದರೆ, ಮರಿಗೌಡ ಅವರು, ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ದಸರಾ ಮುಗಿದು 3 ದಿನ ಕಳೆದಿದ್ದು, ಇಂದು ಅಥವಾ ನಾಳೆ ಖುದ್ದು ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಮುಡಾದಲ್ಲಿ ಅವ್ಯವಹಾರ, ಅವ್ಯವಸ್ಥೆ ಸ್ವತ್ಛಗೊಳಿಸಬೇಕಿದೆ. ಮುಡಾ ಆಡಳಿತವನ್ನು ಸ್ವತ್ಛಗೊಳಿಸಲು ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದು, ಅದಕ್ಕಾಗಿಯೇ ಆಯೋಗ ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಡಾದಲ್ಲಿ ಅವ್ಯವಹಾರವಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧªವಾಗಿದೆ. ಆದರೆ, ಕೆ. ಮರೀಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವ ವಿಚಾರ ನನಗೆ ಗೊತ್ತಿಲ್ಲ ಎಂದರು.–
ಮುಡಾಗೆ ಆಡಳಿತಾಧಿಕಾರಿ ನೇಮಕ
ಮುಡಾ ಹಗರಣ ಸಂಬಂಧ ತೀವ್ರ ಮುಜುಗರ ಅನುಭವಿಸಿರುವ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದೆ. ಈ ಮೂಲಕ ಮೈಸೂರು ನಗರಾಭಿವೃದ್ಧಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.