ಉಳ್ಳವರು ಮೀಸಲಾತಿ ಪಡೆದುಕೊಳ್ಳಬಾರದು..: ಕೆ.ಎಸ್.ಈಶ್ವರಪ್ಪ
Team Udayavani, Sep 16, 2022, 1:17 PM IST
ಮೈಸೂರು: ಕೇಂದ್ರ ಸರ್ಕಾರ ಬೆಟ್ಟ ಕುರುಬ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದು ಸಂತಸ ತಂದಿದೆ. ಇದೇ ರೀತಿ ಹಿಂದುಳಿದಿರುವ ಸಮುದಾಯಗಳನ್ನು ಗುರುತಿಸಿ ಮೀಸಲಾತಿ ಕಲ್ಪಿಸಬೇಕು. ಉಳ್ಳವರು ಮೀಸಲಾತಿ ಪಡೆಯುತ್ತಿದ್ದರೆ ಅದನ್ನು ಪರಿಷ್ಕರಿಸಬೇಕು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟ ಕುರುಬ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಬೆಟ್ಟಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಕಳೆದ ನಾಲ್ಕು ದಶಕಗಳಿಂದ ಹೋರಾಟ ನಡೆದಿತ್ತು. ಕಾಗಿನೆಲೆ ಮಹಾಸಂಸ್ಥಾನ ಮಠದ ಶ್ರೀಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಕೂಡ ನಡೆಸಲಾಗಿತ್ತು. ಇದೀಗ ಹೋರಾಟಕ್ಕೆ ಜಯ ಸಂದಿದೆ ಎಂದರು.
ಆರ್ಥಿಕವಾಗಿ ಸಬಲರಾಗಿರುವವರಿಗೆ ಮೀಸಲಾತಿ ನೀಡಬಾರದು. ದಲಿತರಿಗೆ ಕಲ್ಪಿಸಿರುವ ಮೀಸಲಾತಿಯನ್ನು ಉಳ್ಳವರೇ ಪಡೆದುಕೊಳ್ಳುತ್ತಿದ್ದಾರೆ. ದಲಿತ ಸಮುದಾಯದಲ್ಲಿ ತುಳಿತಕ್ಕೊಳಗಾದವರಿಗೆ ಮೀಸಲಾತಿ ಸಿಗಬೇಕು. ಸ್ವಾಭಿಮಾನದ ಬದುಕು ಸಿಗುವವರೆಗೂ ದಲಿತ ಸಮುದಾಯಕ್ಕೆ ಮೀಸಲಾತಿ ಸಿಗಬೇಕು. ಮಲ್ಲಿಕಾರ್ಜುನ ಖರ್ಗೆ ನಂತರ ಅವರ ಮಗ ಪ್ರಿಯಾಂಕ ಖರ್ಗೆ ಮೀಸಲಾತಿಯ ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಹಾಗಾಗಿ ಮೀಸಲಾತಿ ನೀಡುವಾಗ ಕಡುಬಡವರಿಗೆ ಆದ್ಯತೆ ನೀಡಬೇಕು ಎಂದರು.
ಇಡಿ ನೋಟಿಸ್ ನೀಡಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಭಾರತ್ ಜೋಡೊ ಯಾತ್ರೆಯ ಸಿದ್ದತೆಯಲ್ಲಿರುವಾಗ, ವಿಧಾನಮಂಡಲ ಅಧಿವೇಶನ ನಡೆಯುತ್ತಿರುವಾಗ ಇಡಿ ನೋಟಿಸ್ ನೀಡಿರುವುದಕ್ಕೆ ಡಿಕೆಶಿ ಆಕ್ಷೇಪ ವ್ಯಕ್ತಪಡಿಸಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ. ಬೇಲ್ ಮೇಲೆ ಹೊರಗಿದ್ದಾರೆ. ನಿರಪರಾಧಿ ಎಂದು ಸಾಬೀತಾಗುವವರೆಗೂ ಈ ರೀತಿಯ ಹೇಳಿಕೆ ನೀಡಬಾರದು ಎಂದರು.
ಇಂಧನ ಇಲಾಖೆಯ ಅವ್ಯವಹಾರ ಕುರಿತು ಹಳೆಯ ಕಡತಗಳನ್ನು ಪರಿಶೀಲನೆ ಮಾಡುತ್ತಿರುವುದಕ್ಕೆ ಡಿಕೆಶಿಯಿಂದ ಆಕ್ಷೇಪಕ್ಕೆ ಪ್ರತಿಕ್ರಿಯಿಸಿ, ಅವು ಸಾರ್ವಜನಿಕ ದಾಖಲೆಗಳಾಗಿವೆ. ಯಾರು ಬೇಕಾದರೂ ದಾಖಲೆಗಳನ್ನು ಪಡೆಯಬಹುದು. ಆರ್ ಟಿಐ ಮೂಲಕ ಅರ್ಜಿ ಸಲ್ಲಿಸಿ ಯಾರು ಬೇಕಾದರೂ ದಾಖಲೆಗಳನ್ನು ಪಡೆದುಕೊಳ್ಳಬಹುದು. ಯಾರ ಮೇಲೂ ಒತ್ತಡ ಹಾಕಿ ಕಡತಗಳನ್ನು ಪಡೆಯುವುದಿಲ್ಲ. ನಾನು ಇಂಧನ ಸಚಿವನಾಗಿದ್ದಾಗಲೂ ಇದೇ ರೀತಿ ಕಡತಗಳನ್ನು ಪಡೆದುಕೊಳ್ಳಲಾಗುತ್ತಿತ್ತು. ಡಿಕೆಶಿ ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದ ತಿರುಗೇಟು ನೀಡಿದರು.
ಮತಾಂತರ ನಿಷೇಧ ಕಾಯ್ಧೆ ಮಸೂದೆ ಮಂಡನೆ ವೇಳೆ ಬಿಲ್ ನ ಪ್ರತಿಯನ್ನು ಅರಿದು ಹಾಕಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿದ ಈಶ್ವರಪ್ಪ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಓಲೈಕೆ ಮಾಡುವ ಸಲುವಾಗಿ ಕಾಂಗ್ರೆಸ್ ಸದಸ್ಯರು ಈ ರೀತಿ ಮಾಡಿದ್ದಾರೆ ಎಂದು ಕಿಡಿ ಕಾರಿದರು.
ಇದನ್ನೂ ಓದಿ:ಠೇವಣಿದಾರರ ಹಿತಾಸಕ್ತಿ ಕಾಯಿದೆ ಮಂಡನೆ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ನಿರ್ಧಾರ
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ನಡೆಸುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅಖಂಡ ಭಾರತವನ್ನು ಒಡೆದು ಹಾಕಿದ್ದೇ ಕಾಂಗ್ರೆಸ್. ಈಗ ಅದನ್ನು ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಕಾಂಗ್ರೆಸ್ ನವರು ಬಲಿ ಪಡೆದರು. ಈಗ ಭಾರತ್ ಜೋಡೊ ಕಾರ್ಯಕ್ರಮ ಮಾಡುತ್ತಿದ್ದಾರೆ. ನೀವು ನಿಮ್ಮ ಸ್ಲೋಗನ್ ಬದಲಾವಣೆ ಮಾಡಿಕೊಂಡು ಕಾರ್ಯಕ್ರಮ ಮಾಡಿ. ಹಿಂದೆ ಮಾಡಿದ ತಪ್ಪಿಗೆ ಪಶ್ಚಾತ್ತಾಪವಾಗಿ ಈ ಕಾರ್ಯಕ್ರಮ ಎಂದು ಹೇಳಿ. ಅಖಂಡ ಭಾರತ ಒಗ್ಗೂಡಬೇಕು. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಎಲ್ಲವೂ ಒಟ್ಟಾಗಿ ಅಖಂಡ ಭಾರತವಾಗಬೇಕು ಎಂದರು.
ನನ್ನ ವಿರುದ್ಧ ಆರೋಪ ಕೇಳಿ ಬರುತ್ತಿದ್ದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಪ್ರಕರಣದಿಂದ ಕ್ಲೀನ್ ಚಿಟ್ ಸಿಕ್ಕ ನಂತರ ಮತ್ತೆ ಸಚಿವ ಸ್ಥಾನ ನೀಡುವ ವಿಶ್ವಾಸವಿತ್ತು. ನನಗೆ ಕ್ಲೀನ್ ಚಿಟ್ ಸಿಕ್ಕನಂತರ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಮತ್ತೆ ಸಚಿವ ಸ್ಥಾನ ನೀಡದಿರುವುದರಿಂದ ಸಹಜವಾಗಿಯೇ ಅಸಮಾಧಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.