ವಿಜೃಂಭಣೆಯಿಂದ ನೆರವೇರಿದ ಶ್ರೀ ಕನ್ನಂಬಾಡಿ ಅಮ್ಮನವರ ಬ್ರಹ್ಮ ರಥೋತ್ಸವ
Team Udayavani, Mar 8, 2022, 6:53 PM IST
ಪಿರಿಯಾಪಟ್ಟಣ: ಇತಿಹಾಸ ಪ್ರಸಿದ್ದ ಪಿರಿಯಾಪಟ್ಟಣ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕನ್ನಂಬಾಡಿ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತಾಧಿಗಳ ನಡುವೆ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.
ಬೆಳಗ್ಗೆಯಿಂದಲೇ ದೇವಾಲಯದಲ್ಲಿ ದೇವರಿಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದಿದ್ದು, 10 ಗಂಟೆಯಿಂದಲೇ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಅಮ್ಮನವರಿಗೆ ಕಳಸಾರೋಹಣವನ್ನು ನೆರವೇರಿಸಲಾಯಿತು. ತದನಂತರದಲ್ಲಿ ದೇವಿಗೆ ಬಲಿಪೂಜೆ ನಡೆಯಿತು. ಇದಾದ ನಂತರ ಕನ್ನಂಬಾಡಿ ಅಮ್ಮನವರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಿ ನಂತರ ಕೊಂಬು ಕಹಳೆ ಬ್ಯಾಂಡ್ ಸಟ್, ಮಂಗಳವಾದ್ಯಗಳ ಸಮೇತ ಬಗೆಬಗೆಯ ಹೂವಿನಿಂದ ಸಿಂಗಾರಗೊಂಡ ರಥಕ್ಕೆ ದೇವಿಯನ್ನು ಕೂರಿಸಿ ಭಕ್ತಾದಿಗಳ ಘೋಷಣೆಯ ನಡುವೆ ಮದ್ಯಾಹ್ನ 12.10 ರೊಳಗೆ ಸಲ್ಲುವ ವೃಷಭ ಲಗ್ನದಲ್ಲಿ ರಥೋತ್ಸವ ಜರುಗಿತು. ದೇವಸ್ಥಾನದಿಂದ ಬಿ.ಎಂ.ರಸ್ತೆ ವರೆಗೆ ರಥವನ್ನು ಎಳೆಯುವ ಹಾಗೂ ರಥಕ್ಕೆ ಹಣ್ಣು ದವನ ಎಸೆಯುವ ಮೂಲಕ ಭಕ್ತಾದಿಗಳು ದೇವರಿಗೆ ಭಕ್ತಿ ಸಮರ್ಪಿಸಿದರು.
ಜಾತ್ರಾ ಮಹೋತ್ಸವಕ್ಕೆ ಪಿರಿಯಾಪಟ್ಟಣ ತಾಲೂಕಿನ ನೂರಾರು ಗ್ರಾಮಗಳ ಜನತೆ ಸೇರಿದಂತೆ ಮೈಸೂರು ಹಾಗೂ ಕೊಡಗು ಜಿಲ್ಲೆಯ ಸಾವಿರಾರು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ರಥೋತ್ಸವದ ನಿಮಿತ್ತ ಪಟ್ಟಣದ ಬಿ.ಎಂ. ರಸ್ತೆಯ ಎರಡೂ ಬದಿಗಳಲ್ಲಿ ಹಲವು ಸಂಘ ಸಂಸ್ಥೆಗಳು ಬೆಳಗ್ಗಿನಿಂದಲೇ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗಾಗಿ ಬಾತು ಮೊಸರನ್ನ, ಪಾನಕ, ಮಜ್ಜಿಗೆ, ನೀರು, ಹಣ್ಣುಗಳು ಸೇರಿದಂತೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.