ವಾರದ 2 ದಿನ ಕಪಿಲಾ ನೀರು ಪೂರೈಕೆ

Team Udayavani, Feb 23, 2023, 3:23 PM IST

tdy-15

ಎಚ್‌.ಡಿ.ಕೋಟೆ : ತಾಲೂಕಿನಲ್ಲಿ 4 ಜಲಾಶಯಗಳಿವೆಯಾದರೂ ಪಟ್ಟಣದ ಮನೆಗಳಿಗೆ ಕುಡಿಯಲು ವಿಷಕಾರಿ ನೀರು ಸರಬರಾಜಾಗುತ್ತಿರುವುದು ವಿಷಾದದ ಸಂಗತಿ. ಅತೀ ಶೀಘ್ರದಲ್ಲಿ ಪಟ್ಟಣದ ಎಲ್ಲಾ ಮನೆಗಳಿಗೆ ವಾರದಲ್ಲಿ 2 ದಿನ ಕಪಿಲಾ ನದಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದಾಗಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್‌ ಭರವಸೆ ನೀಡಿದರು.

ಪುರಸಭೆ ದಿ.ಚಿಕ್ಕಮಾದು ಸಭಾ ಭವನದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್‌ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪಟ್ಟಣದ ವರ್ತಕರ ಸಭೆಯಲ್ಲಿ ವರ್ತರ ಸಂಘದವರು ತಾಲೂಕಿನಲ್ಲಿ ಕಬಿನಿ, ತಾರಕ, ನುಗು, ಹೆಬ್ಬಳ್ಳ ಈ 4 ಜಲಾಶಯಗಳಿವೆಯಾದರೂ ಪಟ್ಟಣದ ಜನತೆಗೆ ಕುಡಿಯುವ ನೀರಿಗಾಗಿ ಕಬಿನಿ ನೀರಿನ ಸಂಪರ್ಕ ಕಲ್ಪಿಸದೇ ಇರುವುದು ವಿಪರ್ಯಾಸ. ಕಬಿನಿ ನೀರಿನ ಜೊತೆಗೆ ಬೋರ್‌ವೆಲ್‌ ನೀರು ಲಿಂಕ್‌ ಮಾಡಿ ಕಳುಹಿಸುತ್ತಿ ರುವುದ ರಿಂದ ವಿಷಕಾರಿ ನೀರಿನ ಸೇವನೆ ಯಿಂದ ಸಾರ್ವ ಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ ಅನ್ನುವ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದವರು.

ಈ ಸಂದರ್ಭದಲ್ಲಿ ಪಟ್ಟಣದ ಸರ್ಕಾರಿ ಬಸ್‌ನಿಲ್ದಾಣದಿಂದ ತಾಲೂಕು ಆಡಳಿತ ಸೌಧದ ತನಕ ರಸ್ತೆ ಇಕ್ಕೆಲೆಗಳನ್ನು ಸಮತಟ್ಟು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಪುರಸಭೆಗೆ ಸೇರಿದ ಸರ್ವಜನಾಂಗದ ಸ್ಮಶಾನದ ಜಾಗ ಅಭಿವೃದ್ಧಿ ಪಡಿಸಬೇಕು. ಪಟ್ಟಣದ ಜನತೆಗೆ ಕುಡಿಯಲು ಶುದ್ಧ ನೀರು ಸರಬರಾಜು ಮಾಡಬೇಕು. ಪುರಸಭೆಯಲ್ಲಿ ಸಾರ್ವಜನಿಕ ಕೆಲಸಗಳ ವಿಳಂಬಕ್ಕೆ ತೆರೆ ಹಾಕಬೇಕು. ತಾಲೂಕು ಕೇಂದ್ರ ಸ್ಥಾನದಲ್ಲಿ ವಿವಿಧ ಸಮುದಾಯಗಳ ಬಹಿಷ್ಕಾರದ ಬರೆಯಿಂದ ಬಹಿಷ್ಕಾರಕ್ಕೆ ಸಿಲುಕಿದ ಬಡ ಮಂದಿ ಸಾವಿನ ಸಂದರ್ಭದಲ್ಲಿ ಶವ ಸಂಸ್ಕಾರಕ್ಕೆ ಬಹಿಷ್ಕಾರ ವಿಧಿಸಿದ ಸಮು ದಾಯ ಮುಂದಾಗದೇ ಇರುವುದರಿಂದ ಶವ ಸಂಸ್ಕಾರಕ್ಕೆ ಪ್ರಯಾಸ ಪಡಬೇಕಾದ ಅನಿವಾರ್ಯತೆ ಇದೆ. ಬಹಿಷ್ಕಾರಕ್ಕೆ ಒಳಗಾಗಿ ಶವಸಂಸ್ಕಾರಕ್ಕೆ ತೊಂದರೆ ಅನುಭವಿಸುವವರಿಗೆ ಪುರಸಭೆಯಿಂದ ಶವಸಂಸ್ಕಾರಕ್ಕೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಹಿತಾದೃಷ್ಟಿಯಿಂದ ಪಟ್ಟಣದ ಸ್ಮಶಾನದಲ್ಲಿ ನೂತನವಾಗಿ ವಿದ್ಯುತ್‌ ಚಿತಾಗಾರವೊಂದನ್ನು ಆರಂಭಿಸಲು ಪುರಸಭೆ ಮುಂದಾಗಬೇಕು. ಪಟ್ಟಣದ ಬಹುತೇಕ ಬಡವಣೆಗಳಲ್ಲಿ ಕುಡಿಯುವ ನೀರಿನ ಸೋರಿಕೆಯಾಗುತ್ತಿದ್ದು, ಸೋರಿಕೆ ನೀರಿನಿಂದ ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದನ್ನು ಮನಗಂಡು ನೀರಿನ ಸೋರಿಕೆ ತಡೆಗೆ ಮುಂದಾಗಬೇಕು ಅನ್ನುವ ವಿಚಾರಗಳು ಸಭೆಯಲ್ಲಿ ಮುಖ್ಯವಾಗಿ ಚರ್ಚೆಗೆ ಬಂದವು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಪಿ.ಸುರೇಶ್‌, ಸದಸ್ಯರಾದ ನಾಗರಾಜು, ಶಾಂತಮ್ಮ, ಹರೀಶ, ವರ್ತಕರ ಸಂಘದ ಅಧ್ಯಕ್ಷ ವಿನಯ್‌, ರವಿಕುಮಾರ್‌, ಮಾಜಿ ಅಧ್ಯಕ್ಷ ಪುಟ್ಟೇಗೌಡ, ಸಮ್ರತ್‌ ಲಾಲ್‌ ಕೊಠಾರಿ, ನಾರಾಯಣ್‌ಲಾಲ್‌ ಜೈನ್‌, ಹೊಂಡ ನಯಾಜ್‌, ಹಬೀಬ್‌ ಇತರರು ಇದ್ದರು.

ಪುರಸಭೆ ಆದಾಯಕ್ಕೆ ಸಹರಿಸಿ: ವೆಂಕಟೇಶ್‌ : ನಾನೊಬ್ಬ ಸಿವಿಲ್‌ ಗುತ್ತಿಗೆದಾರರನಾಗಿದ್ದರೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಾದ ಮೇಲೆ ಪಟ್ಟಣದ ಜನತೆಗೆ ಸುಧಾರಣೆ ದೃಷ್ಟಿಯಿಂದ ನನ್ನ ವೃತ್ತಿ ಬದಿಗೊತ್ತಿ ಇಡೀ ದಿನ ಪುರಸಭೆಯ ಸಾರ್ವಜನಿಕ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಪುರಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸಾಕಷ್ಟಿವೆ ಆದರೆ ಅನುದಾನದ ಕೊರತೆಯಿಂದ ಪಟ್ಟಣದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಅನುದಾನ ಕ್ರೂಢೀಕರಿಸಿಕೊಂಡು ಹಂತ ಹಂತವಾಗಿ ಪಟ್ಟಣದ ಅಭಿವೃದ್ಧಿ ಪಡಿಸುವ ಇಂಗಿತ ವ್ಯಕ್ತಪಡಿಸಿದ ಅವರು, ವರ್ತಕರು ಕಳೆದ ಸಾಲಿನ ಪುರಸಭೆ ಪರವಾನಗಿ ಬಾಕಿ ಮತ್ತು ಪ್ರಸಕ್ತ ಸಾಲಿನ ಮಾರ್ಚ್‌ ತಿಂಗಳ ಪರವಾನಗಿ ನವೀಕರಿಸುವ ಮೂಲಕ ಪುರಸಭೆ ಆದಾಯಕ್ಕೆ ಸಹಕಾರಿಯಾಗುವಂತೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್‌ ಮನವಿ ಮಾಡಿದರು.

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.