ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ನಂಬರ್‌ ಒನ್‌


Team Udayavani, Jan 14, 2018, 12:15 PM IST

m6-udyoga.jpg

ಮೈಸೂರು: ದೇಶದಲ್ಲಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿದ್ದು, ರಾಜ್ಯ ಸರ್ಕಾರ ಕಳೆದ ನಾಲ್ಕೂ ಮುಕ್ಕಾಲು ವರ್ಷದಲ್ಲಿ ರಾಜ್ಯದಲ್ಲಿ 12.16 ಲಕ್ಷ ಉದ್ಯೋಗ ಸೃಷ್ಟಿಸಿದೆ ಎಂದು ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಈ ಬಗ್ಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಹೇಳಲಾಗಿತ್ತಾದರೂ ಈ ಭರವಸೆಯನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದೆ. ಆದರೆ, ರಾಜ್ಯದಲ್ಲಿ 12.16 ಲಕ್ಷ ಉದ್ಯೋಗ ಸೃಷ್ಟಿಸಿದ್ದು, ಇದರಲ್ಲಿ ಅತಿ ಸಣ್ಣ,

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ 10.28 ಲಕ್ಷ, 1.88 ಲಕ್ಷ ಉದ್ಯೋಗ ಬೃಹತ್‌ ಕೈಗಾರಿಕೆಗಳಲ್ಲಿ ಒದಗಿಸುವ ಮೂಲಕ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಅಲ್ಲದೆ, ಇನ್ನೂ 6.25 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ 2019ರ ವೇಳೆಗೆ ರಾಜ್ಯದಲ್ಲಿ 15 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಹೂಡಿಕೆಯಲ್ಲಿ ಅಗ್ರಸ್ಥಾನ: ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಜಾರಿಗೊಳಿಸಿದ ಕೈಗಾರಿಕಾ ನೀತಿ ಹಾಗೂ ಪ್ರೋತ್ಸಾಹದ ಪರಿಣಾಮ ಕರ್ನಾಟಕ ಬಂಡವಾಳ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೈಗಾರಿಕೆ ಹಾಗೂ ಬಂಡವಾಳ ಹೂಡಿಕೆಯಲ್ಲಿ 11ನೇ ಸ್ಥಾನದಲ್ಲಿತ್ತು.

ಆದರೆ , ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒದಗಿಸಿದ ಹಲವು ಕಾರ್ಯಕ್ರಮಗಳ ಪರಿಣಾಮ ಕೈಗಾರಿಕಾಭಿವೃದ್ಧಿಯಲ್ಲಿ ಕರ್ನಾಟಕ 2016-17ನೇ ವರ್ಷಗಳಲ್ಲಿ ಮೊದಲ ಪಡೆದುಕೊಂಡಿದ್ದು, ಗುಜರಾತ್‌ ಎರಡನೇ ಸ್ಥಾನ ಪಡೆದಿದೆ.

ಇದರಿಂದಾಗಿ ದೇಶದಲ್ಲಿ ಕರ್ನಾಟಕ ಶೇ.42.9(1.49 ಲಕ್ಷ ಕೋಟಿ) ಬಂಡವಾಳ ಆಕರ್ಷಿಸುವ ಮೂಲಕ 1ನೇ ಸ್ಥಾನಕ್ಕೇರಿದ್ದು, ಎಫ್ಡಿಐ ಹೂಡಿಕೆಯಲ್ಲೂ ಕರ್ನಾಟಕ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ 3.46 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ 1923 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕೌಶಲ್ಯಾಭಿವೃದ್ಧಿ ತರಬೇತಿ: ರಾಜ್ಯದಲ್ಲಿ ಅಂದಾಜು 5 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಕೈಗಾರಿಕೆಗಳ ಬೆಳವಣಿಗೆ ಹಾಗೂ ಉತ್ತೇಜನ ನೀಡುವ ಸಲುವಾಗಿ ಇನ್ವೆಸ್ಟ್‌ ಕರ್ನಾಟಕ ಫೋರಂ ಆರಂಭಿಸಲಾಗಿದೆ. ಬೆಂಗಳೂರು ನಗರವನ್ನು ವಿದ್ಯುತ್‌ ಚಾಲಿತ ವಾಹನಗಳ ಕೇಂದ್ರವನ್ನಾಗಿಸಲು ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್‌ ವೆಹಿಕಲ್‌ ಅಂಡ್‌ ಎನರ್ಜಿ ಸ್ಟೋರೇಜ್‌ ನೀತಿ ಜಾರಿಗೊಳಿಸಲು ಮುಂದಾಗಿದೆ ಎಂದರು.

ಮಹಿಳ್ಳೋದ್ಯಮ ಪಾರ್ಕ್‌: ರಾಜ್ಯ ಸರ್ಕಾರ ಮಹಿಳಾ ಉದ್ಯಮಿಗಳಿಗೆ ಆದ್ಯತೆ ನೀಡುವ ಉದ್ದೇಶದೊಂದಿಗೆ ರಾಜ್ಯದಲ್ಲಿ 6 ಮಹಿಳ್ಳೋದ್ಯಮ ಪಾರ್ಕ್‌ ಸ್ಥಾಪನೆ ಮಾಡಲು ತೀರ್ಮಾನಿಸಿದೆ. ನಂಜನಗೂಡಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ 48.03 ಎಕರೆ ಪ್ರದೇಶ, ಕನಕಪುರದ ಹಾರೋಹಳ್ಳಿ ಕೈಗಾರಿಕಾ ಪ್ರದೇಶ 100 ಎಕರೆ,

ಬಳ್ಳಾರಿಯ ಕುಡಿತಿನಿ ಕೈಗಾರಿಕಾ ಪ್ರದೇಶ 60 ಎಕರೆ, ಧಾರವಾಡದ ಗಮ್ಮನಗಟ್ಟಿ ಕೈಗಾರಿಕಾ ಪ್ರದೇಶ 30 ಎಕರೆ, ಕಲಬುರ್ಗಿಯ ನಂದೂರ್‌ ಕೈಗಾರಿಕಾ ಪ್ರದೇಶ 50.70 ಎಕರೆ ಹಾಗೂ ಮಂಗಳೂರಿನ ಕೆನರಾ ಕೈಗಾರಿಕಾ ಪ್ರದೇಶದ 40 ಎಕರೆ ಜಾಗದಲ್ಲಿ ಮಹಿಳ್ಳೋದ್ಯಮ ಪಾರ್ಕ್‌ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಭೂಮಿಗಾಗಿ ಬೇಡಿಕೆ ಇದೆ: ಮೈಸೂರು ನಗರದಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಉದ್ದೇಶದಿಂದ ಪ್ರಮುಖ ಕೈಗಾರಿಕೆಗಳು ಭೂಮಿ ನೀಡುವಂತೆ ಬೇಡಿಕೆ ಸಲ್ಲಿಸಿವೆ. ಹೀಗಾಗಿ ಕೋಚನಹಳ್ಳಿಯಲ್ಲಿ 189 ಎಕರೆ, ಅಡಕನಹಳ್ಳಿಯಲ್ಲಿ 63 ಎಕರೆ, ತಾಂಡ್ಯದಲ್ಲಿ 70 ಹಾಗೂ ಕಲ್ಲಹಳ್ಳಿಯಲ್ಲಿ 30 ಎಕರೆ ಜಾಗವನ್ನು ಕೈಗಾರಿಕಾ ಪ್ರದೇಶವನ್ನಾಗಿಸಲು ಕ್ರಮವಹಿಸಲಾಗುವುದು ಎಂದು ಸಚಿವ ದೇಶಪಾಂಡೆ ತಿಳಿಸಿದರು.

ವಿಮಾನಯಾನ ಸೇವೆ: ಮೈಸೂರು ಕೈಗಾರಿಕೆ ಮಾತ್ರವಲ್ಲದೆ ಉತ್ತಮ ಪ್ರವಾಸಿ ಕೇಂದ್ರವಾಗಿದ್ದು, ಪ್ರವಾಸೋದ್ಯಮದ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮೈಸೂರು ನಗರಕ್ಕೆ ದೇಶದ ವಿವಿಧ ಭಾಗಗಳಿಂದ ಸಂಪರ್ಕ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರದ ಉಡಾನ್‌ ಯೋಜನೆ ಮೂಲಕ ವಿಮಾನಯಾನ ಸೇವೆ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಪ್ರಮುಖವಾಗಿ ಮೈಸೂರು-ಗೋವಾ, ಗೋವಾ-ಬೆಂಗಳೂರು-ಮೈಸೂರು, ಗೋವಾ-ಹಂಪಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿಮಾನ ಸೇವೆ ಒದಗಿಸುವಂತೆ ಕೋರಲಾಗಿದ್ದು, ಈ ನಡುವೆ ಬೀದರ್‌ ವಿಮಾನ ನಿಲ್ದಾಣ ಆರಂಭಕ್ಕೆ ಕ್ರಮವಹಿಸಲಾಗುವುದು ಎಂದರು.

ಬೆಂಗಳೂರು 2ನೇ ರಾಜಧಾನಿ: ಜಾಗತಿಕವಾಗಿ ಗುರುತಿಸಿಕೊಂಡಿರುವ ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿ ಎಂದು ಘೋಷಿಸುವಂತೆ ಪ್ರಧಾನಮಂತ್ರಿಯವರಿಗೆ ಪತ್ರ ಬರೆಯಲಾಗಿದೆ. ಬೆಂಗಳೂರು ಸಿಲಿಕಾನ್‌ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇತ್ತೀಚೆಗೆ ವಿಶ್ವದ ಡಿಜಿಟಲ್‌ ಸಿಟಿ ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ.

ಜಾಗತಿಕವಾಗಿ ಗುರುತಿಸಿಕೊಂಡಿರುವ ಬೆಂಗಳೂರು ನಗರ, ರಾಷ್ಟ್ರ ರಾಜಧಾನಿ ದೆಹಲಿಗಿಂತಲೂ ಉತ್ತಮ ಮೂಲ ಸೌಕರ್ಯಗಳನ್ನು ಹೊಂದಿದೆ. ಹೀಗಾಗಿ ಬೆಂಗಳೂರು ನಗರವನ್ನು ದೇಶದ 2ನೇ ರಾಜಧಾನಿಯಾಗಿ ಘೋಷಿಸುವಂತೆ ಪ್ರಧಾನಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೂ ಪತ್ರ ಬರೆಯಲಾಗಿದೆ ಎಂದು ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

ಕೋಮು ಸಾಮರಸ್ಯ ಕದಡಬಾರದು: ಸಮಾಜದಲ್ಲಿ ಯಾರೂ ಕೂಡ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಬಾರದು. ಉತ್ತರ ಕನ್ನಡದಲ್ಲಿ ಇತ್ತೀಚೆಗೆ ಸಂಭವಿಸಿದ ಪರೇಶ್‌ ಮೆಸ್ತಾ ಸಾವಿನ ಮರಣೋತ್ತರ ವರದಿಯಲ್ಲಿ ಸಾವಿಗೆ ನಿಖರ ಕಾರಣ ನೀಡಲಾಗಿದ್ದರೂ, ಈ ಬಗ್ಗೆ ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಿ ಗಲಭೆ ಸೃಷ್ಟಿಸಲಾಯಿತು. ಕೋಮುಗಲಭೆ ಸೃಷ್ಟಿಸುವುದು ಪಾಪದ ಕೆಲಸವಾಗಿದ್ದು, ದೇಶದ ಸಂವಿಧಾನಕ್ಕೂ ಮಾರಕವಾಗಲಿದೆ.

ರಾಜ್ಯ ಸರ್ಕಾರವನ್ನು ಎದುರಿಸಲಾಗದ, ಕೋಮುವಾದಿ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದು, ಕೋಮುವಾದದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಡಿಣ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಕರಾವಳಿ ಭಾಗದಲ್ಲಿ ಪದೇ ಪದೆ ಹಿಂಸಾಚಾರ ಮರುಕಳಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಯಡಿಯೂರಪ್ಪ ಅವರನ್ನೇ ಕೇಳಿ ಎಂದು ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.