Flood ಭೀತಿಯಲ್ಲಿ ಕಾವೇರಿ, ಕಪಿಲಾ: 319 ಜನರ ಸ್ಥಳಾಂತರ
Team Udayavani, Jul 31, 2024, 11:04 PM IST
ಮೈಸೂರು: ಕೆಆರ್ಎಸ್ ಜಲಾಶಯದಿಂದ 1.33 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದ್ದು ಕಾವೇರಿ ಮತ್ತು ಕಪಿಲೆ ಸಂಗಮ ಸ್ಥಳವಾದ ತಿರುಮಕೂಡಲಿನ ಹಲವು ಪ್ರದೇಶ ಜಲಾವೃತವಾಗಿದೆ. ಇತ್ತ ಕಪಿಲೆಯ ಭೋರ್ಗರೆತದಿಂದ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಲ್ಲನಮೂಲೆ ಮಠದ ಬಳಿ ನೀರು ಬಂದಿದ್ದು ಹಲವು ಪ್ರದೇಶಗಳು ಜಲಾವೃತವಾಗಿವೆ.
ಕಬಿನಿ ಜಲಾಶಯದಿಂದ 70 ಸಾವಿರ ಕ್ಯೂಸೆಕ್ಗೂ ಹೆಚ್ಚು ನೀರನ್ನು ಕಪಿಲಾ ನದಿಗೆ ಹರಿಬಿಟ್ಟಿರುವುದರಿಂದ ಎಚ್.ಡಿ. ಕೋಟೆಯ ಬಿದರಹಳ್ಳಿ ಬಳಿಯ ಸೇತುವೆ, ನಂಜನಗೂಡು ತಾಲೂಕಿನ ಕಡಜಟ್ಟಿ ಸೇತುವೆ, ಸುತ್ತೂರು, ಹರದನಹಳ್ಳಿ, ಮುಳ್ಳೂರು, ತೊರೆಮಾವು, ಮಲ್ಲನ ಮೂಲೆ ಮಠದ ಬಳಿಯ ಸೇತುವೆಗಳು ಮುಳುಗಡೆಯಾಗಿವೆ.
ಕಪಿಲೆ ಮತ್ತು ಕಾವೇರಿ ನದಿ ಸೃಷ್ಟಿಸಿರುವ ನೆರೆಯಿಂದ ಜಿಲ್ಲೆಯ 8 ಗ್ರಾಮಗಳು ಸಮಸ್ಯೆಗೀಡಾಗಿವೆ. ನಂಜನಗೂಡು ತಾಲೂಕಿನಲ್ಲಿ 105 ಕುಟುಂಬದ 254 ಸದಸ್ಯರು, ತಿ. ನರಸೀಪುರದ 29 ಕುಟುಂಬಗಳಲ್ಲಿನ 65 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ 306 ಮಂದಿ ಕಾಳಜಿ ಕೇಂದ್ರದಲ್ಲಿದ್ದು, ಉಳಿದ 13 ಮಂದಿ ಸಂಬಂಧಿಕರ ಮನೆಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.