ಚಾ.ನಗರ ಮುಂದೆ, ಮೈಸೂರು ಹಿಂದೆ ಏಕೆ?


Team Udayavani, Oct 21, 2020, 3:17 PM IST

mysuru-tdy-02

ಮೈಸೂರು: 2020-21 ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ “ಎ’ ಶ್ರೇಣಿಗೆ ಬರಲು ಶೀಘ್ರವೇಕಾರ್ಯಸೂಚಿ ರೂಪಿಸಿ ಎಂದು ಜಿಲ್ಲಾ ಪಂಚಾಯ್ತಿಸಿಇಒ ಡಿ.ಭಾರತಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗದರ ಜಿಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಸಿಕ ಪ್ರಗತಿಯ ವರದಿ ಪಡೆದರು. 20 ಅಂಶಗಳ ಕಾರ್ಯಕ್ರಮ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದರು.

ಚಾಮರಾಜನಗರ ಜಿಲ್ಲೆ ಎಲ್ಲದರಲ್ಲೂ ಹಿಂದುಳಿದ ಜಿಲ್ಲೆ ಎಂದು ಆರೋಪಿಸುತ್ತಾರೆ. ಆದರೆ, ಎಸ್ಸೆಸ್ಸೆಲ್ಸಿ ಫ‌ಲಿತಾಂಶದಲ್ಲಿ ಮಾತ್ರ ಮುಂದಿರುತ್ತದೆ. ಹಾಗಾಗಿ ಈ ಬಾರಿ, ಮೈಸೂರು ಎ ಶ್ರೇಣಿಯಲ್ಲಿ ಬರುವಂತೆ ಕಾರ್ಯಸೂಚಿ ರೂಪಿಸಬೇಕು. ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅವರಿಗಾಗಿ ವಿಶೇಷ ತರಗತಿಗಳನ್ನು ಆಯೋಜಿಸಿ, ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.

ನವೆಂಬರ್‌ನಿಂದ ತರಗತಿಗಳು ಪ್ರಾರಂಭವಾಗುವ ಸಾಧ್ಯತೆಗಳಿವೆ. ಹೀಗಿರುವಾಗ, ಅಕ್ಟೋಬರ್‌ ತಿಂಗಳಾದರೂ, ಆಕ್ಷನ್‌ ಪ್ಲ್ರಾನ್‌ ಮಾಡದಿರುವುದು ಬೇಸರದ ಸಂಗತಿ. ಕೂಡಲೇ ಆಕ್ಷನ್‌ ಪ್ಲ್ರಾನ್‌ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಗ್ರಾಮೀಣ ಭಾಗದಿಂದಲೇ ಸುಮಾರು 40 ಸಾವಿರ ವಿದ್ಯಾರ್ಥಿಗಳಿದ್ದು, ಅವರ ಶಿಕ್ಷಣಕ್ಕೆ ಬೇಕಾದ ಸೌಲಭ್ಯ ತಲುಪಿಸಬೇಕು. ವಿದ್ಯಾಗಮ ಮಕ್ಕಳಿಗೆ ಪಾಠದ ಸ್ಪರ್ಶ ಬಿಟ್ಟುಹೋಗದಿರಲಿ ಎಂಬ ಕಾರಣದಿಂದ ಇತ್ತು, ಆದರೆ, ತರಗತಿಯಷ್ಟು ಪರಿಣಾಮ ಬೀರಲಿಲ್ಲ. ಹಾಗಾಗಿ ಸಾಧ್ಯವಾದರೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದೊಂದಿಗೆ ಹಳೆಯ ಪ್ರಶ್ನೆಪತ್ರಿಕೆಗಳು ಹಾಗೂ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ನೀಡಿ, ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಎಷ್ಟೋ ದಿವ್ಯಾಂಗರು ಏಳಲೂ ಆಗದ ಸ್ಥಿತಿಯಲ್ಲಿದ್ದಾರೆ. ಇದರಿಂದ ಅವರಿಗೆ ಸರಿಯಾದ ಚಿಕಿತ್ಸೆ ಸಿಗದಂತಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪದ್ಮಾ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಅಂಥವರಿಗೆ 1 ಕಿ.ಮೀ. ವ್ಯಾಪ್ತಿಯಲ್ಲಿರುವ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲು ಕ್ರಮ ವಹಿಸಬೇಕು. ಇದರೊಂದಿಗೆ ವಿಶೇಷ ಚೇತನರಿಗೆ ದೃಢೀಕೃತ ಪ್ರಮಾಣ ಪತ್ರ ನೀಡಬೇಕು ಎಂದು ನೂತನ ಡಿಎಚ್‌ಒ ಅಮರನಾಥ್‌ ಅವರಿಗೆ ಸೂಚಿಸಿದರು.

ಮಾಹಿತಿ ನೀಡಿ: ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಮಾತನಾಡಿ, ಅಧಿಕಾರಿಗಳು ಸಭೆಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಮುಂದಿನ ಸಭೆಯಲ್ಲಾದರೂ ಸೂಕ್ತವಾದ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್‌, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್‌ ಇತರರಿದ್ದರು.

164 ಕಾಮಗಾರಿಗಳು ಬಾಕಿ :  2019-20ನೇ ಸಾಲಿನಲ್ಲಿ ಮಳೆಯಿಂದ ಹಾನಿಯಾದ ಸರ್ಕಾರಿ ಪ್ರಾಥಮಿಕ ಶಾಲೆಗಳ ದುರಸ್ತಿಪಡಿಸುವ 418 ಕಾಮಗಾರಿಗಳಲ್ಲಿ 254 ಕಾಮಗಾರಿಗಳು ಮಾತ್ರವೇ ಪೂರ್ಣಗೊಂಡಿವೆ. 164 ಕಾಮಗಾರಿಗಳು ಬಾಕಿ ಉಳಿದಿವೆ.  ಅವುಗಳಲ್ಲಿ113 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇನ್ನು28 ಕಾಮಗಾರಿಗಳನ್ನುಪಿಆರ್‌ಇಡಿ ಆರಂಭಿಸಿಯೇ ಇಲ್ಲ. ಜತೆಗೆ ಪಿಡಬ್ಲ್ಯೂಡಿ ನಿಂದ 334 ಶಾಲೆಗಳಲ್ಲಿ 635 ಕೊಠಡಿಗಳನ್ನು ದುರಸ್ತಿಪಡಿಸಬೇಕಿದ್ದು, 182 ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು,453ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಾರಂಭಿಸಿಯೇ ಇಲ್ಲ ಎಂದುಕೆ. ಪದ್ಮ ಸಿಇಒಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಅವರು ಪಿಆರ್‌ಇಡಿ ಅಧಿಕಾರಿಗಳಿಗೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ನವಣೆ ಬೆಳೆಗೆ ಮುಂದಾಗದ ರೈತರು : ಕಳೆದ ಮುಂಗಾರು ಹಂಗಾಮಿನಲ್ಲಿ 1550 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದ್ದ ನವಣೆ ಬೆಳೆ ಶೂನ್ಯ ಸಾಧನೆ ಮಾಡಿದೆ.ಇದಕ್ಕೆಬಿತ್ತನೆಬೀಜದಪೂರೈಕೆಇಲ್ಲದಿರುವುದೇ ಕಾರಣ ಎಂದು ರೈತರು ಆರೋಪಿಸುತ್ತಿದ್ದಾರೆ ಎಂದು ಜಿಪಂ ಸಿಇಒ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶಪ್ಪ ರೈತಸಿರಿ ಯೋಜನೆ ಅಡಿಯಲ್ಲಿ ರೈತರಿಗೆ 10 ಸಾವಿರ ರೂ. ಸಹಾಯಧನ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಸಹಾಯ ಧನ ತಿರಸ್ಕಾರವಾಗಿದೆ. ಆದ್ದರಿಂದ ಬಿತ್ತನೆ ಬೀಜ ಪೂರೈಕೆಯಾದರೂ ಬೆಳೆ ಬೆಳೆಯಲು ರೈತರು ಮುಂದೆ ಬರುತ್ತಿಲ್ಲ ಎಂದರು. ಇನ್ನು ಕೇಂದ್ರ ಸರ್ಕಾರದಿಂದ ಕೇವಲ ಈಗಷ್ಟೇ 2.83 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೃಷಿ ಉಪಕರಣ ಮತ್ತು ಔಷಧಿಗಳನ್ನು ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದರು

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.