ಕೆಂಪೇಗೌಡರ ದೂರದೃಷ್ಟಿಯ ಫ‌ಲ ಬೆಂಗಳೂರು


Team Udayavani, Jun 28, 2017, 12:14 PM IST

mys1.jpg

ಮೈಸೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ನಿರ್ಮಾಣವಾದ ಬೆಂಗಳೂರು ಇಂದು ಜಗತ್ತಿನ ಎಲ್ಲಾ ರಾಷ್ಟ್ರಗಳನ್ನು ತನ್ನಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಸಾಹಿತಿ ಡಾ.ಸಿ.ನಾಗಣ್ಣ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ವತಿಯಿಂದ ಮಂಗಳವಾರ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡ ಸಾಮಂತ ರಾಜರಾದರೂ ಸ್ವತಂತ್ರ ರಾಜರಂತೆ ಆಡಳಿತ ನಡೆಸಿದ್ದು ಮೈ ನವಿರೇಳಿಸುವಂತದ್ದು ಎಂದರು.

ತಮ್ಮ ಆಡಳಿತಾವಧಿಯಲ್ಲಿ ಜನರ ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳಿಗೆ ಆದ್ಯತೆ ನೀಡುವ ಜತೆಗೆ ಕೆರೆ ಕಟ್ಟೆಗಳನ್ನು ನಿರ್ಮಿಸಿ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು. ತಮ್ಮ ಆಳ್ವಿಕೆಯಲ್ಲಿ ಯಾರನ್ನೂ ಅನ್ಯರೆಂದು ಭಾವಿಸದೇ ಎಲ್ಲರೂ ಒಂದು ಎಂಬ ಭಾವನೆ ಹೊಂದಿದ್ದ ಕೆಂಪೇಗೌಡರು ವಿಜಯನಗರದ ಕೃಷ್ಣದೇವರಾಯರಿಂದ ರಾಯ ಎಂಬ ಬಿರುದು ಪಡೆದಿದ್ದಾರೆ.

ಇವರ ದೂರದೃಷ್ಟಿಯಲ್ಲಿ ನಿರ್ಮಾಣವಾದ  ಬೆಂಗಳೂರು ಇಂದು ವಿಶ್ವಮಟ್ಟಕ್ಕೆ ಬೆಳೆದಿದ್ದು, ಎಲ್ಲಾ ರಾಷ್ಟ್ರಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು. ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಮೈಸೂರಿನಲ್ಲಿ ನಾವೆಲ್ಲರೂ ಒಟ್ಟಾಗಿ ಅದ್ಧೂರಿಯಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಿದ್ದ ಹಿನ್ನೆಲೆ ಎಚ್ಚೆತ್ತುಕೊಂಡ ಸರ್ಕಾರ ಕೆಂಪೇಗೌಡರ ಜಯಂತಿ ಆಚರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಜತೆಗೆ ಕೆಂಪೇಗೌಡರ ಹೆಸರಿನಲ್ಲಿ ಪ್ರಾಧಿಕಾರ ಸ್ಥಾಪಿಸಿ 10 ಕೋಟಿ ರೂ. ಅನುದಾನ ನೀಡಿರುವುದಕ್ಕೆ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ನಗರಗಳಿಗೆ ಯಾವ ರೀತಿಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು ಎಂಬುದನ್ನು ಕೆಂಪೇಗೌಡರನ್ನು ನೋಡಿ ಕಲಿಯಬೇಕಿದೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನಾವು ಏನು ಮಾಡುತ್ತಿದ್ದೇವೆ ಎಂದು ಚಿಂತಿಸಿ ಅದನ್ನು ತಿದ್ದಿಕೊಳ್ಳಬೇಕಿದೆ ಎಂದರು.

ಮೇಯರ್‌ ಎಂ.ಜೆ. ರವಿಕುಮಾರ್‌ ಮಾತನಾಡಿ, ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಿಸಲಾಗುವುದು ಎಂದು ಹೇಳಿದರು. ಶಾಸಕರಾದ ಎಂ.ಕೆ.ಸೋಮಶೇಖರ್‌, ವಾಸು, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥನಂದ ಸ್ವಾಮೀಜಿ, ಕಾಗಿನೆಲೆ ಪೀಠದ ಶಿವಾನಂದಪುರಿ ಸ್ವಾಮೀಜಿ, ಚುಂಚನಕಟ್ಟೆ ಶಾಖಾ ಮಠದ ಶಿವಾನಂದ ಸ್ವಾಮೀಜಿ,

-ಉಪ ಮೇಯರ್‌ ರತ್ನ ಲಕ್ಷ್ಮಣ್‌, ಮೈಲ್ಯಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ಜಿಲ್ಲಾಧಿಕಾರಿ ಡಿ.ರಂದೀಪ್‌, ಪಾಲಿಕೆ ಆಯುಕ್ತ ಜಿ.ಜಗದೀಶ್‌, ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಪೊ›.ಪದ್ಮಾಶೇಖರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚನ್ನಪ್ಪ ಮುಂತಾದವರು ಹಾಜರಿದ್ದರು.

ಸರ್ಕಾರದಿಂದ ಮೊದಲ ಬಾರಿಗೆ ಆಚರಿಸುತ್ತಿರುವ ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ. ಜತೆಗೆ ಶಿಷ್ಟಾಚಾರಕ್ಕಾಗಿ ಆದರೂ ಇಂದಿನ ಸಮಾರಂಭದ ಆಹ್ವಾನದ ಪತ್ರಿಕೆಯನ್ನೂ ತಮಗೆ ನೀಡಿಲ್ಲ. ಜಿಲ್ಲಾಧಿಕಾರಿಗಳು ಒತ್ತಡದಲ್ಲಿರುತ್ತಾರೆ, ಆದರೆ ಅಪರ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಅವರು ಸಹ ನಮ್ಮನ್ನು ಸಂಪರ್ಕಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ.
-ಸಾ.ರಾ.ಮಹೇಶ್‌, ಶಾಸಕರು.

ಕುದುರೆ ಮೇಲಿಂದ ಬಿದ್ದ ಕೆಂಪೇಗೌಡ ವೇಷಧಾರಿ: ನಾಡಪ್ರಭು ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕುದುರೆ ಸವಾರಿ ಮಾಡುತ್ತಿದ್ದ ಕೆಂಪೇಗೌಡ ವೇಷಧಾರಿ ಕೆಳಗೆ ಬಿದ್ದ ಘಟನೆ ನಡೆಯಿತು. ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಹಿನ್ನೆಲೆ ಆಯೋಜಿಸಿದ್ದ ಸಾಂಸ್ಕೃತಿಕ ಮೆರವಣಿಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟಿತ್ತು, ಮೆರವಣಿಗೆಯಲ್ಲಿ ತಮಟೆ, ನಗಾರಿ ಸೇರಿದಂತೆ ಇನ್ನಿತರ ವಾದ್ಯ ತಂಡಗಳು ಸಹ ಹೆಜ್ಜೆ ಹಾಕಿದವು. ಆದರೆ ಮೆರವಣಿಗೆ ನಗರದ ಕೆ.ಆರ್‌.ವೃತ್ತದ ಬಳಿ ಆಗಮಿಸಿದಾಗ ತಮಟೆ-ನಗಾರಿ ಸದ್ದಿಗೆ ಬೆಚ್ಚಿದ ಕುದುರೆ ರಂಪಾಟ ನಡೆಸಲಾರಂಭಿಸಿತು. ಇದರ ಪರಿಣಾಮ ಕುದುರೆ ಸವಾರಿ ಮಾಡುತ್ತಿದ್ದ ಕೆಂಪೇಗೌಡ ವೇಷಧಾರಿ ಕೆಳಗೆ ಬಿದ್ದರು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.

ಎಚ್‌ಡಿಕೆ ಮುಖ್ಯಮಂತ್ರಿಯಾಗಲಿ ಹೇಳಿಕೆಗೆ ಆಕ್ಷೇಪ
ಮೈಸೂರು: ಎಚ್‌.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯನ್ನಾಗಿಸಲು ನಾವೆಲ್ಲರೂ ಪಣತೊಡಬೇಕು ಎಂಬ ಶಾಸಕ ಜಿ.ಟಿ.ದೇವೇಗೌಡ ಅವರ ಹೇಳಿಕೆಗೆ ಕಾಂಗ್ರೆಸ್‌ ಜನಪ್ರತಿನಿಧಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಜಿಲ್ಲಾಡಳಿತದಿಂದ ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ನಾಡಪ್ರಭು ಕೆಂಪೇಗೌಡ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಮತ್ತು ಎಚ್‌.ಡಿ.ಕುಮಾರಸ್ವಾಮಿ ಉತ್ತಮ ಆಡಳಿತ ನೀಡಿದ್ದಾರೆ. ಹೀಗಾಗಿ ಮುಂದಿನ ಬಾರಿಗೂ ಎಚ್‌.ಡಿ.ಕುಮಾರಸ್ವಾಮಿರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಹೇಳಿದರು.

ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕರು ನೀಡಿದ ಹೇಳಿಕೆಗೆ ಸ್ಥಳದಲ್ಲಿದ್ದ ಕಾಂಗ್ರೆಸ್‌ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಶಾಸಕರ ಈ ಹೇಳಿಕೆಗೆ ಮೈಲ್ಯಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಪಾಲಿಕೆ ಸದಸ್ಯ ಪ್ರಶಾಂತ್‌ಗೌಡ, ಮಾಜಿ ಶಾಸಕ ಎಸ್‌.ಬಾಲರಾಜ್‌ ಆಕ್ಷೇಪಿಸಿದರು.

ಬಳಿಕ ಎಚ್ಚೆತ್ತ ಶಾಸಕ ಜಿ.ಟಿ.ದೇವೇಗೌಡ, ಮಾತನಾಡುವ ಭರದಲ್ಲಿ ನನ್ನಿಂದ ತಪ್ಪಾಗಿದ್ದು, ಗೊಂದಲ ಬೇಡ ಸಮಾಧಾನ ಮಾಡಿಕೊಳ್ಳಿ ತಪ್ಪಾಯಿತು. ಮುಂದಿನ ಬಾರಿಯೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಆದರೂ ಸಮಾಧಾನಗೊಳ್ಳದ ಮೈಲ್ಯಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌, ನಿಮ್ಮ ಹೇಳಿಕೆಗೆ ತಮ್ಮ ವಿರೋಧವಿದೆ ಎಂದರು. ಇದರಿಂದ ಆಕ್ರೋಶಗೊಂಡ ವೇದಿಕೆಯ ಮುಂದಿನ ಸಾಲಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ತಪ್ಪೇನು ಎನ್ನುವ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಪಾಲ್ಗೊಂಡಿದ್ದವರು ಜೋರಾಗಿ ಕೂಗಾಡಿದ ಪರಿಣಾಮ ಕೆಲಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಕುಣಿದು ಕುಪ್ಪಳಿಸಿದ ಶಾಸಕ, ಮೇಯರ್‌
ಮೈಸೂರು:
ತಮಟೆ ಸದ್ದಿಗೆ ಶಾಸಕ ಜಿ.ಟಿ.ದೇವೇಗೌಡ ಹಾಗೂ ಮೇಯರ್‌ ಎಂ.ಜೆ.ರವಿಕುಮಾರ್‌ ಕುಣಿದು ಕುಪ್ಪಳಿಸಿ ಮೆರವಣಿಗೆಗೆ ರಂಗುತುಂಬಿದರು.
ಮೆರವಣಿಗೆ ಆರಂಭದ ವೇಳೆ ಜಿಟಿಡಿ ತಮಟೆ ಸದ್ದಿಗೆ ಹೆಜ್ಜೆ ಹಾಕುವ ಇಂಗಿತ ವ್ಯಕ್ತಪಡಿಸಿದರಾದರೂ ಸುಮ್ಮನಾದುದನ್ನು ಕಂಡ ಪಾಲಿಕೆ ಸದಸ್ಯ ಸಂದೇಶ್‌ ಸ್ವಾಮಿ, ಜಿಟಿಡಿ ಅವರ ಕೈಹಿಡಿದು ಕರೆತಂದು ನೃತ್ಯ ಮಾಡುವಂತೆ ಒತ್ತಾಯಿಸಿದ್ದರಿಂದ ತಮಟೆ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕಿದರು. ಇದನ್ನು ಕಂಡ ಮೇಯರ್‌ ರವಿಕುಮಾರ್‌ ಸಹ ನೃತ್ಯ ಮಾಡಿದರು.

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.