ಕೇತುಪುರ ಪಿಎಸಿಸಿಎಸ್ ಮಾಜಿ ಕಾರ್ಯದರ್ಶಿ ಬಂಧನ
Team Udayavani, Mar 5, 2017, 12:16 PM IST
ಬನ್ನೂರು: ಪಟ್ಟಣದ ಸಮೀಪದ ಕೇತುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ನಾಗರಾಜುರವರನ್ನು 2010-11 ಹಾಗೂ 2011-12ನೇ ಸಾಲಿನಲ್ಲಿ ಸಂಘದ ಹಣ, ರೈತರ ಹಣ ಹಾಗೂ ದಾಸ್ತಾನು ಕೊರತೆ ಉಂಟು ಮಾಡಿರುವ ಆರೋಪದ ಮೇಲೆ ಬನ್ನೂರು ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಸಮೀಪದ ಕೇತುಪುರ ಗ್ರಾಮದ ಕೃಷಿಪತ್ತಿನ ಸಹಕಾರ ಸಂಘದಲ್ಲಿ ನಾಗರಾಜು ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸಂಘಕ್ಕೆ ಮೋಸ, ವಂಚನೆ, ನಂಬಿಕೆ ದ್ರೋಹ, ಸಂಘದಲ್ಲಿ ಪೋರ್ಜರಿ ವ್ಯವಹಾರ ನಡೆಸಿರುವುದು ಕಂಡುಬಂದಿತ್ತು.
ಜೊತೆಗೆ ರೈತರ ಹೆಸರಿನಲ್ಲಿ ಸಾಲ ಪಡೆದು ವಂಚನೆ ಮಾಡಿರುವ ಹಿನ್ನೆಲೆ ಯಲ್ಲಿ ನಾಗರಾಜುರನ್ನು ಸಂಘದಿಂದ ಅಮಾನತ್ತು ಮಾಡಿ, ವಿಚಾರಣೆ ನಡೆಸಲಾಗಿತ್ತು. ಲೆಕ್ಕಪರಿಶೋಧನೆಯಲ್ಲಿ 33,99,727.51 ರೂ. ದುರುಪ ಯೋಗವಾಗಿರುವುದು ತಿಳಿದುಬಂದಿತ್ತು.
ಈ ಹಿನ್ನೆಲೆಯಲ್ಲಿ ನಾಗರಾಜು ರನ್ನು ಸೇವೆಯಿಂದ ವಜಾಗೊಳಿಸಿ ಆಡಳಿತ ಮಂಡಳಿಯವರು ಬನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ದಂತೆ ಬನ್ನೂರು ಪೊಲೀಸರು ನಾಗರಾಜುರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.