“ಕೊಲ್ಲುವ’ ಕೊರೊನಾ ವೈರಸ್‌: ಜಿಲ್ಲಾದ್ಯಂತ ಕಟ್ಟೆಚ್ಚರ


Team Udayavani, Feb 1, 2020, 3:00 AM IST

kolluva

ಮೈಸೂರು: ಜಗತ್ತಿನಾದ್ಯಂತ ಆತಂಕ ಹುಟ್ಟಿಸಿರುವ ಕೊರೊನಾ ವೈರಸ್‌ ದೇಶಕ್ಕೂ ಕಾಲಿಟ್ಟಿದ್ದು, ಈ ಸಂಬಂಧ ಜಿಲ್ಲಾದ್ಯಂತ‌ ಕಟ್ಟೆಚ್ಚರ ವಹಿಸಲಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು.

ಕೇರಳದ ವಿದ್ಯಾರ್ಥಿನಿ ಸೋಂಕಿನಿಂದ ಬಳಲುತ್ತಿರುವುದು ದೃಢಪಟ್ಟಿದೆ. ಆದರೆ, ನಮ್ಮ ರಾಜ್ಯದಲ್ಲಿ ಎಲ್ಲಿಯೂ ಕೊರೊನಾ ವೈರಸ್‌ ಪತ್ತೆಯಾಗಿಲ್ಲ. ಈ ಸಂಬಂಧ ಜಿಲ್ಲಾದ್ಯಂತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಳೆದ ಒಂದೂವರೆ ತಿಂಗಳಿಂದ ಚೀನಾ ಭಾಗದಿಂದ ಜಿಲ್ಲೆಗೆ ಬಂದವರಲ್ಲಿಯೂ ವೈರಸ್‌ ಸೋಂಕು ಇರುವ ಸಂಶಯದ ಹಿನ್ನೆಲೆಯಲ್ಲಿ ಅಂತಹವರನ್ನು ಗುರುತಿಸಿ ಪರೀಕ್ಷಿಸುವ ಕೆಲಸವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಡಲಾಗುತ್ತಿದೆ. ಚೀನಾದೊಂದಿಗೆ ಒಂದೂವರೆ ತಿಂಗಳಿಂದ ಸಂಪರ್ಕದಲ್ಲಿರುವ ಜಿಲ್ಲೆಯ ಸಾರ್ವಜನಿಕರ ಮೇಲೂ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಹೇಳಿದರು.

ಕೇರಳದಲ್ಲಿ ಒಬ್ಬರಲ್ಲಿ ಮಾತ್ರವೇ ಕಂಡು ಬಂದಿದ್ದು, ಅದನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ. ಹೀಗಾಗಿ ಆ ಭಾಗದಿಂದ ಬರುವವರನ್ನು ತಡೆಯುವುದು ಅಥವಾ ಪರೀಕ್ಷಿಸಲು ಬರುವುದಿಲ್ಲ. ಹಾಗೊಂದು ವೇಳೆ ವೈರಸ್‌ ಅಲ್ಲಿ ಹರಡಿದರೆ ಮುನ್ನೆಚ್ಚರಿಕೆ ಕ್ರಮವಹಿಸಲಾಗುವುದು. ಉಳಿದಂತೆ ಚೀನಾಗೆ ಪ್ರಯಾಣ ಬೆಳೆಸದಂತೆ ಎಚ್ಚರವಹಿಸಲಾಗುವುದು. ಒಂದು ತಿಂಗಳಿಂದ ಚೀನಾದಿಂದ ಮೈಸೂರಿಗೆ ಮರಳಿರುವವರನ್ನು ಗುರುತಿಸಿ ಅಗತ್ಯ ಬಿದ್ದರೆ ಪರೀಕ್ಷಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸ್ಥಾಪನೆ: ಚೀನಾದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲು ಈಗಾಗಲೇ ವಿಮಾನ ನಿಲ್ದಾಣ, ಕೆಎಸ್‌ಆರ್‌ಟಿಸಿ, ಹೋಟೆಲ್‌ ಮಾಲೀಕರೊಂದಿಗೂ ಚೀನಾ ಪ್ರವಾಸಿಗರ ಸಂಖ್ಯೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಮುಂದೆಯೂ ಚೀನಾದಿಂದ ಬರುವವರಲ್ಲಿಯೂ ಸೋಂಕು ಇರುವ ಬಗ್ಗೆ ಪರೀಕ್ಷಿಸಲು ವಿಮಾನ ನಿಲ್ದಾಣದಲ್ಲಿ ಪ್ರಮುಖ ಪ್ರವಾಸಿ ತಾಣಗಳಾದ ಅರಮನೆ, ಮೃಗಾಲಯಗಳಲ್ಲಿಯೂ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಒಂದು ಕೇಂದ್ರವನ್ನೇ ತೆರೆಯಲು ನಿರ್ಧರಿಸಲಾಗಿದೆ. ಈ ಸಂಬಂಧ ಜಿಲ್ಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಎಲ್ಲಾ ಆಸ್ಪತ್ರೆಗೂ ಸೂಚನೆ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮಾತನಾಡಿ, ಕೊರೊನಾ ವೈರಸ್‌ ಬಗ್ಗೆ ಈಗಾಗಲೇ ಜಿಲ್ಲಾದ್ಯಂತ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಜತೆಗೆ ವೈರಸ್‌ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಪ್ರಮುಖ ಪ್ರವಾಸಿ ತಾಣಗಳಲ್ಲಿಯೂ ಎಚ್ಚರಿಕೆವಹಿಸಲಾಗಿದೆ.

ಸಾರ್ವಜನಿಕರು ಸಹ ಕಾಯಿಲೆ ಬರುವ ಮುನ್ನವೇ ಎಚ್ಚರಿಕೆ ವಹಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಸುತ್ತಲಿನ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳುವುದು. ವೈಯುಕ್ತಿಕ ಸ್ವತ್ಛತೆ ಕಾಪಾಡುವುದು. ಕೆಮ್ಮುವಾಗ ಸೀನುವಾಗ ಮಾಸ್ಕ್ ಅಥವಾ ಕೈ ವಸ್ತ್ರ ಬಳಸುವುದು. ಉಸಿರಾಟ ತೊಂದರೆಯಾದರಲ್ಲಿ ಕಡ್ಡಾಯವಾಗಿ ವೈದರ ತಪಾಸಣೆ ಮಾಡಿಸುವುದು. ಮಾಂಸ ಆಹಾರ ಸೇವಿಸುವಾಗ ಚೆನ್ನಾಗಿ ಬೇಯಿಸಿ ತಿನ್ನುವುದು ಮಾಡಬೇಕು ಎಂದು ಹೇಳಿದರು.

ಸಾಮಾನ್ಯ ಜ್ವರ, ನೆಗಡಿ, ಕೆಮ್ಮು ಸಂಬಂಧ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೊರೊನಾ ವೈರಸ್‌ ಭಯ ಹುಟ್ಟಿಸುವ ವೈದ್ಯರ ಹಾಗೂ ಆಸ್ಪತ್ರೆಯ ವಿರುದ್ಧ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಲಿದೆ. ಒಂದು ವೇಳೆ ಯಾವುದೇ ರೋಗಿಯಲ್ಲಿ ಕರೊನಾ ವೈರಸ್‌ ಲಕ್ಷಣ ಕಂಡು ಬಂದರೆ ನಮಗೆ ತಿಳಿಸಬೇಕು. ನಾವು ಖಚಿತ ಪಡಿಸಿದ ಬಳಿಕವಷ್ಟೇ ಈ ವಿಷಯವನ್ನು ಬಹಿರಂಗಗೊಳಿಸಬೇಕು.

ಖಾಸಗಿ ವೈದ್ಯರು ಅಥವಾ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆಶ್ರಿತ ರೋಗನಿರ್ವಾಹಕ ಅಧಿಕಾರಿ ಡಾ.ಪಿ.ಚಿದಂಬರಂ, ಜಿಲ್ಲಾ ಆರೋಗ್ಯ ಸವೇಕ್ಷಣಾಧಿಕಾರಿ ಟಿ.ಶಿವಪ್ರಸಾದ್‌, ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಡಾ.ಮಂಜುನಾಥ್‌ ಇದ್ದರು.

ಕೊರೊನಾ ಸೋಂಕು ಲಕ್ಷಣಗಳು: ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟ ತೊಂದರೆ, ಭೇದಿ ಒಂದು ತಿಂಗಳಿಗೂ ಹೆಚ್ಚಿನ ಕಾಲ ಇದ್ದರೆ ಕೊರೊನಾ ಸೋಂಕು ಲಕ್ಷಣವಾಗಿದೆ. ಇಂತಹ ಲಕ್ಷಣಗಳಿರುವ ರೋಗಿಗಳನ್ನು ರಕ್ತ ಪರೀಕ್ಷೆಗೆ ಒಳ ಪಡಿಸಿದ ಬಳಿಕವಷ್ಟೇ ವೈರಸ್‌ ಇರುವ ಬಗ್ಗೆ ಖಚಿತವಾಗಿ ಹೇಳಬಹುದು. ಚಿಕೂನ್‌ಗುನ್ಯಾ, ನಿಫಾ ಮಾದರಿಯ ಸೋಂಕಿನ ಕಾಯಿಲೆ ಇದಾಗಿರುವುದರಿಂದ ಅವುಗಳಿಗೆ ಅನುಸರಿಸಿದ ಮುಂಜಾಗ್ರತಾ ಕ್ರಮಗಳ ಮೂಲಕವೇ ರೋಗವನ್ನು ಬಾರದಂತೆ ನಿಯಂತ್ರಿಸಬಹುದಾಗಿದೆ ಎಂದು ಡಾ.ವೆಂಕಟೇಶ್‌ ತಿಳಿಸಿದರು.  ಸಾರ್ವಜನಿಕರು ಸಹಾಯವಾಣಿ 104 ಅಥವಾ ದೂ.080-2228541,22374658 ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ಹೀಗೆ ಮಾಡಿ
1.ಶಂಕಿತ ರೋಗಿಯ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್‌ ಲೇಯರ್‌ ಮಾಸ್ಕ್ ಬಳಸುವುದು
2.ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು
3.ಆಗ್ಗಾಗೆ ಕೈಗಳನ್ನು ಚೆನ್ನಾಗಿ ತೊಳೆದುಕೊಂಡು ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಬೇಕು
4.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು
5.ಕೆಮ್ಮು ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿದುಕೊಳ್ಳಬೇಕು
6.ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುವುದು
7.ಕೆಮ್ಮುವಾಗ ಮತ್ತು ಸೀನುವಾಗ ಬಾಯಿಯನ್ನು ಮುಚ್ಚಿಕೊಳ್ಳಬೇಕು
8.ಅನಾರೋಗ್ಯದಿಂದಿರುವ ಅಥವಾ ಕೆಮ್ಮು ಮತ್ತು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದ ಬಾರದು
9.ಅಸುರಕ್ಷಿತವಲ್ಲದ ಕಾಡುಪ್ರಾಣಿ ಅಥವಾ ಸಾಕು ಪ್ರಾಣಿಗಳನ್ನು ಮುಟ್ಟಬೇಡಿ
10.ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚೆನ್ನಾಗಿ ಬೇಯಿಸಿ ಸೇವನೆ ಮಾಡಬೇಕು
11.ಮಾಸ್ಕ್ ಧರಿಸುವ ಅಭ್ಯಾಸ ಮಾಡಿಕೊಳ್ಳಬೇಕು

ಕೊರೊನಾ ಹರಡುವ ರೀತಿ
1.ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ
2.ಸೋಂಕಿತ ವ್ಯಕ್ತಿ ಜತೆ ನಿಕಟ ಸಂಪರ್ಕದಲ್ಲಿರುವಾಗ
3.ಸೋಂಕಿತ ವ್ಯಕ್ತಿಯ ಮುಟ್ಟಿದಾಗ
4.ಸೋಂಕಿತ ವ್ಯಕ್ತಿಯ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಒಳಸಿದಾಗ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.