ಪುಸ್ತಕಗಳಿಂದ ಜ್ಞಾನ, ಕಲ್ಪನಾಶಕ್ತಿ ವೃದ್ಧಿ
Team Udayavani, Apr 24, 2019, 3:02 AM IST
ಹುಣಸೂರು: ಪುಸ್ತಕ ವ್ಯಕ್ತಿಯ ಜ್ಞಾನ ವೃದ್ಧಿಸಲು ಹಾಗೂ ಮನೋವಿಕಾಸಕ್ಕೆ ಪೂರಕವಾಗಿದೆ ಎಂದು ನಗರಸಭೆ ಪೌರಾಯುಕ್ತೆ ವಾಣಿ ವಿ.ಆಳ್ವ ತಿಳಿಸಿದರು.
ನಗರದ ಗ್ರಂಥಾಲಯದಲ್ಲಿ ಆಯೋಜಿಸಿದ್ದ ವಿಶ್ವ ಪುಸ್ತಕ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪುಸ್ತಕಗಳು ನಮ್ಮ ಕಲ್ಪನಾಶಕ್ತಿಯನ್ನು ಹೆಚ್ಚಿಸಲಿವೆ.
ನಮಗೆ ಪರಿಚಯವಿಲ್ಲದ ಪ್ರಪಂಚವನ್ನು, ಅದರ ಸಂಸ್ಕೃತಿ, ಜನಜೀವನ ಪರಿಚಯಿಸಲಿವೆ. ಜೊತೆಗೆ ನಮ್ಮ ಚರಿತ್ರೆಯನ್ನು ಮುಂದಿನ ಪೀಳಿಗೆಗೂ ತಿಳಿಸಿ ಕೊಡಲಿವೆ. ನಿರಂತರ ಓದಿನಿಂದ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದರು.
ಪುಸ್ತಕ ಲಭ್ಯ: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವ್ಯಾಟ್ಸಾಪ್, ಫೇಸ್‌ಬುಕ್, ಟೀವಿಗಳ ವ್ಯಾಮೋಹದಿಂದ ಪುಸ್ತಕ ಓದುಗರ ಸಂಖ್ಯೆ ಕ್ಷೀಣಿಸಿದೆ. ಯುವ ಪೀಳಿಗೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಜ್ಞಾನಾರ್ಜನೆಗೆ ಉಪಯುಕ್ತವಾಗಲಿದೆ.
ಇಲ್ಲಿನ ಗ್ರಂಥಾಲಯದಲ್ಲಿ ಎಲ್ಲಾ ಬಗೆಯ ಪುಸ್ತಕಗಳು ಲಭ್ಯವಿದ್ದು, ಸದುಪಯೋಗ ಪಡೆಯಬೇಕು ಎಂದು ಕೋರಿದರು. ಗ್ರಂಥಾಲಯ ಅಧಿಕಾರಿ ಸತೀಶ್, ವಿಶ್ವ ಪುಸ್ತಕ ದಿನಾಚರಣೆ ಕುರಿತು ಮಾಹಿತಿ ನೀಡಿ ಈ ದಿನವನ್ನು ಕೃತಿ ಸ್ವಾಮ್ಯದಿನ, ಅಂತಾರಾಷ್ಟ್ರೀಯ ಪುಸ್ತಕದಿನವೆಂದು ಕರೆಯಲಾಗುತ್ತದೆ.
ಆರಂಭದಲ್ಲಿ ವೆಲೆನ್ಸಿಯಾದ ಬರಹಗಾರ ವಿಸೆಟ್ ಕ್ಲವೆಲ್ ಆಂಡೂ ಅವರ ಜನ್ಮದಿನ ಆ.7 ರಂದು ಆಚರಿಸಲಾಯಿತು. ಬಳಿಕ ಅವರು ಮರಣ ಹೊಂದಿದ ಏ.23 ರಂದು ವಿಶ್ವ ಪುಸ್ತಕದಿನವೆಂದು ನಿಗದಿಯಾಯಿತು.
ಅಲ್ಲದೇ ಏ.23 ರಂದು ವಿಲಿಯಂ ಶೇಕ್ಸ್‌ಪಿಯರ್ ಮರಣ ಹೊಂದಿದ ದಿನವಾಗಿದೆ. ಸಾಕಷ್ಟು ಬರಹಗಾರರ ಜನ್ಮದಿನವೂ ಇದೇ ಆಗಿದ್ದನ್ನು ಗಮನಿಸಿ, ವಿಶ್ವ ಸಂಸ್ಥೆಯು ಶೈಕ್ಷಣಿಕ, ವೈಜ್ಞಾನಿಕ, ಮತ್ತು ಸಾಂಸ್ಕೃತಿಕ ಸಂಘಟನೆ(ಯುನೆಸ್ಕೋ)ವತಿಯಿಂದ 1995 ಏ.23ರಂದು ಮೊದಲಬಾರಿಗೆ ಆಚರಿಸಿದ್ದಲ್ಲದೇ, ಘೋಷಿಸಿತು.
ಕಾರ್ಯಕ್ರಮದಲ್ಲಿ ನಗರಸಭೆ ಎಇಇ ಮಂಜುನಾಥ್, ಪರಿಸರ ಎಂಜಿನಿಯರ್ ರೂಪಾ, ಎಂಜಿನಿಯರ್ ಅನುಪಮ, ಗ್ರಂಥಾಲಯ ಸಿಬ್ಬಂದಿ ಸರಸ್ವತಿ, ಸಂದೇಶ್, ಹಿರಿಯ ಓದುಗ ಅರಸ್, ರಾಘು ಸೇರಿದಂತೆ ಅನೇಕ ಓದುಗರು ಉಪಸ್ಥಿತರಿದ್ದರು.
ಗ್ರಂಥಾಲಯ ಸದಸ್ಯತ್ವ ಪಡೆಯಿರಿ: ನಮ್ಮ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು, ಗೃಹಿಣಿಯರು, ಮಕ್ಕಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಿರುವವರಿಗೂ ಪುಸ್ತಕಗಳು, ನಿಯತಕಾಲಿಕೆಗಳು, ದಿನಪತ್ರಿಕೆಗಳು, ಸರಕಾರಿ ಗೆಜೆಟ್ ಸೇರಿದಂತೆ ಉಪಯುಕ್ತ ಪುಸ್ತಕಗಳು ಲಭ್ಯವಿದ್ದು, ಗ್ರಂಥಾಲಯದ ಸದಸ್ಯತ್ವ ಪಡೆಯುವ ಮೂಲಕ ಇತರರಿಗೂ ನೆರವಾಗಿರೆಂದು ಗ್ರಂಥಾಲಯ ಅಧಿಕಾರಿ ಸತೀಶ್ ಮನವಿ ಮಾಡಿದರು.
ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಈ ದಿನವನ್ನು ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಆಚರಿಸುತ್ತಾರೆ. ಹಲವೆಡೆ ಶಾಲಾ ಮಕ್ಕಳಿಗೆ ಅನೇಕ ಚಟುವಟಿಕೆಗಳನ್ನು ಏರ್ಪಡಿಸಿ, ಬಹುಮಾನವಾಗಿ ಉಚಿತ ಪುಸ್ತಕ ನೀಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.