ಬಿಎಸ್ ಪಿ ನನಗೆ ತಾಯಿಯಂತೆ, ತಾಯಿಯಿಂದಲೇ ನನಗೆ ಮೋಸವಾಗಿದೆ: ಎನ್.ಮಹೇಶ್
Team Udayavani, Aug 6, 2021, 11:56 AM IST
ಮೈಸೂರು: ಬಿಎಸ್‌ಪಿ ನನ್ನ ತಾಯಿಯೆಂದು ಹೇಳಿದ್ದೆ. ಆದರೆ ತಾಯಿಯಿಂದಲೇ ನನಗೆ ಮೋಸವಾಗಿದೆ ಎಂದು ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು? ಮಗ ಅನಾಥನಾಗಿದ್ದ, ಹೀಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ ಎಂದರು.
ನನ್ನನ್ನು ಟ್ರೋಲ್ ಮಾಡುತ್ತಿರುವವರು ಯಾರು ಎಂದು ನನಗೆ ಗೊತ್ತಿದೆ. ಬಿಎಸ್‌ಪಿ ಗೆಳೆಯರಿಗೆ ನಾನು ಹೇಳುವುದಿಷ್ಟೆ, ನನ್ನನ್ನು ಟ್ರೋಲ್ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನು ಬಿಎಸ್‌ಪಿ ಪಕ್ಷ ಕಟ್ಟಲು ಬಳಸಿ. ನನ್ನನ್ನು ಟ್ರೋಲ್ ಮಾಡುತ್ತಿರುವವರಿಗೆ ಮಲೆ ಮಹದೇಶ್ವರ ಸ್ವಾಮಿ ಒಳೆಯದು ಮಾಡಲಿ ಎಂದು ಹೇಳಿದರು.
ಇದನ್ನೂ ಓದಿ:ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್
ಅವತ್ತಿನ ರಾಜಕೀಯ ಸಂದರ್ಭಕ್ಕೆ ಹೇಳಿದ ಮಾತನ್ನು ಇವತ್ತಿನ ನೆಲೆಯಲ್ಲಿ ನಿಂತು ನೋಡಬಾರದು. ಹೋರಾಟಗಳ ವೇಳೆ ಹೇಳಿದ ಮಾತೇ ಬೇರೆ. ಆ ಮಾತುಗಳು ಅಧಿಕಾರದ ಸ್ಥಾನಕ್ಕೆ ಬಂದಾಗ ನಡೆಯಲ್ಲವೆಂದು ಅರ್ಥವಾಗಿದೆ ಎಂದು ಮಹೇಶ್ ಹೇಳಿದರು.
ಕಾಂಗ್ರೆಸ್ ನಲ್ಲಿ ಸ್ಥಾನಗಳು ಇಲ್ಲ. ನನಗೆ ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಹೀಗಾಗಿ ಬಿಜೆಪಿ ಸೇರಿದ್ದೇನೆ. ಎಲ್ಲ ಸಮುದಾಯದವರೂ ವೋಟ್ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನ ಚಿಂತನೆ, ಆಲೋಚನೆ, ಬದ್ಧತೆಯನ್ನು ಎಲ್ಲಿಗೆ ಹೋದರೂ ನಾನು ಉಳಿಸಿಕೊಳ್ಳುತ್ತೇನೆ. ಆದ್ದರಿಂದ ಬಿಜೆಪಿಗೆ ಸೇರಿರುವುದರಿಂದ ಸಮಸ್ಯೆವಾಗದು ಎಂದು ಶಾಸಕ ಎನ್.ಮಹೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.