ನಿವೃತ್ತಿ ವೇತನ ಪರಿಷ್ಕರಣೆಗೆ ಕೆಪಿಟಿಸಿಎಲ್‌ ಮೀನಾಮೇಷ


Team Udayavani, Jun 11, 2017, 3:45 AM IST

KPTCL.jpg

ಮೈಸೂರು: ಮೂವತ್ತು ವರ್ಷಗಳಿಗೂ ಹೆಚ್ಚು ಕಾಲ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಾವಿರಾರು ನೌಕರರಿಗೆ ಅವರ ಜೀವನದ ಸಂಧ್ಯಾಕಾಲದಲ್ಲಿ ಸಮರ್ಪಕ ಪಿಂಚಣಿ ನೀಡಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ಮೀನಾ ಮೇಷ ಎಣಿಸುತ್ತಿದೆ.

ಕೆಪಿಟಿಸಿಎಲ್‌ ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯಿಂದಾಗಿ ರಾಜಾÂದ್ಯಂತ ಸಿ ಮತ್ತು ಡಿ ದರ್ಜೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸುಮಾರು 2,170 ನೌಕರರು ದುಬಾರಿಯ ಈ ದಿನಗಳಲ್ಲಿ ಪರಿಷ್ಕೃತ ಪಿಂಚಣಿ ದೊರೆಯದೆ ಜೀವನ ಸಾಗಿಸಲು ಪರಿತಪಿಸುವಂತಾಗಿದೆ.

ಪೂರ್ವಾನ್ವಯವಾಗಿಲ್ಲ: ನಿವೃತ್ತಿ ವೇತನ ಪರಿಷ್ಕರಣೆ ಮಾಡುವಂತೆ 2012ರ ಮೇ3ರಂದು ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಅದೇ ವರ್ಷ ಜುಲೈ 10ರಂದು ಕೆಪಿಟಿಸಿಎಲ್‌ ಪರಿಷ್ಕರಣೆ ಮಾಡಿದೆ. ಆದರೆ, ಈ ಆದೇಶ 2010ರ ಏಪ್ರಿಲ್‌ 1 ರಿಂದ 2012ರ ಮಾರ್ಚ್‌ 31ರ ನಡುವೆ ನಿವೃತ್ತರಾದ ನೌಕರರಿಗೆ ಅನ್ವಯವಾಗಿಲ್ಲ.

2016ರ ಸೆಪ್ಟೆಂಬರ್‌ 14ರಂದು ಮಾರ್ಪಾಡು ಮಾಡಿದ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕಾರ 2016ರ
ಜನವರಿ 1ರಿಂದ ಕೆಪಿಟಿಸಿಎಲ್‌ 39,610 ರೂ. ಮೂಲ ವೇತನ ಪಡೆಯುತ್ತಿದ್ದವರಿಗೆ ಹಾಗೂ ಗರಿಷ್ಠ 19,950 ರೂ. ನಿವೃತ್ತಿ ವೇತನ ಪಡೆಯುತ್ತಿರುವವರಿಗೆ ಮಾತ್ರ ಪರಿಷ್ಕೃತ ಪಿಂಚಣಿ ಮತ್ತು ಕುಟುಂಬ ಪಿಂಚಣಿ ನೀಡಿ ಎಂದು ಆದೇಶ ಹೊರಡಿಸಲಾಗಿದೆ. ಈ ಪ್ರಕಾರ ಕೆಪಿಟಿಸಿಎಲ್‌ನ ಈ ತೀರ್ಮಾನ 39,610 ರೂ.ಗಳಿಗಿಂತ ಕಡಿಮೆ ವೇತನ ಪಡೆಯುತ್ತಿದ್ದ ನಿವೃತ್ತ ನೌಕರರಿಗೆ ಪಿಂಚಣಿ ಹೆಚ್ಚು ಮಾಡಲು ಬರುವುದಿಲ್ಲ ಎನ್ನುತ್ತಿದೆ ಕೆಪಿಟಿಸಿಎಲ್‌.

ಇದರಿಂದಾಗಿ ಎ ಮತ್ತು ಬಿ ದರ್ಜೆಯ ಅಧಿಕಾರಿ ವರ್ಗದವರು ನಿವೃತ್ತಿ ನಂತರವೂ ಹೆಚ್ಚಿನ ಪಿಂಚಣಿ ಪಡೆಯುತ್ತಿದ್ದಾರೆ. ಆದರೆ,ಕೆಳ ಹಂತದಲ್ಲಿ ಕೆಲಸ ಮಾಡಿದ “ಸಿ’ ಮತ್ತು “ಡಿ’ ದರ್ಜೆಯ ನೌಕರರಿಗೆ ಸರ್ಕಾರದ ಪರಿಷ್ಕೃತ ಆದೇಶದಂತೆ ಹೆಚ್ಚಿನ ಪಿಂಚಣಿ ದೊರೆಯುತ್ತಿಲ್ಲ. 

ಸರ್ಕಾರದ ಆದೇಶ ಪಾಲಿಸಿಲ್ಲ: ಈ ಬಗ್ಗೆ ನಿವೃತ್ತ ನೌಕರರು 2013ರಲ್ಲಿ ಸರ್ಕಾರ ಹಾಗೂ ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ 39,610 ರೂ.ಗಳಿಗಿಂತ ಕಡಿಮೆ ಮೂಲ ವೇತನ ಪಡೆಯುತ್ತಿದ್ದ ಎಲ್ಲ ಸಂಬಳದಾರರಿಗೂ ಪರಿಷ್ಕೃತ ನಿವೃತ್ತಿ ಮತ್ತು ಕುಟುಂಬ ವೇತನ ಕನಿಷ್ಠ 4,800 ಹಾಗೂ ಗರಿಷ್ಠ 39, 900 ರೂ. ನೀಡುವಂತೆ ಸರ್ಕಾರ ಆದೇಶ ಹೊರಡಿಸಿದರೂ ಕೆಪಿಟಿಸಿಎಲ್‌ ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ.

ಸಿಎಂ ಕಚೇರಿ ಸೂಚನೆಗೂ ನಿರ್ಲಕ್ಷ್ಯ
ನಿವೃತ್ತಿ ವೇತನವನ್ನೇ ನಂಬಿಕೊಂಡು ಜೀವನ ಸಾಗಿಸಲು ಹೆಣಗುತ್ತಿರುವ ನಿವೃತ್ತ ನೌಕರರು ನಮ್ಮ ಪಿಂಚಣಿ ಪರಿಷ್ಕರಣೆ ಮಾಡಿಕೊಡಿ ಎಂದು 2016ರ ನವೆಂಬರ್‌ 17ರಂದು ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಅಧೀನ ಕಾರ್ಯದರ್ಶಿ ಅರುಣ್‌ ಫ‌ುರ್ಟಾಡೋ ಅವರು 2017ರ ಜನವರಿ 31ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ ಇವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಕಚೇರಿಯಿಂದಲೇ ಹೋದ ಪತ್ರಕ್ಕೂ ಕಳೆದ ನಾಲ್ಕು ತಿಂಗಳಿಂದ ಯಾವುದೇ ಕ್ರಮ ಕೈಗೊಳ್ಳದೆ ಕೆಪಿಟಿಸಿಎಲ್‌ ಆಡಳಿತ ಮಂಡಳಿ ನಿವೃತ್ತ ನೌಕರರನ್ನು ಸತಾಯಿಸುತ್ತಿದೆ.

ತಡವಾಗಿ ನಿವೃತ್ತರಾದವರಿಗೆ ಹೆಚ್ಚಿನ ನಿವೃತ್ತಿ ವೇತನ ದೊರೆಯುತ್ತಿಲ್ಲ ಎಂಬ ದೂರುಗಳು ಇರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ. ರಾಜಾÂದ್ಯಂತ ಈ ಅವಧಿಯಲ್ಲಿ ನಿವೃತ್ತರಾದ ಎಷ್ಟು ಜನ ಉದ್ಯೋಗಿಗಳಿದ್ದಾರೆ ಎಂಬು ದನ್ನುಪರಿಶೀಲಿಸಿ, ಸಮಸ್ಯೆ ಬಗೆಹರಿಸುತ್ತೇವೆ.
– ಎಂ.ರಾಮಕೃಷ್ಣ,
ನಿರ್ದೇಶಕರು, ಕೆಪಿಟಿಸಿಎಲ್‌

– ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.