ಕೆ.ಆರ್.ನಗರ: ಎಲ್ಲೆಲ್ಲೂ ಮತ ಲೆಕ್ಕಾಚಾರ
Team Udayavani, Apr 22, 2019, 3:00 AM IST
ಕೆ.ಆರ್.ನಗರ: ಬೇಸಿಗೆಯ ಬಿರು ಬಿಸಿಲಿಗಿಂತ ಹೆಚ್ಚು ಕಾವು ಪಡೆದುಕೊಂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮತದಾನದ ನಂತರ ಸೋಲು ಗೆಲುವಿನ ಲೆಕ್ಕಾಚಾರ ಮತ್ತು ಬಾಜಿ ರಾಜಕೀಯ ಬಿರುಸಿನಿಂದ ನಡೆಯುತ್ತಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿರುವ ಕ್ಷೇತದಲ್ಲಿ ಯಾರು ಗೆಲ್ಲುತ್ತಾರೆ?, ಕೆ.ಆರ್.ನಗರದಲ್ಲಿ ಎಷ್ಟು ಮತಗಳ ಮುನ್ನಡೆ ಪಡೆಯುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿವೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಕಾರ್ಯಗಳು ಮತ್ತು ಕ್ಷೇತ್ರದ ಶಾಸಕರೂ ಆಗಿರುವ ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಜನಪರವಾದ ಕೆಲಸಗಳು ಜೆಡಿಎಸ್‌ಗೆ ಆಸರೆಯಾಗಿದ್ದರೆ, ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಕಾಂಗ್ರೆಸ್ ಮತಗಳು, ಅಂಬರೀಶ್, ದರ್ಶನ್, ಯಶ್ ಅಭಿಮಾನಿಗಳು ಹಾಗೂ ಮಹಿಳಾ ಮತದಾರರನ್ನು ನೆಚ್ಚಿಕೊಂಡಿದ್ದಾರೆ.
ಚುನಾವಣೆ ಘೋಷಣೆಯಾದ ಆರಂಭದಲ್ಲಿ ಸ್ವಲ್ಪ ಹಿಂದಿದ್ದ ಜೆಡಿಎಸ್ ಪಕ್ಷ ಮತದಾನಕ್ಕೆ ಎರಡು ದಿನ ಬಾಕಿ ಇರುವಂತೆ ಕಾಂಚಾಣದ ಸದ್ದು ಮಾಡಿದ್ದರಿಂದ ಮೋಲ್ನೋಟಕ್ಕೆ ಸುಮಲತಾ ಅವರಿಗಿಂತ ಹೆಚ್ಚು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ಸಾಧ್ಯತೆ ಕಾಣುತ್ತಿದೆ.
ನಿಖಿಲ್‌ಕುಮಾರಸ್ವಾಮಿಗೆ ಕ್ಷೇತ್ರದಲ್ಲಿ ಹೆಚ್ಚು ಮತ ಕೊಡಿಸಬೇಕು ಎಂದು ಸಚಿವ ಸಾ.ರಾ.ಮಹೇಶ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಕೆಲಸ ಮಾಡಿರುವುದು ಅವರಿಗೆ ವರದಾನವಾಗಲಿದ್ದು, ಇದರ ಜತೆಗೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಿರುವುದು ಗಮನಾರ್ಹ.
ಸುಮಲತಾ ಪರವಾಗಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ ಮತ್ತು ಅವರ ಬೆಂಬಲಿಗರ ಪಡೆ ಹಗಲಿರುಳು ದುಡಿದಿದ್ದು, ಜೆಡಿಎಸ್ ಪಕ್ಷಕ್ಕಿಂತ ಹೆಚ್ಚು ಮತ ಪಡೆಯುವ ಉಮೇದಿಯಲ್ಲಿದ್ದಾರೆ. ಇದರ ಜತೆಗೆ ಅವರಿಗೆ ಮಹಿಳೆಯರ ಮತಗಳು ಹೆಚ್ಚಾಗಿ ಬಂದಿವೆ ಎಂಬ ನಿರೀಕ್ಷೆ ಇದೆ.
ಬೆಟ್ಟಿಂಗ್ ಭರಾಟೆ: ನಿಖಿಲ್‌ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ನಡುವೆ ಯಾರು ಗೆಲ್ಲುತ್ತಾರೆ ಮತ್ತು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಲೀಡ್ ಪಡೆಯವವರಾರು ಎಂದು ಅಲ್ಲಲ್ಲಿ ಚರ್ಚೆ ನಡೆಯುತ್ತಿರುವುದರೊಟ್ಟಿಗೆ ಸಣ್ಣ ಪುಟ್ಟದಾಗಿ ಬಾಜಿ ನಡೆಯುತ್ತಿದ್ದು ಮೇ 23ರೊಳಗೆ ಮತ್ತಷ್ಟು ಬಾಜಿ ಹೆಚ್ಚಾಗಿ ನಡೆಯುವ ಸಾಧ್ಯತೆ ಇದೆ.
ಫಲಿತಾಂಶದ್ದೇ ಚರ್ಚೆ: ತಾಲೂಕಿನಾದ್ಯಂತ ಈಗ ಟೀ ಅಂಗಡಿ, ಹೋಟೆಲ್, ಸಾರ್ವಜನಿಕ ಸ್ಥಳಗಳು ಮತ್ತು ಹಳ್ಳಿಗಳ ಅರಳಿ ಕಟ್ಟೆಗಳ ಮೇಲೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಭವನೀಯ ಫಲಿತಾಂಶದ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ.
ಮತದಾನದ ವಿವರ: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,222 ಮಂದಿ ಮತದಾರರಿದ್ದು, ಈ ಪೈಕಿ 1,63,547 ಮಂದಿ ಮತ ಚಲಾಯಿಸಿದ್ದು, ಶೇ.79.31ರಷ್ಟು ಮತದಾನವಾಗಿದೆ. ಅದರಲ್ಲಿ 82,716 ಪುರುಷರು, 80,829 ಮಹಿಳಾ ಮತದಾರರು. ಇದು ಕಳೆದ ಲೋಕಸಭಾ ಚುನಾವಣೆಗಿಂತ ಶೇ.6ರಷ್ಟು ಹೆಚ್ಚು ಮತದಾನದ ದಾಖಲೆ ಮಾಡಿದೆ.
ಪಾಲನೆಯಾಗದ ಮೈತ್ರಿ ಧರ್ಮ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿಧರ್ಮ ಪಾಲನೆಯಾಗದೆ ಕಾಂಗ್ರೆಸ್‌ನ ಕೆಲವು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬರಂಗವಾಗಿ ಸುಮಲತಾ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಲ್ಲದೇ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದ್ದರು. ಇದರಿಂದ ಸುಮಲತಾ ಅವರಿಗೆ ಕಾಂಗ್ರೆಸ್ ಮತಗಳು ಹೆಚ್ಚಾಗಿ ವರ್ಗಾವಣೆಯಾಗಿರುವ ಸಾಧ್ಯತೆ ದಟ್ಟವಾಗಿದೆ.
ಸಚಿವ ಸಾ.ರಾ.ಮಹೇಶ್ ಅಭಿವೃದ್ಧಿ ಕೆಲಸಗಳು ಮತ್ತು ಅವರ ಮೇಲೆ ಜನಗಿರುವ ನಂಬಿಕೆ ಹಾಗೂ ಪ್ರೀತಿ ಚುನಾವಣೆಯಲ್ಲಿ ನಮ್ಮ ಕೈಹಿಡಿಯಲಿವೆ. ಇದರ ಜತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಡವರ ಪರವಾದ ಕೆಲಸಗಳಿಂದ ನಮ್ಮ ಗೆಲುವು ನಿಶ್ಚಿತ.
-ಚಂದ್ರಶೇಖರ್, ಜೆಡಿಎಸ್ ತಾಲೂಕು ಅಧ್ಯಕ್ಷ
ಸುಮಲತಾ ಅವರ ನಾಯಕತ್ವ ಮತ್ತು ಅಂಬರೀಶ್ ಅವರಿಗೆ ಮಂಡ್ಯ ಜನರ ಮೇಲಿದ್ದ ಪ್ರೀತಿ ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಕೈಹಿಡಿಯಲಿದ್ದು ಕ್ಷೇತ್ರದ ಸ್ವಾಭಿಮಾನಿ ಮತದಾರರು ಸುಮಲತಾ ಅವರಿಗೆ ಗೆಲುವಿನ ಸಿಹಿ ನೀಡಲಿದ್ದಾರೆ.
-ಜೆ.ಶಿವಣ್ಣ, ಕುರುಬರ ಸಂಘದ ತಾಲೂಕು ಅಧ್ಯಕ್ಷ
* ಜಿ.ಕೆ.ನಾಗಣ್ಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.