ಶ್ರೀಚಾಮುಂಡೇಶ್ವರಿ ದೇಗುಲದಲ್ಲಿ ಕುಂಭಾಭಿಷೇಕ
Team Udayavani, Jun 26, 2018, 2:21 PM IST
ಮೈಸೂರು: ನಾಡದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದ ಜೀರ್ಣೋದ್ಧಾರಗೊಂಡ ರಾಜಗೋಪುರ, ವಿಮಾನ ಗೋಪುರ ಹಾಗೂ ಧ್ವಜಸ್ತಂಭಗಳ ಕುಂಭಾಭಿಷೇಕ ಹಾಗೂ ವಿವಿಧ ಪೂಜಾ ಕೈಂಕರ್ಯಗಳನ್ನು ಸೋಮವಾರ ನೆರವೇರಿಸಲಾಯಿತು.
ಗಾಳಿ, ಮಳೆ ಹಾಗೂ ಕೋತಿಗಳ ಹಾವಳಿಯಿಂದಾಗಿ ಚಾಮುಂಡೇಶ್ವರಿ ದೇವಾಲಯದ ರಾಜಗೋಪುರ ಹಾಗೂ ವಿಮಾನ ಗೋಪುರಗಳಲ್ಲಿ ಕೆತ್ತಲಾಗಿರುವ ದೇವತಾ ಮೂರ್ತಿಗಳು ವಿರೂಪವಾಗಿದ್ದವು. ಅಲ್ಲದೆ, ಗೋಪುರದ ಗೋಡೆಗಳ ಮೇಲೆ ಗಿಡಗಳು ಬೆಳೆದು ಶಿಥಿಲಗೊಳ್ಳುತ್ತಿದ್ದರಿಂದ
ಟಿವಿಎಸ್ ಕಂಪನಿ ಸಹಯೋಗದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದುರಸ್ತಿ ಕಾರ್ಯ ಕೈಗೊಂಡಿತ್ತು. ಕಳೆದ ಒಂದು ವರ್ಷದಿಂದ ತಮಿಳುನಾಡು ಮೂಲದ 70 ಮಂದಿ ಕೆಲಸಗಾರರು ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕುಂಭಾಭಿಷೇಕ ನೆರವೇರಿಸಲಾಯಿತು.
ಕುಂಭಾಭಿಷೇಕ: ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಆಗಮಿಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಸಮ್ಮುಖದಲ್ಲಿ ಕಳೆದ ಎರಡು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನಡೆದಿದ್ದವು. ಸೋಮವಾರ ಪ್ರಾತಃಕಾಲದಿಂದಲೇ ಜೀವನ್ಯಾಸ, ತತ್ವನ್ಯಾಸ, ಪ್ರಾಣ ಪ್ರತಿಷ್ಠೆ, ಮೂಲ ಹೋಮ, ಕಲಶಾರ್ಚನೆ, ನಾಡಿ ಸಂಧಾನ, ಕಲಾತತ್ವ ಹೋಮ, ಪೂರ್ಣಾಹುತಿ,
ದಶದಾನ ಕುಂಭೋದ್ವಾಸನೆ, ಕುಂಭಾಭಿಷೇಕ, ಮಹಾ ಮಂಗಳಾರತಿ, ಆಚಾರ್ಯಾದಿ ಋತ್ವಿಕ್ ಪೂಜೆ, ಯಾಗ ಫಲ ಸ್ವೀಕಾರ, ಆಶೀರ್ವಾದ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಬೆಳಗ್ಗೆ 9.55 ರಿಂದ 10.10ರವರೆಗೆ ಸಲ್ಲುವ ಶುಭ ಸಿಂಹ ಲಗ್ನದಲ್ಲಿ ರಾಜಗೋಪುರ, ವಿಮಾನ ಗೋಪುರ ಹಾಗೂ ಧ್ವಜ ಸ್ತಂಭಗಳ ಜೀಣೊìàದ್ಧಾರ ಕುಂಭಾಭಿಷೇಕ ನೆರವೇರಿಸಲಾಯಿತು.
ಕಲಶ ಪೂಜೆ: 125 ಅಡಿ ಎತ್ತರವಿರುವ ದೇವಾಲಯದ ರಾಜಗೋಪುರದ ಮೇಲಿನ ಏಳು ಕಲಶಗಳಿಗೆ, ದೇವಾಲಯದ ಗರ್ಭಗುಡಿ ಮೇಲಿರುವ ರಾಜಗೋಪುರದ ಮೇಲಿನ ಕಲಶ ಹಾಗೂ ಧ್ವಜಸ್ತಂಭದ ಮೇಲಿನ ಕಲಶಕ್ಕೆ ಪೂಜೆ ಸಲ್ಲಿಸಲಾಯಿತು. ಇದರಿಂದಾಗಿ ಬೆಳಗ್ಗೆ 9.30ರಿಂದ 11 ಗಂಟೆವರೆಗೂ ಭಕ್ತರಿಗೆ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು.
ವಿವಿಧೆಡೆಗಳಿಂದ ಚಾಮುಂಡಿಬೆಟ್ಟಕ್ಕೆ ಬಂದಿದ್ದ ಸಹಸ್ರಾರು ಯಾತ್ರಿಕರು, ಪ್ರವಾಸಿಗರು ದೇವಾಲಯದ ಹೊರಗೆ ನಿಂತು ಗೋಪುರದ ಮೇಲಿನ ಕಲಶಗಳಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯವನ್ನು ಕಣ್ತುಂಬಿಕೊಂಡು ಭಕ್ತಿಭಾವ ಮೆರೆದರು.
ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಪ್ರಸಾದ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಾಳಯ್ಯ, ಟ್ರಸ್ಟಿಗಳಾದ ಯು.ಸಿ.ಕುಮಾರ್, ಶಶಿಕಲಾ, ಸಾಕಣ್ಣ, ಮಾಜಿ ಟ್ರಸ್ಟಿ ಉತ್ತನಹಳ್ಳಿ ಶಿವಣ್ಣ, ಮುಜರಾಯಿ ತಹಶೀಲ್ದಾರ್ ಯತಿರಾಜ್ ಸಂಪತ್ಕುಮಾರನ್, ಟಿವಿಎಸ್ ಕಂಪನಿಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಚಾಮುಂಡೇಶ್ವರಿ ದೇವಾಲಯದ ರಾಜಗೋಪುರ, ವಿಮಾನ ಗೋಪುರ ಹಾಗೂ ಧ್ವಜ ಸ್ತಂಭಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಶುದ್ಧೀ ಕಾರ್ಯಕ್ಕಾಗಿ ಕುಂಭಾಭಿಷೇಕ ನೆರವೇರಿಸಲಾಯಿತು. ಹಳೆಯ ಗೋಪುರವನ್ನು ಜೀರ್ಣೋದ್ಧಾರ ಮಾಡಿ ಕಲಶಾರೋಹಣ ಮಾಡಿದರೆ ಕೋಟಿ ಪುಣ್ಯ ಬರುತ್ತದೆ ಎಂಬ ಪ್ರತೀತಿ ಇದೆ. ಇದರಿಂದ ನಾಡಿನಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಮೈಸೂರು ಮಹಾರಾಜರ ಹೆಸರಿನಲ್ಲಿ ದೇವಿಗೆ ಮೊದಲ ಪೂಜೆ ನೆರವೇರಿಸಿದ್ದು ನಾಡಿಗೆ ಸುಭಿಕ್ಷೆಯಾಗಲಿದೆ.
-ಡಾ.ಎನ್.ಶಶಿಶೇಖರ ದೀಕ್ಷಿತ್, ಚಾಮುಂಡೇಶ್ವರಿ ದೇಗುಲ ಪ್ರಧಾನ ಆಗಮಿಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.