ಕುಂಭಮೇಳಕ್ಕೆ ಸ್ಥಳೀಯ ಜನಪ್ರತಿನಿಧಿಗಳ ಕಡೆಗಣನೆ
Team Udayavani, Feb 17, 2019, 7:35 AM IST
ತಿ.ನರಸೀಪುರ: ಕುಂಭಮೇಳಕ್ಕೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನ ಪ್ರತಿನಿಧಿಗಳನ್ನು ತಾಲೂಕು ಆಡಳಿತ ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿರುವುದಾಗಿ ತಾಪಂ ಸದಸ್ಯ ಕಿರಗಸೂರು ಎಂ.ರಮೇಶ್ ತಿಳಿಸಿದರು.
ಪಟ್ಟಣದ ತಾಲೂಕು ಪರ್ತಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳನ್ನು ಅಧಿಕಾರಿಗಳು ಏನೆಂದು ತಿಳಿದಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು. ಸಂವಿಧಾನದ ಅಡಿಯಲ್ಲಿ ಶಾಸಕಾಂಗ-ಕಾರ್ಯಾಂಗ-ನ್ಯಾಯಾಂಗ ಕರ್ತವ್ಯ ನಿರ್ವಹಿಸುತ್ತಿದ್ದು, ಶಾಸಕಾಂಗದಲ್ಲಿರುವ ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾರ್ಯಾಂಗವನ್ನು ಜಾರಿಗೆ ತರುವುದಾದರು ಸಾಧ್ಯವೇ ಎಂದು ಪ್ರಶ್ನಿಸಿದರು.
ತವರೂರಲ್ಲಿ ಇತಿಹಾಸ ಪ್ರಸಿದ್ಧ ಕುಂಭಮೇಳ 3 ವರ್ಷಕ್ಕೊಮ್ಮೆ ನಡೆಯುತ್ತಿದ್ದು, ಇದರ ಕಾರ್ಯಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳದೆ ಇವರಿಗಿಷ್ಟ ಬಂದ ರೀತಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಾದರೆ ನಮ್ಮ ಅವಶ್ಯಕತೆಯಾದರು ಏನು? ಇದಕ್ಕೆ ಅಧಿಕಾರಿಗಳು ಉತ್ತರ ನೀಡಬೇಕು ಎಂದು ಕೇಳಿದರು.
ಆದಿಚುಂಚನಗಿರಿ ಶಾಖಾ ಮಠದ ಶ್ರೀಗಳು ಬಂದ ಸಂದರ್ಭದಲ್ಲಿ ಪರ್ತಕರ್ತರು, ಜನಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವ ಬಗ್ಗೆ ಗಮನ ಸೆಳೆದಾಗ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ತಾಲೂಕಿನ ಸಮಸ್ತ ಸಾರ್ವಜನಿಕರು, ಜಿಪಂ, ತಾಪಂ, ಗ್ರಾಪಂ ಚುನಾಯಿತ ಜನಪ್ರತಿನಿಧಿಗಳು ಇದರಲ್ಲಿ ತೊಡಗಿಸಿಕೊಂಡು-
ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಹೇಳಿದ್ದರೂ ಇಲ್ಲಿಯವರೆಗೂ ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ನಮ್ಮನ್ನು ಕ್ಯಾರೇ ಎನ್ನದೇ ಆನೇ ನಡೆದದ್ದೇ ದಾರಿ ಎಂಬಂತೆ ನಡೆಯುತ್ತಿದ್ದಾರೆ.ಇದಕ್ಕೆ ನಮ್ಮ ಪ್ರಬಲ ವಿರೋಧವಿದ್ದು, 3 ದಿನಗಳ ಕಾರ್ಯಕ್ರಮ ನಾವು ಬಷ್ಕರಿಸುತ್ತಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ರಂಗಸ್ವಾಮಿ, ಸಾಜಿದ್‌ಅಹಮದ್, ಉಹೇಶ್, ಜವರಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.