ವಸತಿ ಶಾಲೆ ಮಕ್ಕಳಿಗೆ ಸಿಗದ ಸೌಲಭ್ಯ


Team Udayavani, Mar 5, 2023, 11:52 AM IST

tdy-6

ಎಚ್‌.ಡಿ.ಕೋಟೆ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಿ ಅನುದಾನ ಕಲ್ಪಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ, ಏನೆಲ್ಲಾ ಅನಾಹುತ ಆಗುತ್ತದೆ ಎಂಬುದಕ್ಕೆ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಸಾಕ್ಷಿಯಂತಿದೆ.

ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಬಿಆರ್‌ಸಿ ಕೇಂದ್ರದ ಬಳಿ ಇರುವ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಈವರೆಗೆ ಸಮವಸ್ತ್ರ, ಶಾಲಾ ಬ್ಯಾಗ್‌, ನೋಟ್‌ ಪುಸ್ತಕ ವಿತರಿಸಿಲ್ಲ, ಸಮರ್ಪಕ ನೀರಿನ ಸೌಲಭ್ಯವಿಲ್ಲ, ಕೊಠಡಿಯ ಕಿಟಕಿಯ ಗಾಜುಗಳು ಒಡೆದು ವರ್ಷಗಳೇ ಉರುಳಿದರೂ ಸರಿಪಡಿಸಿಲ್ಲ. ಸೌಲಭ್ಯ ಕೇಳಿದರೆ ವಸತಿ ನಿಲಯದ ಸಿಬ್ಬಂದಿಯ ಕೋಪಕ್ಕೆ ವಿದ್ಯಾರ್ಥಿನಿಯರು ತುತ್ತಾಗುವ ಭೀತಿಯಲ್ಲಿದ್ದಾರೆ!.

ಸೌಲಭ್ಯವಿಲ್ಲ: 6ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗಾಗಿ ಕಾರ್ಯನಿರ್ವ ಹಿಸುತ್ತಿರುವ ವಸತಿ ಶಾಲೆಯಲ್ಲಿ ಸುಮಾರು 90 ಮಕ್ಕಳ ದಾಖಲಾತಿ ಇದೆಯಾದರೂ ಸರಾಸರಿ 70 ಮಕ್ಕಳ ನಿರಂತರ ಹಾಜರಾತಿ ಇದೆ. ಕಳೆದ 2ವರ್ಷಗಳ ಹಿಂದೆ ಕೊರೊನಾ ವೇಳೆ ತಡೆ ಹಿಡಿದ ಸವಲತ್ತುಗಳನ್ನು ಈವರೆಗೂ ನೀಡಿಲ್ಲ.

ವಿದ್ಯಾರ್ಥಿನಿ ನಿಲಯದಲ್ಲಿ ಹೊಂದಾಣಿಕೆ ಇಲ್ಲದ ಸಿಬ್ಬಂದಿ: ನಿಲಯದಲ್ಲಿ ಮೇಲ್ವಿಚಾರಕಿ, ಅಡುಗೆ ಸಿಬ್ಬಂದಿ ನಡುವೆ ಪರಸ್ಪರ ಹೊಂದಾಣಿಕೆ ಇಲ್ಲ. ಭದ್ರತಾ ಸಿಬ್ಬಂದಿಯೂ ಇಲ್ಲ. ಆಗಾಗ ಗೊಂದಲ ವಾತಾವರಣ ನಿರ್ಮಾಣ ಗೊಳ್ಳುತ್ತಿದೆ. ಹಿರಿಯ ಅಧಿಕಾರಿಗಳು ಪರಿಹಾರಕ್ಕೆ ಕ್ರಮವಹಿಸದಿದ್ದರೆ ಹೆಚ್ಚಿನ ಅನಾಹುತಗಳಾಗುವ ಸಂಭವ ಇದೆ.

ವೇತನದಲ್ಲಿ ತಾರತಮ್ಯ: ನಿಲಯದ ಮೇಲ್ವಿಚಾರಕಿಗೆ ಮಾಸಿಕ 11ಸಾವಿರ ಅಡುಗೆ ತಯಾರಕ ಮಹಿಳೆಯರಿಗೆ ಮಾಸಿಕ 7 ಸಾವಿರ ವೇತನ ನೀಡ ಬೇಕೆಂಬ ನಿಯಮವಿದೆ. ಆದರೆ, ಗುತ್ತಿಗೆದಾರರು ಮೇಲ್ವಿಚಾರಕಿಗೆ 7ಸಾವಿರ, ಅಡುಗೆ ತಯಾರಿ ಮಹಿಳೆಯರಿಗೆ 5,100 ಮಾತ್ರ ನೀಡುತ್ತಿದ್ದಾರೆಂದು ತಿಳಿದು ಬಂದಿದೆ. ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಊಟ, ವಸತಿ ಹೊರತು ಪಡಿಸಿ ಇನ್ಯಾವುದೇ ಸವಲತ್ತು ದೊರೆಯುತ್ತಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಮಧ್ಯ ಪ್ರವೇಶಿಸಬೇಕಿದೆ.

ಕೆಲವೊಮ್ಮೆ ಶೌಚಕ್ಕೂ ನೀರು ಇರುವುದಿಲ್ಲ : ಪುರಸಭೆಯಿಂದ ಸಾರ್ವಜನಿಕ ನಲ್ಲಿ ನೀರಿನ ಒಂದೇ ಒಂದು ಸಂಪರ್ಕ ಪಡೆದುಕೊಳ್ಳಲಾಗಿದೆ. ಪ್ರತಿದಿನ ಅರ್ಧತಾಸು ಮಾತ್ರ ನಲ್ಲಿಯಲ್ಲಿ ನೀರು ಬರುತ್ತದೆ. ನೀರಿನ ಸಮಸ್ಯೆ ಪರಿಹಾರಕ್ಕೆಂದು ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಿಂದ ತಾತ್ಕಾಲಿಕ ನೀರಿನ ಸಂಪರ್ಕ ಪಡೆದುಕೊಳ್ಳಲಾಗಿದೆ. ಕೆಲವು ಸಂದರ್ಭದಲ್ಲಿ ವಸತಿ ನಿಲಯಕ್ಕೆ ನೀರಿಲ್ಲದೆ ಸ್ನಾನಕ್ಕೆ ಇರಲಿ, ಶೌಚಾಲಯದ ನೀರಿಗೂ ಪರದಾಡುವ ಸ್ಥಿತಿ ಮೂಮೂಲಿ.

ಕಿಟಕಿಯ ಗಾಜು ಒಡೆದಿದ್ದು ಭಯ ಕಾಡುತ್ತಿದೆ: ನಿಲಯದ ಕೊಠಡಿಗಳ ಕಿಟಕಿಗಳಿಗೆ ಗಾಜುಗಳಿಲ್ಲ, ತೆರೆದ ಕಿಟಕಿ ಬಾಗಿಲುಗಳಿಂದ ನಿಲಯದಲ್ಲಿ ರಾತ್ರಿ ವೇಳೆ ವಿದ್ಯಾರ್ಥಿನಿಯರು ಭಯಭೀತರಾಗುತ್ತಿದ್ದಾರೆ. ಸರಿಪಡಿಸುವಂತೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಬಿಆರ್‌ಸಿ, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಮಾಡಿದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ದೂರಿದ್ದಾರೆ.

ಸಮವಸ್ತ್ರ ವಿತರಣೆಗೆ ಅವಕಾಶ ಇಲ್ಲ: ಬಿಇಒ : ನಿಲಯದ ವಿದ್ಯಾರ್ಥಿನಿಯರಿಗೆ ಬ್ಯಾಗ್‌, ನೋಟ್‌ಬುಕ್‌, ಸಮವಸ್ತ್ರ ವಿತರಣೆಗೆ ಅವಕಾಶ ಇಲ್ಲ. ನೀರಿನ ಸಮಸ್ಯೆ ಪರಿಹಾರ ಮತ್ತು ಕೊಠಡಿಗಳ ಕಿಟಕಿ ಗಾಜು ರಿಪೇರಿ ಸೇರಿ ಇನ್ನಿತರ ಸಮಸ್ಯೆ ಪರಿಹಾರಕ್ಕೆ ಡಿಡಿಪಿಐ ಅವರಿಂದ ಅನುಮೋದನೆ ಪಡೆಯಲಾಗುತ್ತದೆ. ಜತೆಗೆ ನಿಲಯದ ಸಿಬ್ಬಂದಿ ಹೊಂದಾಣಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ಉದಯಕುಮಾರ್‌ ತಿಳಿಸಿದ್ದಾರೆ.

ನಿಲಯದಲ್ಲಿ ಊಟ ವಸತಿ ಹೊರತು ಪಡಿಸಿ ಇನ್ಯಾವುದೇ ಸವಲತ್ತು ಇಲ್ಲ. ಕೊರೊನಾ ಬಳಿಕ, ಬ್ಯಾಗ್‌, ಬಟ್ಟೆ, ನೋಟ್‌ ಪುಸ್ತಕಕ್ಕೆ ತಡೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. -ಕಾವ್ಯಾ, ನಿಲಯದ ವಿದ್ಯಾರ್ಥಿನಿ(ಹೆಸರು ಬದಲಿಸಿದೆ)

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.