ಮಹಿಳಾ ಸಬಲೀಕರಣ ವಾಕಥಾನ್‌ಗೆ ಚಾಲನೆ
Team Udayavani, Jan 26, 2020, 3:00 AM IST
ಮೈಸೂರು: ಧಾನ್ ಫೌಂಡೇಷನ್ ಮೈಸೂರು ವಲಯ ವತಿಯಿಂದ ಮಹಿಳಾ ಸಬಲೀಕರಣ ಕುರಿತು ವಾಕಥಾನ್-2020 ನಡೆಯಿತು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಶನಿವಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹಾ ವಾಕಥಾನ್‌ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ವಾಕಥಾನ್ ಉದ್ದಕ್ಕೂ ಡೊಳ್ಳು ಕುಣಿತ ಗಮನ ಸೆಳೆಯಿತು. ವಾಕಥಾನ್ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ವೃತ್ತ, ಕೆ.ಆರ್.ವೃತ್ತ, ಅರಸು ರಸ್ತೆ ಹಾಗೂ ಡೀಸಿ ಕಚೇರಿ ಮೂಲಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕೊನೆಗೊಂಡಿತು.
ಧಾನ್ ಸಂಸ್ಥೆಯು ಮೈಸೂರು ವಲಯಕ್ಕೆ ಒಳಪಟ್ಟಂತೆ 1600 ಸ್ವಸಹಾಯ ಗುಂಪುಗಳ 30 ಸಾವಿರ ಮಹಿಳಾ ಸದಸ್ಯರನ್ನು ಹೊಂದಿದ್ದು, ಅವರಿಗೆ ಸಾಮಾಜಿಕ ಭದ್ರತೆ, ಆರ್ಥಿಕ ಸೌಲಭ್ಯ, ನಾಯಕತ್ವದ ಅವಕಾಶ, ಮಹಿಳೆಯರಿಗೆ ಕೌಶಲ್ಯ ತರಬೇತಿ ಮುಖಾಂತರ ಉದ್ಯೋಗ ಸೃಷ್ಟಿಯನ್ನು ಹಾಗೂ ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನು ಪ್ರೇರೇಪಿಸಿ ಆದಾಯ ಮೂಲಗಳನ್ನು ಸೃಷ್ಟಿ ಮಾಡಿದೆ.
ಪ್ರತಿಯೊಬ್ಬರಿಗೂ ಜೀವನೋಪಾಯಕ್ಕಾಗಿ ವಿವಿಧ ರೀತಿಯ ತರಬೇತಿಗಳನ್ನು ನೀಡುತ್ತಿದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಮುಖ್ಯ ಉದ್ದೇಶದಿಂದ ಹಾಗೂ ಧಾನ್ ಸಂಸ್ಥೆಯ ಸಾಮಾಜಿಕ ಕಾರ್ಯಕ್ರಮಗಳನ್ನು ಪರಿಚಯಿಸುವ ಉದ್ದೇಶದಿಂದ ವಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಧಾನ್ ಫೌಂಡೇಷನ್ ಮುಖ್ಯಸ್ಥರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.