ನಾಯಕರು ಒಂದಾದರೂ ಕಾರ್ಯಕರ್ತರು ದೂರ ದೂರ


Team Udayavani, Apr 2, 2019, 5:00 AM IST

m4-nayakaru

ಮೈಸೂರು: ಬೇಸಿಗೆಯ ಬಿರು ಬಿಸಲು ನೆತ್ತಿ ಸುಡುತ್ತಿದ್ದರೂ ಮೈಸೂರಲ್ಲಿ ಚುನಾವಣಾ ಕಾವು ಮಾತ್ರ ಏರುತ್ತಿಲ್ಲ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಇನ್ನೂ ಚುನಾವಣೆಯ ಅಬ್ಬರ ಕಾಣಿಸುತ್ತಿಲ್ಲ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಹಾಗೂ ಬಿಜೆಪಿ ನಡುವಿನ ನೇರ ಸ್ಪರ್ಧೆಯಿಂದಾಗಿ ಎರಡೂ ಪಕ್ಷಗಳ ಅಭ್ಯರ್ಥಿಗಳು ತಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ರೋಡ್‌ ಶೋ, ಪಾದಯಾತ್ರೆ ಮೂಲಕ ಮತಯಾಚನೆಯಲ್ಲಿ ತೊಡಗಿದ್ದರೆ, ಕ್ಷೇತ್ರದ ಇನ್ನಿತರೆ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಕರಪತ್ರವನ್ನು ಹಿಡಿದು ಮತದಾರರ ಮನೆ ಮನೆಗೆ ಎಡತಾಕುತ್ತಿದ್ದಾರೆ.

ಆದರೆ, ನೆತ್ತಿ ಸುಡುವ ಬಿಸಿಲಿನಿಂದಾಗಿ ಓಟಿನ ಬೇಟೆಗೆ ಬೆಳಗಿನ ಸಮಯ ಮತ್ತು ಸಂಜೆ ಸಮಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಏಪ್ರಿಲ್‌ ತಿಂಗಳ ಮೊದಲ ವಾರದಲ್ಲೇ ಮೈಸೂರು ಜಿಲ್ಲೆಯಲ್ಲಿ 35 ರಿಂದ 35 ಡಿಗ್ರಿ ಸೆಲ್ಸಿಯಸ್‌, ಕೊಡಗು ಜಿಲ್ಲೆಯಲ್ಲೂ 28 ರಿಂದ 29 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹೀಗಾಗಿ ಇನ್ನುಳಿದಿರುವ 17 ದಿನಗಳಲ್ಲಿ ಮತದಾರರ ಮನಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಬೇಕಿದ್ದರೂ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವಿನ ಸಮನ್ವಯದ ಕೊರತೆಯಿಂದಾಗಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲೂ ಅಂತಹ ಉತ್ಸಾಹ ಕಂಡುಬರುತ್ತಿಲ್ಲ. ಆದರೆ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಮ್ಮದೇ ಆದ ರೀತಿಯಲ್ಲಿ ರಣೋತ್ಸಾಹದಿಂದ ಮುನ್ನುಗ್ಗುತ್ತಿದ್ದಾರೆ.

ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಇಲ್ಲಿ , ದೋಸ್ತಿ ಪಕ್ಷ ಜೆಡಿಎಸ್‌ ಕೈಜೋಡಿಸದಿರುವುದರಿಂದ ಪ್ರಚಾರ ಏಕಮುಖವಾಗಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಪರ ಪ್ರಚಾರ ಕಳೆಗಟ್ಟುತ್ತಿಲ್ಲ. ಕೊಡಗಿನಲ್ಲಿ ಜೆಡಿಎಸ್‌ನ ಪ್ರಮುಖ ಮುಖಂಡರಾದ ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಪ್ರಚಾರದಲ್ಲೇಲ್ಲೂ ಕಾಣಿಸಿಕೊಳ್ಳುತ್ತಿಲ್ಲ.

ಇನ್ನು ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ವೆಂಕಟೇಶ್‌ ಕಾಂಗ್ರೆಸ್‌ ಪರ ಮತಯಾಚನೆ ಮಾಡುತ್ತಿದ್ದರೆ, ಮೈತ್ರಿ ಪಕ್ಷ ಜೆಡಿಎಸ್‌ ಶಾಸಕ ಕೆ.ಮಹದೇವ್‌ ಅವರ ಮನೆಗೆ ಸ್ವತಃ ಅಭ್ಯರ್ಥಿ ವಿಜಯಶಂಕರ್‌ ಅವರು ಭೇಟಿ ನೀಡಿ ಬೆಂಬಲ ಕೋರಿದ್ದರೂ ಅವರು ಈವರೆಗೆ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿಲ್ಲ.

ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ಕೆಲಸ ಮಾಡುತ್ತಿದ್ದು, ಈ ಕ್ಷೇತ್ರದ ಶಾಸಕರಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಅಡಗೂರು ಎಚ್‌.ವಿಶ್ವನಾಥ್‌ ಅವರು ಇನ್ನಷ್ಟೆ ತೊಡಗಿಸಿಕೊಳ್ಳಬೇಕಿದೆ.

ಸಚಿವರೇ ನಾಪತ್ತೆ: ಮುಖ್ಯವಾಗಿ ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜಿ.ಟಿ.ದೇವೇಗೌಡ ಅವರು ಕ್ಷೇತ್ರ ಕಾಂಗ್ರೆಸ್‌ ಪಾಲಾದ ಹಿನ್ನೆಲೆಯಲ್ಲಿ ಆರಂಭದಿಂದಲೂ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ತೋರುತ್ತಿಲ್ಲ. ಈವರೆಗೆ ಮೈಸೂರಿನಿಂದ ದೂರವೇ ಇದ್ದ ಜಿ.ಟಿ.ದೇವೇಗೌಡ ಅವರು ಮೈಸೂರಿಗೆ ಬಂದಿದ್ದರೂ ಚುನಾವಣಾ ಕಾರ್ಯದಿಂದ ದೂರವೇ ಉಳಿದಿದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಘೋಷಣೆಯಾದ ಬಳಿಕ ಮೂರ್‍ನಾಲ್ಕು ಬಾರಿ ಮೈಸೂರಿಗೆ ಬಂದು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ, ಕಾರ್ಯಕರ್ತರ ಸಭೆ ನಡೆಸಿ ಹೋಗಿದ್ದಾರೆ. ಜಿಲ್ಲೆಯ ಮತ್ತೂಬ್ಬ ಸಚಿವರಾದ ಸಾ.ರಾ.ಮಹೇಶ್‌ ಅವರೊಂದಿಗೂ ಚರ್ಚೆ ಮಾಡಿದ್ದಾರೆ.

ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ: ಕಾಂಗ್ರೆಸ್‌ ಈ ಕ್ಷೇತ್ರವನ್ನು ತನ್ನದಾಗಿಸಿಕೊಂಡಾಗ ಯಾರನ್ನು ಅಭ್ಯರ್ಥಿ ಮಾಡುತ್ತೇವೆ ಎಂಬ ಬಗ್ಗೆ ನಮ್ಮೊಂದಿಗೆ ಆರಂಭದಲ್ಲೇ ಚರ್ಚಿಸಲಿಲ್ಲ. ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸಾ.ರಾ.ಮಹೇಶ್‌ ಮಾತುಕತೆ ನಡೆಸಿದ್ದರು.

ಈವರೆಗೆ ಆ ಮಾತುಕತೆಯ ವಿವರಗಳ ಬಗ್ಗೆ ತಿಳಿದಿಲ್ಲ. ಜೊತೆಗೆ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್‌, ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಅವರನ್ನು ಹೊರತುಪಡಿಸಿ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರ್ಯಾರೂ ತಮ್ಮೊಂದಿಗೆ ಚರ್ಚೆಗೆ ಮುಂದಾಗದಿರುವುದರಿಂದ ತಾವಾಗೇ ಏಕೆ ತೊಡಗಿಸಿಕೊಳ್ಳಬೇಕು ಎಂದು ಜಿಟಿಡಿ ಕೂಡ ಮುಗುಮ್ಮಾಗಿದ್ದಾರೆ.

ಜೊತೆಗೆ ವಿಧಾನಸಭೆ ಚುನಾವಣೆ ನಡೆದು ಇನ್ನೂ ಒಂದು ವರ್ಷ ಕೂಡ ಕಳೆದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಹೋರಾಟ ನಡೆಸಿದವರು ಈಗ ಏಕಾಏಕಿ ಮೈತ್ರಿ ಅಭ್ಯರ್ಥಿಗೆ ಮತ ಕೇಳಿ ಎಂದರೆ ಕಷ್ಟವಾಗುತ್ತದೆ. ಎರಡೂ ಪಕ್ಷದ ನಾಯಕರುಗಳು ಕಾರ್ಯಕರ್ತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವಾಗಬೇಕು ಎಂಬ ಮಾತು ಕೇಳಿಬರುತ್ತಿದೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.