ಮದ್ಯ ತ್ಯಜಿಸಿ ಉತ್ತಮ ಜೀವನ ನಡೆಸಿ
Team Udayavani, Dec 31, 2017, 12:29 PM IST
ಮೈಸೂರು: ಮನುಷ್ಯನನ್ನು ಜೀವಂತವಾಗಿ ಕೊಲ್ಲುವ ಮದ್ಯವನ್ನು ತ್ಯಜಿಸಿ, ಉತ್ತಮ ಜೀವನ ನಡೆಸಿ ಎಂದು ಶಾಸಕ ವಾಸು ಸಲಹೆ ನೀಡಿದರು. ಸುಬ್ರಹ್ಮಣ್ಯ ನಗರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ, ಬೆಳ್ತಂಗಡಿ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ,
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಮೈಸೂರು ಮಹಾ ನಗರ ಪಾಲಿಕೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ 1177ನೇ ಮದ್ಯವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ವೀರೇಂದ್ರ ಹೆಗ್ಗಡೆಯವರು, ದುಡ್ಡಿನ ಬಡತನ ಮತ್ತು ಬುದ್ಧಿಯ ಬಡತನ ಹೋಗಲಾಡಿಸಲು ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಇಂದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಮದ್ಯಪಾನದಂತಹ ದುಶ್ಚಟ ಮಾಡುವುದರಿಂದ ಅಂತಹ ವ್ಯಕ್ತಿ ಸಮಾಜದಿಂದ ಮತ್ತು ಕುಟುಂಬದಿಂದ ಸಂಕಷ್ಟಕ್ಕೆ ಒಳಗಾಗಿ ತನ್ನ ಹೆತ್ತವರು, ಕುಟುಂಬದ ಗೌರವವನ್ನು ಕಳೆದುಕೊಳ್ಳಬೇಕಾಗುತ್ತದೆ.
ಮದ್ಯಪಾನದಿಂದ ವ್ಯಕ್ತಿಯು ಜೀವನ ಪರ್ಯಂತ ಅನಾರೋಗ್ಯಕ್ಕೆ ತುತ್ತಾಗಿ ತಾನು ದುಡಿದ ಹಣವನ್ನು ಮದ್ಯಪಾನ ಮತ್ತು ಆಸ್ಪತ್ರೆ ಖರ್ಚಿಗೆ ಮೀಸಲಿಡಬೇಕಾಗುತ್ತದೆ. ಹೀಗಾಗಿ ದುಶ್ಚಟ ಬಿಟ್ಟು ಸಮಾಜದ ಒಳಿತಿಗಾಗಿ ಶ್ರಮಿಸೋಣ ಎಂದರು.
ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜಾದ್ಯಂತ1177 ಮದ್ಯವರ್ಜನ ಶಿಬಿರಗಳನ್ನು ಮಾಡುವ ಮೂಲಕ ಒಂದು ಲಕ್ಷಕ್ಕೂ ಅಧಿಕ ಮದ್ಯವ್ಯಸನಿಗಳ ಮನಸ್ಸನ್ನು ಪರಿವರ್ತನೆ ಮಾಡಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರೇರೇಪಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ 35 ಮದ್ಯವರ್ಜನ ಶಿಬಿರಗಳನ್ನು ಮಾಡುವ ಮೂಲಕ 3857 ಮದ್ಯವ್ಯಸನಿಗಳನ್ನು ಮದ್ಯ ಮುಕ್ತರನ್ನಾಗಿಸಲಾಗಿದೆ ಎಂದು ವಿವರಿಸಿದರು. ವಿಶ್ರಾಂತಿ ಕುಲಪತಿ ಪೊ›.ಕೆ.ಎಸ್.ರಂಗಪ್ಪ ಮಾತನಾಡಿ, ಸರ್ಕಾರ ಮಾಡಬೇಕಾದ ಅನೇಕ ಯೋಜನೆಗಳನ್ನು ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಅನುಷ್ಠಾನ ಮಾಡುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದರು.
ಸಮಾಜದಲ್ಲಿ ಸಬಲರಾದವರು ಯಾರೂ ವ್ಯಸನಗಳಿಗೆ ಬಲಿಯಾಗುವುದಿಲ್ಲ. ದುರ್ಬಲವರ್ಗದವರಿಗೆ ಸರಿಯಾದ ಮಾರ್ಗದರ್ಶನ ಇಲ್ಲದೇ ಇರುವುದರಿಂದ ದುಶ್ಚಟಗಳಿಗೆ ವೇಗವಾಗಿ ಆಕರ್ಷಣೆಗೆ ಒಳಗಾಗುವುದನ್ನು ನಾವು ನೋಡುತ್ತೇವೆ. ಒಬ್ಬ ವ್ಯಕ್ತಿ ಮಾದಕ ವ್ಯಸನಿಯಾದರೆ ಕುಟುಂಬಕ್ಕೆ ಮಾತ್ರ ತಲೆನೋವಲ್ಲದೇ ಇಡೀ ಸಮಾಜಕ್ಕೆ ದೊಡ್ಡ ತಲೆನೋವಾಗುತ್ತದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಜಿಲ್ಲೆಯ ನಿರ್ದೇಶಕರಾದ ವಿ.ವಿಜಯ್‌ಕುಮಾರ್ ನಾಗನಾಳ, ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶಿವಣ್ಣ, ರಮೇಶ್, ಶಿವಮಾದು, ಉದ್ಯಮಿಗಳಾದ ವಿದ್ಯಾಸಾಗರ್, ಯೋಜನಾಧಿಕಾರಿಗಳಾದ ಆನಂದ್, ತಿಮ್ಮಯ್ಯನಾಯಕ್, ಶಿಬಿರಾಧಿಕಾರಿ ಗಣೇಶ್ ಆಚಾರ್ಯ, ಆರೋಗ್ಯ ಸಹಾಯಕಿ ನೇತ್ರಾವತಿ, ಮೇಲ್ವಿಚಾರಕಿ ಪ್ರೇಮಲತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.