ಹಿರಿಯರಿಗೆ ಕಾನೂನು ನೆರವು
Team Udayavani, Nov 10, 2018, 12:19 PM IST
ಹುಣಸೂರು: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸಾಕಷ್ಟು ಅವಕಾಶ ಕಲ್ಪಿಸಿದ್ದು, ಮಕ್ಕಳಿಂದ ತೊಂದರೆಯಾದ ವೇಳೆ ಉಚಿತ ಕಾನೂನಿನ ನೆರವು ಪಡೆದುಕೊಳ್ಳುವಂತೆ ವಕೀಲರ ಸಂಘದ ಅಧ್ಯಕ್ಷ ಜಯರಾಂ ಮನವಿ ಮಾಡಿದರು.
ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಹಿರಿಯ ನಾಗರಿಕರು ಹಾಗೂ ಮಾನಸಿಕ ಆರೋಗ್ಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಪ್ರವೃತ್ತಿ ಹೆಚ್ಚುತ್ತಿದ್ದು ಇದು ಉತ್ತಮ ಬೆಳವಣಿಗೆಯಲ್ಲ, ಈ ವಯಸ್ಸಿನಲ್ಲಿ ಪ್ರೀತಿ ವಾತ್ಸಲ್ಯ ತೋರಿ ಆರೋಗ್ಯ ರಕ್ಷಣೆ ಮಾಡಬೇಕಾದುದು ಮಕ್ಕಳ ಕರ್ತವ್ಯ ಎಂದು ಹೇಳಿದರು.
ವಿಕಲಾಂಗ ಕಲ್ಯಾಣ ಇಲಾಖೆ ಸಂಯೋಜನಾಧಿಕಾರಿ ದೇವರಾಜ್ ಮಾತನಾಡಿ, ಹಿರಿಯ ನಾಗರಿಕರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿ ನೀಡಲಾಗುವುದು, ರಿಯಾಯಿತಿ ದರದಲ್ಲಿ ಎಲ್ಲಡೆ ಪ್ರಯಾಣಿಸಬಹುದು, ಸಂಧ್ಯಾ ಸುರûಾ ಯೋಜನೆ, 2011ರಲ್ಲಿ ವಿಶ್ವಸಂಸ್ಥೆ ಹಿರಿಯ ನಾಗರಿಕರ ದಿನಾಚರಣೆ ಘೋಷಿಸಿತು.
20007ರಲ್ಲಿ ಪಾಲಕರ ಪೋಷಣೆ, ಹಿರಿಯ ನಾಗರಿಕರ ರಕ್ಷಣೆ, ಅವರ ಯೋಗಕ್ಷೇಮ ನೋಡಿಕೊಳ್ಳುವ ಹಿನ್ನೆಲೆಯಲ್ಲಿ ಕೆಲ ವೃದ್ಧಾಶ್ರಮಗಳನ್ನು ತೆರೆಯಲಾಗಿದೆ. ಅಗತ್ಯ ಮಾಹಿತಿಗೆ 1090ಕ್ಕೆ ಕರೆ ಮಾಡಬಹುದು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್ ಮಾತನಾಡಿ, ಒಬ್ಬ ಮನುಷ್ಯ ಮಾನಸಿಕ, ಸಾಮಾಜಿಕವಾಗಿ ಉತ್ತಮವಾಗಿದ್ದಲ್ಲಿ ಆರೋಗ್ಯವಂತ ಮನುಷ್ಯ ಎನ್ನಬಹುದು.
ವಿಶ್ವ ಆರೋಗ್ಯ ಸಂಸ್ಥೆ ಹದಿಹರೆಯದವರಲ್ಲಿ ಮಾನಸಿಕ ಆರೋಗ್ಯ ಬದಲಾಗುತ್ತಿರುವ ಪ್ರಪಂಚದಲ್ಲಿ ಬದಲಾವಣೆ ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದು, ಹದಿಹರೆಯದವರು ದಾರಿ ತಪ್ಪದ ಹಾಗೆ ಎಚ್ಚರ ವಹಿಸಬೇಕು. ಇತ್ತೀಚೆಗೆ ಕೆಲ ಆತಂಕದ ಕಾಯಿಲೆಗಳಿಂದ ಮಾನಸಿಕ ಖನ್ನತೆಗೆ ಒಳಗಾಗುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಅವಶ್ಯವೆಂದರು.
ಕಾರ್ಯಕ್ರಮದಲ್ಲಿ ಎಸಿಡಿಪಿಒ ವೆಂಕಟಪ್ಪ, ವಕೀಲರ ಸಂಘದ ಉಪಾಧ್ಯಕ್ಷ ಲಕ್ಷ್ಮೀಕಾಂತ್, ಕಾರ್ಯದರ್ಶಿ ವೀರೇಶ್‌ರಾವ್ ಬೋಬಡೆ, ವಕೀಲರಾದ ಸುಂದರೇಶ್, ನಾಗರಾಜ್, ತಾಪಂ ಸಹಾಯಕ ನಿರ್ದೇಶಕ ನಿಂಗಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.