ಪ್ರತಿ ವಿದ್ಯಾರ್ಥಿಗಳು ಕ್ರಿಯಾಶೀಲತೆ ಬೆಳೆಸಿಕೊಳ್ಳಲಿ


Team Udayavani, Jan 12, 2018, 12:09 PM IST

m6-vidyarthi.jpg

ಹುಣಸೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯೆ ಮತ್ತು ವಿನಯ ಎರಡಕ್ಕೂ ಅವಿನಾಭಾವ ಸಂಬಂಧವಿದೆ. ಸಾಧಿಸಬೇಕೆನ್ನುವ ಹಠ, ಛಲ ನಿಮ್ಮಲ್ಲಿರಲಿ ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್‌.ಕೃಷ್ಣಕುಮಾರ್‌ ಸೂಚಿಸಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಬೇರೆಯವರು ಟೀಕಿಸುತ್ತಾರೆಂಬ ಭಯ, ಮುಜುಗರ ಬೇಡ. ಫ‌ಸ್ಟ್‌ ರ್‍ಯಾಂಕ್‌ ಪಡೆದ ಮಕ್ಕಳು ಇಂದಿಗೂ ಜೀವನದಲ್ಲಿ ಸ್ಥಿರವಾಗಿ ನಿಂತಿರದ ಉದಾಹರಣೆಗಳು ನಮ್ಮ ಮುಂದಿವೆ.

ಜಸ್ಟ್‌ ಪಾಸ್‌ ಹುಡುಗರು ದಡ್ಡರು ಎಂಬ ಪರಿಕಲ್ಪನೆ ಖಂಡಿತ ಸರಿಯಲ್ಲ. ರೈತರ ಮಕ್ಕಳಿಗೆ ಆಂಗ್ಲಭಾಷೆ ಕಷ್ಟವಿರಬಹುದು. ಕೆಲ ಕುಟುಂಬದ ಬಡತನ ವಿದ್ಯಾಭ್ಯಾಸದ ತೊಡಕಿಗೆ ಕಾರಣವಾಗಿರಬಹುದು. ಅಂದ ಮಾತ್ರಕ್ಕೆ ಅವರ್ಯಾರು ದಡ್ಡರಲ್ಲ. ವಿಶೇಷವೆಂದರೆ ಇಂತಹ ನೋವನ್ನುಂಡವರೇ ಸಾಧನೆಯ ಶಿಖರಕ್ಕೆ ಏರಿದವರಾಗಿದ್ದಾರೆ. ಇದಕ್ಕೆ ನಮ್ಮ ಮುಂದೆ ಸಾಕಷ್ಟು ಸಾಧಕರ ಉದಾಹರಣೆಗಳಿವೆ.

ಸಕಾರಾತ್ಮಕವಾಗಿ ಆಲೋಚಿಸುವ ಗುಣ ಬೆಳೆಸಿಕೊಂಡು ಮನಸು ಮತ್ತು ದೇಹವನ್ನು ದಂಡಿಸುವವನು ಮಾತ್ರ ಪರಿಪೂರ್ಣ ವ್ಯಕ್ತಿತ್ವ ಹೊಂದುವ ಮೂಲಕ ಸಾಧಿಸಬಲ್ಲ, ಪಠ್ಯದ ಜೊತೆಗೆ ಹಾಡು, ಕುಣಿತ, ಆಟ ಎಲ್ಲದಲ್ಲರೂ ಭಾಗವಹಿಸಿದಲ್ಲಿ ಯಾವುದಾದರೊಂದರಲ್ಲಿ ಯಶಸ್ಸು ವಿದ್ಯಾರ್ಥಿಗೆ ಸಿಗಲಿದೆ ಎಂದರು.

ಪ್ರಾಂಶುಪಾಲ ಆನಂದ್‌ರಾಜ್‌ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಲು ಇಂತಹ ವೇದಿಕೆಗಳು ಉತ್ತಮ ಅವಕಾಶ ನೀಡುತ್ತವೆ. ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿರೆಂದರು.

ಸಮಾರಂಭದಲ್ಲಿ ಸಿಡಿಸಿ ಉಪಾಧ್ಯಕ್ಷ ಚಂದ್ರಶೇಖರ್‌,ಸದಸ್ಯರಾದ ರಮೇಶ್‌ ಬಾಬು, ಶೋಯೀಬ್‌ ಅಹಮದ್‌, ಮೋಹನ್‌ರಾವ್‌, ನಗರಸಭೆ ಪರಿಸರ ಎಂಜಿನಿಯರ್‌ ರವಿಕುಮಾರ್‌, ಇಂಟರ್ಯಕ್ಟ್ ಕ್ಲಬ್‌ ಅಧ್ಯಕ್ಷ ಶಾಹೀದ್‌ ಪಾಷಾ, ಅಧ್ಯಾಪಕರುಗಳಾದ ಆನಂದ್‌, ಸುದರ್ಶನ್‌ ಬಾಬು ಹಾಗೂ ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.