ರೈತರ ಸಂಕಷ್ಟ ನಿವಾರಿಸುವ ಕಾರ್ಯವಾಗಲಿ

Team Udayavani, Dec 24, 2019, 3:00 AM IST

raitara

ಮೈಸೂರು: ಸರ್ಕಾರಗಳ ಅವೈಜ್ಞಾನಿಕ ನೀತಿಗಳಿಂದಾಗಿ ರೈತ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾನೆ. ಹೀಗಾಗಿ ರೈತರ ಹೆಸರಲ್ಲಿ ಒಂದು ದಿನದ ಮಟ್ಟಿಗೆ ದಿನಾಚರಣೆ ಆಚರಿಸಿದರೆ ಸಾಲದು, ರೈತರ ಸಂಕಷ್ಟಗಳನ್ನು ನಿವಾರಿಸುವ ಕಾರ್ಯವಾಗಬೇಕು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದರು. ನಗರದ ಗನ್‌ಹೌಸ್‌ ಬಳಿಯ ಕುವೆಂಪು ಉದ್ಯಾನದಲ್ಲಿ ನಡೆದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತ ಸಂಕಷ್ಟದಲ್ಲಿರುವುದು ದುರದೃಷ್ಟ: ನಾಡಿನ ಜನರಿಗೆ ಅನ್ನ ನೀಡುವ ರೈತ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಹಾದಿ ಹಿಡಿದಿರುವುದು ದುರಾದೃಷ್ಟಕರ, ಸರ್ಕಾರಗಳ ಅವೈಜ್ಞಾನಿಕ ನೀತಿಗಳೇ ರೈತನನ್ನು ಬಲಿ ಪಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ 2ಲಕ್ಷ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತ ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಇಲ್ಲದೆ, ಕೆಲವು ವೇಳೆ ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಅನುಭವಿಸಿದರೂ ಪರಿಹಾರ ಸಿಗದೆ ಕಂಗಾಲಾಗುತ್ತಿದ್ದಾರೆ. ಹೀಗಾಗಿ ರೈತರು ಸಂಘಟನೆ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.

ಸಾಲಮನ್ನಾ ಗೊಂದಲ ನಿವಾರಿಸಿ: ಸರ್ಕಾರ ಸಾಲಮನ್ನಾ ಗೊಂದಲ ನಿವಾರಿಸಬೇಕು. ರಾತ್ರಿ ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸರಬರಾಜು ತಪ್ಪಿಸಬೇಕು, ರೈತರ ಉತ್ಪನ್ನಗಳ ಖರೀದಿಗೆ ವರ್ಷಪೂರ್ತಿ ಖರೀದಿ ಕೇಂದ್ರಗಳನ್ನು ತೆರೆಯುವ ವ್ಯವಸ್ಥೆ ಜಾರಿಗೆ ಬರಬೇಕು. ತುರ್ತಾಗಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಕಬ್ಬು ಕಟಾವು ವಿಳಂಬ ತಪ್ಪಿಸಬೇಕು. ಕಟಾವು ಕೂಲಿ ಏರಿಕೆ ತಪ್ಪಿಸಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಲಾಯಿತು.

ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾ ಕಾಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಬಿನಿ ಶಿವನಾಗಪ್ಪ, ಕಿರಿಗಸೂರು ಶಂಕರ್‌, ಕೆರೆಹುಂಡಿ ರಾಜಣ್ಣ, ರಂಗಸಮುದ್ರ ಸುರೇಶ, ಬಿ.ಪಿ.ಪರಶಿವಮೂರ್ತಿ, ಕುರುಬೂರು ಸಿದ್ದೇಶ್‌, ಹಾಡ್ಯ ರವಿ, ಬಿದರಳ್ಳಿ, ಸಿ.ಕೆ.ರವೀಂದ್ರ, ವರಕೋಡು ಕೃಷ್ಣೇಗೌಡ, ಪ್ರಸಾದನಾಯಕ, ಬರಡನಪುರ ನಾಗರಾಜ್‌, ರಾಣಿ, ಮಹದೇವಮ್ಮ ಸೇರಿದಂತೆ ಹಲವು ರೈತರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.