ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿಯೇ ಉಳಿಯಲಿ


Team Udayavani, Aug 13, 2018, 11:46 AM IST

m6-congress.jpg

ಮೈಸೂರು: ಜಾತ್ಯಾತೀತ ಪಕ್ಷವಾಗಿರುವ ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿಯೇ ಉಳಿಯಬೇಕಿದ್ದು, ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಳ್ಳಬೇಡಿ ಎಂದು ಶಾಸಕ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಯಾರಿಗೂ ಗೊತ್ತಿಲ್ಲದಂತೆ ವಿಜಯಪುರದಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು. ವಿಜಯಪುರದ ಬಿಜೆಪಿ ಜಿಲ್ಲಾಧ್ಯಕ್ಷನನ್ನು ರಾತ್ರೋರಾತ್ರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಂಡು ನಾಗಠಾಣಾ ಕ್ಷೇತ್ರದ ಟಿಕೆಟ್‌ ನೀಡಲಾಯಿತು.

ಕಾಂಗ್ರೆಸ್‌ನ ಒಬ್ಬ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಬಿಜೆಪಿ-ಕಾಂಗ್ರೆಸ್‌ ನಡುವೆ ಈ ರೀತಿ ಹೊಂದಾಣಿಕೆ ನಡೆದಿದ್ದು, ಇದು ಜನರಿಗೆ ಗೊತ್ತಾಗಬೇಕಿದೆ. ಚುನಾವಣೆಗೂ ಮುನ್ನ ನಮ್ಮನ್ನು ಬಿಜೆಪಿಯ ಬಿ ಟೀಮ್‌ ಎಂದು ಕರೆಯಲಾಗುತ್ತಿತ್ತು. ಆದರೆ ನಾವು ಬಿಜೆಪಿ ಜತೆ ಹೋಗಿ ಸರ್ಕಾರ ರಚಿಸಲಿಲ್ಲ.

ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ಗೆ ಸಹಕರಿಸಿದ್ದು ನಿಜ, ಮತದಾರರು ಯಾರ ಮೇಲಿನ ಬೇಸರದಿಂದ ಜೆಡಿಎಸ್‌ಗೆ ಮತ ಹಾಕಿದ್ದಾರೆ. ಆದರೆ ವಿಜಯಪುರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ರಾಜಕೀಯ ತಂತ್ರಗಾರಿಕೆ ಕಾರಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಕಾಂಗ್ರೆಸ್ಸಿಗರು ಜಾತ್ಯತೀತರಾಗಿರಿ, ಅದನ್ನು ಮಿಕ್ಸ್‌ ಮಾಡಬೇಡಿ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಾಂತೀಯ ಪಕ್ಷಕ್ಕೆ ಒಲವು: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಪ್ರಾಂತೀಯ ಪಕ್ಷಗಳು ಅಧಿಕಾರದಲ್ಲಿವೆ. ಪ್ರಾಂತೀಯ ಪಕ್ಷಗಳು ಸ್ಥಳೀಯ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಿದ್ದು, ಪ್ರಾಂತೀಯ ಆಶೋತ್ತರಗಳ ಈಡೇರಿಕೆ ಸಾಧ್ಯ ಎಂಬ ಅನಿಸಿಕೆ ಇದೆ.

ಇದೇ ಕಾರಣಕ್ಕಾಗಿ ಕಾವೇರಿ ಸಮಸ್ಯೆ ಸಂದರ್ಭದಲ್ಲಿ ಸಿದ್ದರಾಮಯ್ಯ ಎಚ್‌.ಡಿ.ದೇವೇಗೌಡರ ಸಲಹೆ ಪಡೆಯುವಂತಾಯಿತು. ಹೀಗಾಗಿ ಜೆಡಿಎಸ್‌ ರೈತರ ಪರವಾಗಿ ಉಳಿದುಕೊಂಡಿರುವುದರಿಂದ ಪ್ರಾಂತೀಯ ಪಕ್ಷವಾಗಿ ಜನರ ಮನಸ್ಸಿನಲ್ಲಿ ಉಳಿದಿದೆ ಎಂದು ಹೇಳಿದರು. 

ಸರ್ವಾಧಿಕಾರಿ ಆಡಳಿತ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನ್‌ ಕೀ ಬಾತ್‌ ಮತ್ತಿತರ ಕಾರ್ಯಕ್ರಮಗಳ ಮೂಲಕ ಕೇವಲ ಮಾತಿನ ಸರ್ಕಾರವಾಗಿದೆ. ಅಲ್ಲದೆ ಸ್ವಾತಂತ್ರಾ ನಂತರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.

ನನಗೊಂದು ಕನಸಿದೆ: ಎಚ್‌.ಡಿ.ದೇವೇಗೌಡರು ತಮ್ಮ ಮೇಲೆ ನಂಬಿಕೆ, ಅಭಿಮಾನವನ್ನಿಟ್ಟು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಅಧಿಕಾರವನ್ನು ಎಲ್ಲರ ಬೆಂಬಲದೊಂದಿಗೆ ಸಮರ್ಥವಾಗಿ ನಿಭಾಯಿಸುತ್ತೇನೆ. ಆದರೆ ತಮ್ಮದೊಂದು ಕನಸಿದ್ದು, ಅದನ್ನು ನನಸಾಗಿಸಿಕೊಳ್ಳಲು ಯುವಪಡೆಯನ್ನು ಕಟ್ಟಲಾಗುತ್ತಿದ್ದು, ಇವರೆಲ್ಲರನ್ನು ಒಗ್ಗೂಡಿಸಿ ಪಕ್ಷಕಟ್ಟುವ ಆಶಯ ಹೊಂದಿದ್ದೇನೆ ಎಂದರು.

ರಾಜಕೀಯ ತಿರುವು: ಮುಂದಿನ ಲೋಕಸಭಾ ಚುನಾವಣೆ ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ತರ ತಿರುವು ಪಡೆಯಲಿದೆ. ವಿವಿಧ ರಾಜ್ಯಗಳ ಪ್ರಾಂತೀಯ ಪಕ್ಷಗಳನ್ನೊಳಗೊಂಡ ಒಕ್ಕೂಟ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ. ಈ ಚುನಾವಣೆಗೆ ಜೆಡಿಎಸ್‌ ಸಹ ಸಜ್ಜಾಗುತ್ತಿದ್ದು, ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿದೆ.

ಮುಂದಿನ ಸಂಸತ್‌ ಚುನಾವಣೆ ನರೇಂದ್ರ ಮೋದಿ ಮತ್ತು ಎಚ್‌.ಡಿ.ದೇವೇಗೌಡರ ನಡುವೆ ನಡೆದರೂ ಯಾವುದೇ ಅಚ್ಚರಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಸೇರಿದಂತೆ ಇನ್ನಿತರರು ಹಾಜರಿದ್ದರು. 

ಪ್ರಾಮಿಸಿಂಗ್‌ ಲಿಡರ್‌: ಪ್ರಜ್ವಲ್‌ ರೇವಣ್ಣ ಒಬ್ಬ ಪ್ರಾಮಿಸಿಂಗ್‌ ಲಿಡರ್‌ ಆಗಿದ್ದು, ಎಚ್‌.ಡಿ.ದೇವೆಗೌಡರ ಮೊಮ್ಮಗ ಎಂಬುದನ್ನು ಬದಿಗಿಟ್ಟು ನೋಡಿದರೆ, ಇಂತಹ ಯುವಕರು ರಾಜಕೀಯಕ್ಕೆ ಅಗತ್ಯವಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆಗಾಗಿ ಶೀಘ್ರವೇ ಗುಲ್ಬರ್ಗದಿಂದ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ಈ ವೇಳೆ ಜೆಡಿಎಸ್‌ ವಿರುದ್ಧ ಮಾಡಿರುವ ಅಪಪ್ರಚಾರದ ಕುರಿತು ಜನರಿಗೆ ಮನವರಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಬಜೆಟ್‌ ಪುಸ್ತಕ ನೋಡಿ: ಬಿಜೆಪಿ ನಾಯಕರು ಯಾವುದೇ ಆರೋಪ ಮಾಡುವ ಮುನ್ನ, ಬಜೆಟ್‌ ಪುಸ್ತಕ ನೋಡಿ ಆರೋಪಿಸಲಿ. ಶಾದಿಭಾಗ್ಯಕ್ಕೆ ಹಿಂದಿನ ಸರ್ಕಾರ ತನ್ನ ಕೊನೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿತ್ತು. ಆದರೆ ಈಗ ಅದನ್ನು ನಮ್ಮ ತಲೆಗೆ ಕಟ್ಟಲಾಗುತ್ತಿದ್ದು, ನಾವು ಯಾವುದೇ ಅನುದಾನ ಕಡಿತ ಮಾಡಿಲ್ಲ.

ಇನ್ನು ಎಚ್‌ಡಿಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದುಂದು ವೆಚ್ಚ ಆರೋಪಕ್ಕೆ ತಿರುಗೇಟು ನೀಡಿದ ಅವರು, ನರೇಂದ್ರ ಮೋದಿ ಅಧಿಕಾರ ಸ್ವೀಕಾರದ ವೇಳೆ ಆಗಮಿಸಿದ್ದ ಅತಿಥಿಗಳಿಗೆ ಖರ್ಚು ಮಾಡಿದ ಹಣ ಯಾವುದು? ಎಂದು ಪ್ರಶ್ನಿಸಿದರು. 

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.