ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೃತಿ ಬರಲಿ
Team Udayavani, Dec 23, 2019, 3:00 AM IST
ಪಿರಿಯಾಪಟ್ಟಣ: ಸಾಹಿತ್ಯಕ್ಕೆ ವಿದ್ಯೆಗಿಂತ ಜ್ಞಾನ ಮುಖ್ಯ, ಅದಕ್ಕಾಗಿ ಕನ್ನಡಿಗರಾದ ನಾವು ಜಗತ್ತಿನ ಎಲ್ಲಾ ಭಾಷೆಗಳನ್ನು ಪ್ರೀತಿಸೋಣ, ಕನ್ನಡ ಭಾಷೆಯನ್ನು ಮೆರೆಸೋಣ ಎಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ , ಹಿರಿಯ ಶಿಕ್ಷಣತಜ್ಞ ಟಿ.ಸಿ ವಸಂತರಾಜೇ ಅರಸ್ ತಿಳಿಸಿದರು.
ತಾಲೂಕಿನ ಬೆಟ್ಟದಪುರದ ಕನ್ನಡ ಮಠದ ಆವರಣದಲ್ಲಿ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 3ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಮತ್ತೂಬ್ಬರನ್ನು ದೂಷಿಸುವ, ಶೋಷಿಸುವ, ಹೀಯಾಳಿಸುವ ಮತ್ತು ತನ್ನನ್ನು ತಾನು ಹೋಗಳಿಕೊಳ್ಳುವ, ಬಿಂಬಿಸುವ ರೀತಿಯಲ್ಲಿ ಸಾಹಿತ್ಯಗಳು ರಚನೆಯಾಗಬಾರದು.
ಯುವ ಸಾಹಿತಿಗಳು ತಮ್ಮ ಬರವಣಿಗೆಯ ಮೂಲಕ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ರೀತಿಯಲ್ಲಿ ಕೃತಿ ಮತ್ತು ಸಾಹಿತ್ಯ ರಚಿಸಬೇಕು. ಇಂದು ಸರಳ ಸಾಹಿತ್ಯ ರಚನೆ ಅವಶ್ಯಕತೆ ಇದ್ದು ಯುವ ಸಾಹಿತಿಗಳು ಇತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಕರ್ನಾಟಕದಲ್ಲಿ ಶಿಕ್ಷಣ ಇಲಾಖೆ ನೀಡುತ್ತಿರುವ ಶಿಕ್ಷಣ ಕ್ರಮದಲ್ಲಿ ಯೋಗ್ಯ ಬದಲಾವಣೆ ಆಗಬೇಕಿದೆ.
ಸುಪ್ರೀಂ ಕೋರ್ಟ್ ಆದೇಶ ನೀಡಿದೆ ಎಂಬ ಕಾರಣಕ್ಕೆ ಖಾಸಗಿ ಶಾಲೆಗಳಿಗೆ 3 ವರ್ಷಗಳ ಹಿಂದಿನಿಂದ ಆಂಗ್ಲ ಮಾಧ್ಯಮವನ್ನು ಪ್ರಾಥಮಿಕ ಹಂತದಿಂದ ಅನುಮತಿ ನೀಡುತ್ತಿದೆ. ಈ ವರ್ಷದಲ್ಲೂ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಜರಾತಿ ಅತಿ ವಿರಳವಾಗಿರುವುದನ್ನು ತಡೆಯಲು ಆಂಗ್ಲ ಮಾಧ್ಯಮವನ್ನು 1ನೇ ತರಗತಿಯಿಂದಲೇ ಪ್ರಾರಂಭಿಸಿದೆ. ಇದರಿಂದ ಕನ್ನಡ ಭಾಷೆಗೆ ದೊ›àಹ ಬಗೆದಂತೆ ಆಗುತ್ತದೆ. ಆದ್ದರಿಂದ ಸರ್ಕರಿ ಮತ್ತು ಖಾಸಗಿ ಶಾಲೆಗಳಲ್ಲಿ 1ನೇ ತರಗತಿಯಿಂದ 10 ತರಗತಿವರೆಗೆ ಕನ್ನಡವನ್ನು ಪ್ರಥಮ ಭಾಷೆಯಾಗಿ ಬಳಸಬೇಕು ಎಂದರು.
ತಾಲೂಕಿಗೆ ತನ್ನದೆ ಆದ ಐತಿಹಾಸಿಕ ಇತಿಹಾಸವಿದ್ದು, ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದಾಗಿದೆ. ಈ ಕಾರ್ಯವನ್ನು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಚ್ಚುಕಟ್ಟಾಗಿ ಮಾಡುತ್ತಿದೆ. ಪರಿಷತ್ತಿನ ವತಿಯಿಂದ ಕನ್ನಡ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿಯೊಬ್ಬರ ವಿಶ್ವಾಸಗಳಿಸಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಇದು ಹೀಗೆಯೇ ಮುಂದುವರೆಯಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.