ಗ್ರಾಮೀಣರಿಗೆ ಸರ್ಕಾರಿ ಸೌಲಭ್ಯಗಳು ತಲುಪಲಿ


Team Udayavani, Feb 17, 2020, 3:00 AM IST

graminarige

ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಅನಿಲ್‌ ಚಿಕ್ಕಮಾದು ತಾಲೂಕಿನ ಎನ್‌.ಬೆಳತ್ತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ 2 ದಿನದ ಗ್ರಾಮವಾಸ್ತವ್ಯ ಮತ್ತು ಆದಿವಾಸಿಗರ ಬುಡಕಟ್ಟು ಉತ್ಸವ ಭಾನುವಾರ ತೆರೆಕಂಡಿತು.

ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ತಾಲೂಕಿನಲ್ಲಿ 4 ಜಲಾಶಯಗಳಿದ್ದು, ಅಪಾರ ವನಸಂಪತ್ತಿರುವ ತಾಲೂಕನ್ನು ಹಿಂದುಳಿದ ಪಟ್ಟಿ ಹೆಸರು ತೆಗೆಯಬೇಕು. ತಾಲೂಕಿನಲ್ಲಿ ಕಾಡಿಂಚಿನ ಗ್ರಾಮಗಳು ಮತ್ತು ಆದಿವಾಸಿಗರೇ ಬಹುಸಂಖ್ಯೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶಗಳ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು ಎಂಬ ಉದ್ದೇಶದಿಂದ ತಾಲೂಕಿನಲ್ಲಿ 3ನೇ ಗ್ರಾಮವಾಸ್ತವ್ಯ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

ಸ್ಥಳದಲ್ಲೇ ಅಧಿಕಾರಿಗಳಿಂದ ಸಮಸ್ಯೆಗೆ ಪರಿಹಾರ: ಕಳೆದ 2 ದಿನಗಳ ಹಿಂದಿನಿಂದ ತಾಲೂಕಿನ ಎನ್‌.ಬೆಳತ್ತೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿರುವುದರ ಎನ್‌.ಬೆಳತ್ತೂರು ಗ್ರಾಪಂ ಆವರಣದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಸ್ಥಳದಲ್ಲಿಯೇ ಅರ್ಹ ಪಲಾನುಭವಿಗಳನ್ನು ತಲುಪಬೇಕು ಎಂಬ ಉದ್ದೇಶದಿಂದ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಆಲಿಸಿ, ಅದಕ್ಕೆ ಸ್ಥಳದಲ್ಲಿಯೇ ಹಲವು ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಂದ ಪರಿಹರಿಸಲಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ: ಗ್ರಾಮ ವಾಸ್ತವ್ಯದಲ್ಲಿ ರಸ್ತೆ, ಮನೆಗಳ ನಿರ್ಮಾಣ, ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ 4.75 ಕೋಟಿ ಅನುದಾನ ಬಿಡುಗಡೆಗೊಳಿಸಿ ಭೂಮಿ ಪೂಜೆ ನೆರವೇರಿಸಲಾಗಿದೆ. ಆಧಾರ್‌ ಕಾರ್ಡ್‌ ಮನೆ ಹಕ್ಕುಪತ್ರಗಳು, ಅಂಗನವಾಡಿ ನೂತನ ಕಟ್ಟಡ ಉದ್ಘಾಟನೆ ಸೇರಿದಂತೆ ವಿಧವಾ ವೇತನ, ವೃದ್ಧಾಪ್ಯ ವೇತನ, ಮನಸ್ವಿನಿ, ಆರೋಗ್ಯ ಕಾರ್ಡ್‌ ವಿತರಣೆ,

ಸ್ಮಶಾನ ಜಾಗ ಒತ್ತುವರಿ ತೆರವು ಸೇರಿದಂತೆ ಇನ್ನಿತರ ಸೇವಾ ಯೋಜನೆಗಳನ್ನು ಎನ್‌.ಬೆಳತ್ತೂರು ಗ್ರಾಮದಲ್ಲಿ ಸ್ಥಳದಲ್ಲಿಯೇ ನೊಂದಾಯಿಸುವುದು ವಾಸ್ತವ್ಯದ ಮುಖ್ಯಉದ್ದೇಶವಾಗಿದೆ. ತಾಲೂಕಿನ ಜನಸಾಮಾನ್ಯರು, ಪಕ್ಷದ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ ಚುನಾಯಿತ ಪ್ರತಿನಿಧಿಗಳು, ತಾಲೂಕಿನ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಿರುವುದಕ್ಕೆ ಶಾಸಕ ಅನಿಲ್‌ ಚಿಕ್ಕಮಾದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಪಂ ಅಧ್ಯಕ್ಷೆ ಪರಿಮಳ ಶ್ಯಾಂ ಮಾತನಾಡಿ, ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗಷ್ಟೇ ಅಲ್ಲದೆ ಬುಡಕಟ್ಟು ಉತ್ಸವ ಆಚರಣೆಗೆ ಶಾಸಕ ಅನಿಲ್‌ ಚಿಕ್ಕಮಾದು ಪರಿಶ್ರಮ ಕಾರಣವಾಗಿದೆ. ಈ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶಾಸಕರೊಡಗೂಡಿ ಸಹಕಾರ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಪಂ ಅಧ್ಯಕ್ಷ ರಾಜು, ಉಪಾಧ್ಯಕ್ಷೆ ದೊಡ್ಡಮಣಿ, ಜಿಪಂ ಸದಸ್ಯ ವೆಂಕಟಸ್ವಾಮಿ, ತಾಪ ಸದಸ್ಯೆ ಸರೋಜಿನಿ ಬಲರಾಮ, ಪುರಸಭೆ ಸದಸ್ಯ ಎಚ್‌.ಸಿ.ನರಸಿಂಹಮೂರ್ತಿ, ಮಧು, ರಾಜು, ಆದಿವಾಸಿ ಮುಖಂಡ ಕಾವೇರ, ಎಂ.ಡಿ.ಮಂಚಯ್ಯ, ಪ್ರದೀಪ್‌, ಬಸಪ್ಪ, ನಾಗರಾಜು, ತಹಶೀಲ್ದಾರ್‌ ಆರ್‌.ಮಂಜುನಾಥ್‌, ಇಒ ರಾಮಲಿಂಗಯ್ಯ, ಗಿರಿಜನ ಅಭಿವೃದ್ಧಿ ಅಧಿಕಾರಿ ಚಂದ್ರಪ್ಪ, ಬಿಇಒ ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಚನ್ನಪ್ಪ ಮೊದಲಾದವರಿದ್ದರು.

ಬುಡಕಟ್ಟು ಉತ್ಸವ ಅದ್ಧೂರಿ: ತಾಲೂಕಿನ ಆದಿವಾಸಿಗರ ಬುಡಕಟ್ಟು ಉತ್ಸವ ಮತ್ತು ಗ್ರಾಮವಾಸ್ತವ್ಯ ಎರಡು ಕಾರ್ಯಕ್ರಮಗಳು ಒಂದೇ ವೇದಿಕೆಯಲ್ಲಿ ನಡೆದವು. ಆದಿವಾಸಿಗರು ಆರಂಭದಲ್ಲಿ ಕಾರಾಪುರ ವೃತ್ತದಿಂದ ಕಂಸಾಳೆ, ಕೋಲಾಟ, ನೃತ್ಯ, ಕರಡಿ ಕುಣಿತ, ಡೊಳ್ಳುಕುಣಿತ, ಎರವ ಕುಣಿತ ಸೇರಿದಂತೆ ಇನ್ನಿತರ ಆದಿವಾಸಿ ಪರಂಪರೆಯನ್ನು ಪ್ರತಿಬಿಂಬಿಸುವ ವಿವಿಧ ನೃತ್ಯ ಮತ್ತು ಕಲಾತಂಡಗಳ ಮೆರವಣಿಗೆಗೆ ಶಾಸಕ ಅನಿಲ್‌ ಡೊಳ್ಳು ಬಾರಿಸಿ ಚಾಲನೆ ನೀಡಿದರು.

ಆದಿವಾಸಿಗರ ಕಾರ್ಯಕ್ರಮ ಕುರಿತು ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ಬುಡಕಟ್ಟು ಉತ್ಸವ ಪ್ರತಿ ಸಾಲಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿತ್ತು. ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ತಾಲೂಕಿನ ಎನ್‌.ಬೆಳತ್ತೂರು ಗ್ರಾಮದಲ್ಲಿ ಆಚರಿಸಿ, ಆದಿವಾಸಿಗರ ಸಾಂಪ್ರದಾಯಿಕ ಕಲೆ ಸಂಸ್ಕೃತಿ ಗ್ರಾಮೀಣ ಪ್ರದೇಶಗಳ ಜನತೆ ತಿಳಿಸುವುದರ ಜೊತೆಯಲ್ಲಿ ಕಲೆ ಸಂಸ್ಕೃತಿ ಉಳಿಸುವ ಉದ್ದೇಶವಿದಾಗಿದೆ ಎಂದು, ಆದಿವಾಸಿಗರ ಬುಡಕಟ್ಟು ಉತ್ಸವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.