ಲಕ್ಷ-ವೃಕ್ಷ ಬೆಳೆಸುವವರೆಗೂ ಆಂದೋಲನ ನಡೆಯಲಿ


Team Udayavani, Sep 7, 2019, 3:00 AM IST

laksha

ಮೈಸೂರು: ಪರಿಸರ ಸಂರಕ್ಷಣೆ ಕಾರ್ಯಕ್ರಮ ಹಾಗೂ ವನಮಹೋತ್ಸವ ಕೇವಲ ಭಾಷಣಕ್ಕೆ ಸೀಮಿತವಾಗದೇ, ಅದು ತನ್ನ ಮೂಲ ಉದ್ದೇಶ ಈಡೇರುವ ತನಕ ನಿರಂತರವಾಗಿ ನಡೆಯುತ್ತಿರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಎಚ್‌.ವಿ.ರಾಜೀವ್‌ ಸ್ನೇಹಬಳಗ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ಜೆಪಿ ನಗರದ ಡಾ.ಪುಟ್ಟರಾಜ ಗವಾಯಿಗಳ ಕ್ರೀಡಾಂಗಣದಲ್ಲಿ “ಹಸಿರು ಮೈಸೂರಿಗಾಗಿ ಲಕ್ಷ-ವೃಕ್ಷ ಆಂದೋಲನ ಉದ್ಘಾಟಿಸಿ ಮಾತನಾಡಿದರು.

ಶಾಲೆಗಳಲ್ಲಿ ಪ್ರತಿ ವರ್ಷ ಆಚರಿಸುವ ವನಮಹೋತ್ಸವದಲ್ಲಿ ಒಂದು ಗಿಡ ನೆಟ್ಟು, ಭಾಷಣ ಮಾಡಿ ಕಾರ್ಯಕ್ರಮ ಮುಗಿಸಿ ಕೈತೊಳೆದುಕೊಳ್ಳುವಂತೆ, ಲಕ್ಷ-ವೃಕ್ಷ ಆಂದೋಲನ ಆಗಬಾರದು. ಬದಲಿಗೆ ಅದರ ಮೂಲ ಉದ್ದೇಶ ಈಡೇರುವ ತನಕ ನಡೆಯುತ್ತಿರಬೇಕು ಎಂದು ತಿಳಿಸಿದರು.

ಸಾಕಷ್ಟು ರೈತರು ಭತ್ತ ಬೆಳೆಯುವುದನ್ನು ನಿಲ್ಲಿಸಿರುವ ಕಾರಣ ಅಂತರ್ಜಲ ಕುಸಿದಿದೆ. ಭತ್ತದ ಬೆಳೆಗೆ ಜಮೀನಿನಲ್ಲಿ ಸದಾಕಾಲ 4 ಇಂಚು ನೀರನ್ನು ನಿಲ್ಲಿಸುವುದರಿಂದ ಅಂತರ್ಜಲ ವೃದ್ಧಿಯಾಗುತ್ತದೆ. ರೈತರು ಹೆಚ್ಚು ಭತ್ತದ ಕೃಷಿ ಮಾಡಬೇಕು. ನೀರು, ಗಾಳಿ, ಸಸ್ಯ ಅಮೂಲ್ಯ ಸಂಪತ್ತು, ಈಗಾಗಲೇ ಇವುಗಳನ್ನು ಸಾಧ್ಯವಾದಷ್ಟು ನಾಶಪಡಿಸಿದ್ದೇವೆ. ಇನ್ನಾದರೂ ಇದನ್ನು ಮುಂದಿನ ಪೀಳಿಗೆಗೆ ಕಾಪಾಡುವುದು ನಮ್ಮ ಕರ್ತವ್ಯ ಎಂದರು.

ಹಸಿರು ಮೈಸೂರು ಸಂಕಲ್ಪ: ಅವಧೂತ ದತ್ತ ಪೀಠದ ದತ್ತ ವಿಜಯಾನಂದ ಸ್ವಾಮೀಜಿ ಮಾತನಾಡಿ, ಭೂಮಿಯನ್ನು ನಾವು ಕೇವಲ ಭೂಮಿ ಎಂದು ಕರೆಯುವುದಿಲ್ಲ. ಭೂದೇವಿ, ಭೂಮಾತೆ, ಭೂತಾಯಿ ಎಂದು ಗೌರವಿಸುತ್ತೇವೆ. ಇಂತಹ ಭೂಮಿ ನಮಗೆ ಎಲ್ಲವನ್ನೂ ಕೊಟ್ಟಿದ್ದರೂ ನಾವು ಅದಕ್ಕೆ ವಿಷವನ್ನು ತಿನ್ನಿಸುವುದನ್ನು ಇನ್ನೂ ಬಿಟ್ಟಿಲ್ಲ.

ಹಸಿರಿನಿಂದ ಕಂಗೊಳಿಸುತ್ತಿದ್ದ ಮೈಸೂರು ಇಂದು ಕಾಂಕ್ರಿಟ್‌ ಕಾಡಾಗಿದೆ. ಈ ಹಿಂದೆ ಇಲ್ಲಿ ಮೇ ತಿಂಗಳಲ್ಲೂ ಚಳಿಯಾಗುತ್ತಿತ್ತು. ಈಗ ಡಿಸೆಂಬರ್‌ ತಿಂಗಳಲ್ಲೂ ಸೆಕೆಯಾಗುವಂತಹ ವಾತಾವರಣ ಸೃಷ್ಟಿಯಾಗಿದೆ. ವೃಕ್ಷಗಳನ್ನು ಕಾಪಾಡುವುದೇ ಒಂದು ಧರ್ಮವಾಗಿದೆ. ಮೈಸೂರಿನ ಹಿಂದಿನ ಅದ್ಭುತ ವಾತಾವರಣ ಮರುಕಳಿಸಲು ನಾವೆಲ್ಲಾ ಹಸಿರು ಮೈಸೂರು ಸಂಕಲ್ಪ ತೊಡಬೇಕು ಎಂದರು.

ಪೋಷಣೆ: ಸುತ್ತೂರು ಮಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಎಲ್ಲರೂ ಮರಗಳನ್ನು ವಿವಿಧ ಉಪಯೋಗಗಳಿಗೆ ಬಳಸುತ್ತಾರೆ. ಆದರೆ, ಮರಗಳು ಒಣಗಿದಾಗ ಅವುಗಳಿಗೆ ನೀರುಣಿಸುವ ಕೆಲಸ ಯಾರೂ ಮಾಡುವುದಿಲ್ಲ. ಈಗಾಗಲೇ ವಿವಿಧ ಕಾರಣಗಳಿಂದ ಕಾಡುಗಳು ನಾಶವಾಗುತ್ತಿವೆ. ಇದರಿಂದ ಪ್ರಕೃತಿ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಕಾಡುಗಳ ರಕ್ಷಣೆ ಮತ್ತು ವೃಕ್ಷಗಳನ್ನು ಬೆಳೆಸುವುದು ನಮ್ಮ ಗುರಿಯಾಗಬೇಕು ಎಂದು ಹೇಳಿದರು.

ಹಸಿರು ನಗರ: ಶಾಸಕ ತನ್ವೀರ್‌ ಸೇಠ್ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ 10 ಸಾವಿರ ಗಿಡಗಳನ್ನು ನೆಡುವ ಆಸೆ ನನಗಿದೆ. ಶೀಘ್ರದಲ್ಲೆ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಲ್ಲಿ ಸಸಿ ನಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜತೆಗೆ ಎನ್‌.ಆರ್‌.ಕ್ಷೇತ್ರದ ಉದ್ಯಾನವನಗಳು, ರುದ್ರಭೂಮಿ, ಶಾಲಾ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಿ ಮೈಸೂರನ್ನು ಹಸಿರು ನಗರವನ್ನಾಗಿ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರಾಘವನ್‌, ಶ್ರೀಕಾಂತ್‌, ಗಂಗಾಧರಯ್ಯ, ಎ.ಸಿ.ಲಕ್ಷ್ಮಣ್‌, ದಶರಥ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ಆಯೋಜಿಸಿದ್ದ ಎಚ್‌.ವಿ.ರಾಜೀವ್‌ ಅವರು, ಸದ್ಗುರು ಅವರ ಕಾವೇರಿ ಕೂಗು ಆಂದೋಲನ ಬೆಂಬಲಿಸಿ ಒಂದು ಸಾವಿರ ಸಸಿ ನೆಡಲು 42 ಸಾವಿರ ರೂ.ಗಳ ಚೆಕ್‌ ನೀಡಿದರು.

ಮೇಯರ್‌ ಪುಷ್ಪಲತಾ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಧರ್ಮಸ್ಥಳ ಗ್ರಾಮೀಣ ಯೋಜನೆ ಬಿ.ಸಿ. ಟ್ರಸ್ಟ್‌ ನಿರ್ದೇಶಕ ವಿ.ವಿಜಯಕುಮಾರ್‌ ನಾಗನಾಳ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಎಂ.ನಾಗಭೂಷಣ್‌, ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌ ಇತರರಿದ್ದರು.

ಒಬ್ಬರು ಒಂದು ಸಸಿ ನೆಡುವ ಸಂಕಲ್ಪ: 30 ವರ್ಷಗಳ ಹಿಂದೆ ಚಾಮುಂಡಿ ಬೆಟ್ಟದಲ್ಲಿ ನಿಂತು ಮೈಸೂರನ್ನು ನೋಡಿದರೆ, ಕೇವಲ ಅರಮನೆ ಮಾತ್ರ ಕಾಣುತ್ತಿತ್ತು. ಉಳಿದ ಎಲ್ಲವೂ ಹಸಿರಿನಿಂದ ಕಂಗೋಳಿಸಿ ಮೈಸೂರು ಒಂದು ಸುಂದರ ತೋಟದಂತೆ ಕಾಣುತ್ತಿತ್ತು. ಈಗ ಹಸಿರೇ ಕಾಣುತ್ತಿಲ್ಲ. ಆದರೂ ನಾವು ಸುಮ್ಮನೆ ಕೂರಬಾರದು. ನಗರದಲ್ಲಿ 13 ಲಕ್ಷ ಜನಸಂಖ್ಯೆ ಇದ್ದು, ಒಬ್ಬರು ಒಂದು ಮರವನ್ನು ನೆಡುವ ಸಂಕಲ್ಪ ಮಾಡಿದರೆ, ಇನ್ನು ಕೆಲವೇ ವರ್ಷಗಳಲ್ಲಿ 13 ಲಕ್ಷ ಮರಗಳನ್ನು ಕಾಣಬಹುದು ಎಂದು ಸದ್ಗುರು ಹೇಳಿದರು.

ಗಿಡದ ಮೇಲೆ ಪೋಷಿಸುವವರ ಹೆಸರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮೂಲಕ 30 ವರ್ಷದಿಂದ ನಾವು ಸಸಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ಪ್ರತಿ ಗಿಡದ ಮೇಲೂ ಅದನ್ನು ಪೋಷಿಸುವವರ ಹೆಸರು ಹಾಕುವ ಕಾರಣ ಸಾರ್ವಜನಿಕರು ಅದನ್ನು ಖಂಡಿತಾ ಕಾಪಾಡುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.