ಶಿಕ್ಷಕರು ಶ್ರದ್ಧೆ, ನಿಷ್ಠೆಯಿಂದ ಕಾರ್ಯನಿರ್ವಹಿಸಲಿ
Team Udayavani, Nov 10, 2019, 3:00 AM IST
ಕೆ.ಆರ್.ನಗರ: ಭಾರತವನ್ನು ಸದೃಢವಾಗಿಸುವ ಭಾವಿ ಪ್ರಜೆಗಳನ್ನು ರೂಪಿಸುವ ಸಂಪೂರ್ಣ ಜವಾಬ್ದಾರಿ ಶಿಕ್ಷಕರದ್ದು. ಅತ್ಯಂತ ಜಾಗೃತೆ ವಹಿಸಿ ತಪ್ಪುಗಳನ್ನು ಮಾಡದೇ, ಶ್ರದ್ಧೆ ಹಾಗೂ ಶಿಸ್ತಿನಿಂದ ಕಾರ್ಯನಿರ್ವಹಿಸಿದರೆ ಖಂಡಿತ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಸಾ.ರಾ.ಮಹೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಪುರಸಭೆ ಬಯಲು ರಂಗ ಮಂದಿರದಲ್ಲಿ ತಾಲೂಕು ಆಡಳಿತ, ತಾಪಂ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಬಿಇಒ ಕಾರ್ಯಾಲಯ ಮತ್ತು ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ನಿಮಿತ್ತ ಶನಿವಾರ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕಾಗಿ ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಕಳೆದ 12 ವರ್ಷಗಳಲ್ಲಿ ಶಿಕ್ಷಕರ ಪರವಾಗಿ ಕೆಲಸ ನಿರ್ವಹಿಸಿದ ತೃಪ್ತಿ ನನಗಿದೆ. ನನ್ನ ತಂದೆಯೂ ಶಿಕ್ಷಕರಾಗಿದ್ದರು ಎಂದು ಹೇಳಿದರು. ನಗರದ ಬಿಇಒ ಕಚೇರಿಯಲ್ಲಿ ಆಡಳಿತ ವ್ಯವಸ್ಥೆ ಮತ್ತಷ್ಟು ಬಿಗಿಯಾಗಬೇಕು ಎಂದು ಬಿಇಒ ಎಂ.ರಾಜುಗೆ ಸೂಚಿಸಿ, ನಾವು ಪ್ರಾಮಾಣಿಕರಾದರೆ ಸಾಲದು ನಮ್ಮ ಜತೆ ಕೆಲಸ ಮಾಡುವವರೂ ಜನಮುಖೀಯಾಗಿ ಇರಬೇಕು ಎಂದರು.
ಮೈಸೂರು ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪೊ›. ಮೈಸೂರುಕೃಷ್ಣಮೂರ್ತಿ ಪ್ರಧಾನ ಭಾಷಣ ಮಾಡಿದರು. ನಿವೃತ್ತ ಶಿಕ್ಷಕರು, ಪ್ರಶಸ್ತಿ ಪುರಸ್ಕೃತರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಶಿಕ್ಷಕರ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ತಾಪಂ ಮಾಜಿ ಅಧ್ಯಕ್ಷೆ ಮಲ್ಲಿಕಾ ರವಿಕುಮಾರ್, ಉಪನಿರ್ದೇಶಕ ಡಾ.ಪಾಂಡುರಂಗ, ತಹಶೀಲ್ದಾರ್ ಎಂ.ಮಂಜುಳಾ, ತಾಪಂ ಇಒ ಎಂ.ಎಸ್.ರಮೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ. ಪ್ರಸನ್ನಕುಮಾರ್, ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನಿವೃತ್ತ ಉಪನ್ಯಾಸಕ ಎಸ್.ಆರ್.ರಾಮೇಗೌಡ, ಎಪಿಎಂಸಿ ಅಧ್ಯಕ್ಷ ಕುಪ್ಪಳ್ಳಿ ಸೋಮಶೇಖರ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜೆ.ಅರುಣ್‌ಕುಮಾರ್, ಬಿಆರ್‌ಸಿ ಟಿ.ಆರ್.ರುದ್ರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರದೀಪ್‌ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.