ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಪಾಲಿಸೋಣ

Team Udayavani, May 19, 2017, 12:19 PM IST

mys3.jpg

ಮೈಸೂರು: ಬುದ್ಧ, ಬಸವ, ಅಂಬೇಡ್ಕರ್‌ರ ತತ್ವ-ಸಿದ್ಧಾಂತಗಳನ್ನು ಸಮಾಜದ ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದು ಶಾಸಕ ಎಂ.ಪಿ. ನರೇಂದ್ರಸ್ವಾಮಿ ಹೇಳಿದರು.

ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಬುದ್ಧ- ಬಸವ-ಅಂಬೇಡ್ಕರ್‌ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೌಶಲ್ಯ, ಶಿಕ್ಷಣ, ಉದ್ಯಮ, ಪ್ರತಿಭೆಗಳನ್ನು ರೂಪಿಸಿ ಶಿಕ್ಷಣ-ಸಂಘಟನೆ- ಹೋರಾಟ ಬೆಳೆಸಬೇಕು. ಈ ಮೂವರು ಆದರ್ಶ ವ್ಯಕ್ತಿಗಳು ಅನುಸರಿಸಿದ ಮಾರ್ಗವನ್ನು ಪಾಲಿಸಬೇಕು ಎಂದರು.

ಬುದ್ಧ ನೆಡೆಗೆ ಹೋಗುವುದೆಂದರೆ ಜಾnನದ ಕಡೆಗೆ ಹೋಗುವುದು ಎಂದರ್ಥ. ಬುದ್ಧ ಇಡೀ ಜಗತಿನ ಜಾnನ ಬೆಳಕು. ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ ದೊರಕ ಬೇಕಾದರೆ ಮುಖ್ಯವಾಗಿ ಅನಿಷ್ಠ ಪದ್ಧತಿಗಳಿಂದ ದೂರವಿರಬೇಕು. ಬಡವ, ಶ್ರೀಮಂತ, ಮೇಲು-ಕೀಳುಗಳಿಂದ ಕೂಡಿದ ಹಿಂದೂ ಧರ್ಮದಲ್ಲಿ ಧ್ವಂಧ್ವ ಕಾಣುತ್ತಿದ್ದೇವೆ. ಈ ಅನಿಷ್ಠ ಪದ್ಧತಿಗಳನ್ನು 12ನೇ ಶತಮಾನದಲ್ಲೇ ಬಸವಣ್ಣ ಗುರುತಿಸಿ, ಅದರ ವಿರುದ್ಧ ಹೋರಾಡಿದ್ದಾರೆ ಎಂದು ತಿಳಿಸಿದರು.

ಅಂಬೇಡ್ಕರ್‌ ಸಂವಿಧಾನ ಬರೆದು, ಶೋಷಿತ ವರ್ಗ, ಅಸ್ಪೃಶ್ಯತೆ, ಮಹಿಳೆಯರು, ಕಾರ್ಮಿಕರ, ಶ್ರೇಯೋಭಿವೃದ್ಧಿಗೆ ದಿಟ್ಟ ಹೋರಾಟ ಮಾಡಿದ್ದಾರೆ. ಅಂಬೇಡ್ಕರ್‌ ನಮಗೆ ಸಂವಿಧಾನ ನೀಡದೆ ಇದ್ದರೆ ನಾವಿಂದು ಸಮಾಜದಲ್ಲಿ ಭಯಭೀತಿಯಿಂದ ಜೀವನ ನಡೆಸಬೇಕಾಗಿತ್ತು. ಸಮಾಜದ ಪ್ರತಿಯೊಂದು ವರ್ಗದ ಜನರಿಗೂ ಶಿಕ್ಷಣ ದೊರೆಯಬೇಕು, ಆ ಮೂಲಕ ಸಮಾಜದಲ್ಲಿ ಅನಿಷ್ಠ ಪದ್ಧತಿ ನಾಶವಾಗಬೇಕೆಂದು ಅವರು ಬದುಕಿರುವ ತನಕ ಹೋರಾಟ ಮಾಡಿದರು ಎಂದು ನೆನೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೆ ತರುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಅನ್ನ ಸಿಗುವಂತೆ ಮಾಡಿದ್ದಾರೆ, ಅನ್ನಕ್ಕಾಗಿ ಹೋರಾಡಬೇಕಿದ್ದ ಸಂಕಷ್ಟ ದೂರಮಾಡುವ ಮೂಲಕ ಅಂಬೇಡ್ಕರ್‌ರ ಆಶಯವನ್ನು ಪೂರೈಸಿದ್ದಾರೆ. ಇದನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದರು.

ಮೈಸೂರು ವಿವಿ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಮಹೇಶ್‌ ಚಂದ್ರಗುರು, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಶಿವರಾಜಪ್ಪ, ಶಾಸಕ ಎಂ.ಕೆ.ಸೋಮಶೇಖರ್‌, ವರುಣ ಕ್ಷೇತ್ರ ವಸತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ಮೈಸೂರು ವಿವಿ ಪ್ರಭಾರ ಕುಲಪತಿ ಪೊ›.ದಯಾನಂದ ಮಾನೆ, ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕ ಪ್ರೊ.ರುದ್ರಯ್ಯ, ಮೈಸೂರು ವಿವಿ ಆಡಳಿತಾಧಿಕಾರಿ ಪ್ರೊ.ಸಿ.ರಾಮಸ್ವಾಮಿ, ಮೈಸೂರು ವಿವಿ ಸಿಂಡಿಕೇಟ್‌ ಸದಸ್ಯ ಎಂ.ಎಸ್‌.ಎಸ್‌. ಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.