ಕೆಂಪೇಗೌಡರ ಬಗ್ಗೆ ಸಂಶೋಧನೆ ನಡೆಯಲಿ: ಜಿಟಿಡಿ
Team Udayavani, Jun 28, 2019, 8:52 AM IST
ಮೈಸೂರು: ನಾಡಪ್ರಭು ಕೆಂಪೇಗೌಡರ ಬಗೆಗೆ ಹೆಚ್ಚಿನ ಸಂಶೋಧನೆಗಳಾಗಬೇಕು ಜೊತೆಗೆ ಕೆಂಪೇಗೌಡರ ಪುಣ್ಯಭೂಮಿ ಅಭಿವೃದ್ಧಿಯಾಗ ಬೇಕು ಎಂಬ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದೇವೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 509ನೇ ಜಯಂತಿ ಉದ್ಘಾಟಿಸಿ ಮಾತನಾಡಿ, ಹಿಂದೆಲ್ಲಾ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಗಳು ಬೆಂಗಳೂರಿಗೆ ಸೀಮಿತವಾಗಿ ನಡೆಯುತ್ತಿತ್ತು. 3 ವರ್ಷಗಳ ಹಿಂದೆ ಮೈಸೂರು ಜಿಲ್ಲೆಯ ಒಕ್ಕಲಿಗ ಸಂಘ ಟನೆಗಳೆಲ್ಲಾ ಒಟ್ಟಾಗಿ ಸೇರಿ ಮಹಾರಾಜ ಕಾಲೇಜು ಮೈದಾನದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿ ಯಾಗಿ ಆಚರಿಸಿ, ನಾಡಪ್ರಭು ಕೆಂಪೇಗೌಡರ ಸಮಾಧಿ ಹಾಗೂ ಅವರು ಕಟ್ಟಿಸಿದ ದೇವಾ ಲಯಗಳ ಅಭಿವೃದ್ಧಿ ಮಾಡಿಸುವ ಜೊತೆಗೆ ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಬೇಕು. ಕೆಂಪೇಗೌಡರ ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಮಾಡಿ, ಇತರೆ ಜಯಂತಿಗಳಂತೆ ಕೆಂಪೇಗೌಡರ ಜಯಂತಿಗೂ ಸರ್ಕಾರಿ ರಜೆ ಘೋಷಿಸಿ, ಇಲ್ಲವೇ ಇತರೆ ಜಯಂತಿಗಳ ರಜೆಯನ್ನು ರದ್ದುಪಡಿಸಿ ಎಂದು ನಿರ್ಣಯ ಕೈಗೊಂಡು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿತ್ತು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದಲ್ಲದೆ, ಪ್ರಾಧಿಕಾರಕ್ಕೆ 10 ಕೋಟಿ ರೂ. ಅನುದಾನವನ್ನೂ ನೀಡಿದ್ದರು. ಜೊತೆಗೆ ಕೆಂಪೇಗೌಡ ಜಯಂತಿಯನ್ನು ಸರ್ಕಾರದ ವತಿಯಿಂದಲೇ ಆಚರಿಸುವಂತೆ ಆದೇಶ ಹೊರಡಿಸಿದ್ದರಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಒಕ್ಕಲಿಗ ಸಮುದಾಯದ ಯುವಕರು ದುಬೈ, ಅಮೆರಿಕ ಸೇರಿದಂತೆ ವಿದೇಶಗಳಲ್ಲೂ ಕೆಂಪೇಗೌಡ ಜಯಂತಿ ಆಚರಿಸುತ್ತಾರೆ. ದೆಹಲಿಯಲ್ಲೂ ಒಮ್ಮೆ ಕೆಂಪೇಗೌಡರ ಅಂತಾರಾಷ್ಟ್ರೀಯ ಉತ್ಸವ ಆಚರಿಸಲಾಗಿತ್ತು. ಜಯಂತಿ ಆಚರಣೆಗಳ ಜೊತೆಗೆ ನಾಡಪ್ರಭು ಕೆಂಪೇಗೌಡರ ಬಗ್ಗೆ ಇನ್ನೂ ಹೆಚ್ಚಿನ ಸಂಶೋ ಧನೆಗಳಾಗಿ ಅವರ ಜೀವನ-ಸಾಧನೆಗಳ ಬಗೆಗೆ ಬೆಳಕು ಚೆಲ್ಲುವ ಕೆಲಸವಾಗಬೇಕು ಎಂದರು.
ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು. ಮೈಸೂರು ವಿವಿ ಪ್ರಸಾರಾಂಗ ನಿರ್ದೇಶಕ ಎಂ.ಜಿ. ಮಂಜು ನಾಥ್, ನಾಡಪ್ರಭು ಕೆಂಪೇಗೌಡರ ಜೀವನ – ಸಾಧನೆ ಕುರಿತು ಮುಖ್ಯ ಭಾಷಣ ಮಾಡಿದರು.
ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ನಗರಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್, ಉಪಾಧ್ಯಕ್ಷೆ ಗೌರಮ್ಮ ಸೋಮ ಶೇಖರ್, ಉಪ ಮೇಯರ್ ಶಫಿ ಅಹಮದ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಪಂ ಸಿಇಒ ಕೆ.ಜ್ಯೋತಿ, ಜಿಪಂ ಸದಸ್ಯೆ ಮಂಗಳಾ ಸೋಮಶೇಖರ್, ಅರ್ಪಿತಾ ಸಿಂಹ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಮಹಾಲಿಂಗಂ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ. ಮಹ ದೇವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅದ್ಧೂರಿ ಮೆರವಣಿಗೆ: ಸಭಾ ಕಾರ್ಯ ಕ್ರಮಕ್ಕೂ ಮುನ್ನ ಅರಮನೆ ಕೋಟೆ ಆಂಜ ನೇಯಸ್ವಾಮಿ ದೇವಸ್ಥಾನ ಮುಂಭಾಗದಿಂದ ಕಲಾಮಂದಿರದವರೆಗೆ ನಾಡಪ್ರಭು ಕೆಂಪೇ ಗೌಡ ಜಯಂತ್ಯುತ್ಸವ ಸಮಿತಿವತಿಯಿಂದ ಅದ್ಧೂರಿ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.