ಇನ್ನರ್ ವ್ಹೀಲ್ ಕ್ಲಬ್‌ನಿಂದ ಪಾಲಿಕೆಗೆ ಕಸದ ಬುಟ್ಟಿ ಕೊಡುಗೆ
Team Udayavani, Jun 3, 2017, 1:12 PM IST
ಮೈಸೂರು: ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಸ್ವತ್ಛತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಮೈಸೂರು ಮಹಾನಗರ ಪಾಲಿಕೆಗೆ ಒಂಭತ್ತು ಸ್ಟೀಲ್ ಕಸದ ಬುಟ್ಟಿಗಳನ್ನು ನೀಡಲಾಯಿತು.
ನಗರದ ಚಿಕ್ಕಗಡಿಯಾರ ಗೋಪುರದ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮೇಯರ್ ಎಂ.ಜೆ.ರವಿಕುಮಾರ್, ಇನ್ನರ್ ವ್ಹೀಲ್ ಕ್ಲಬ್‌ನಿಂದ ನೀಡಲಾದ ಕಸದ ಬುಟ್ಟಿಗಳನ್ನು ಪಡೆದು, ಸಾರ್ವಜನಿಕ ಬಳಕೆಗೆ ಅರ್ಪಿಸಿದರು.
ಪಾಲಿಕೆ ಆಯುಕ್ತ ಜಿ.ಜಗದೀಶ್ ಮಾತನಾಡಿ, ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ಕಸದ ಬುಟ್ಟಿಗಳಲ್ಲಿ ಹಾಕುವುದರಿಂದ ನಮ್ಮ ಸುತ್ತಲಿನ ಪರಿಸರದ ಸ್ವತ್ಛತೆ ಕಾಪಾಡಿಕೊಳ್ಳಬಹುದು. ಇಲ್ಲದಿದ್ದಲ್ಲಿ ನಗರದ ನೈರ್ಮಲ್ಯ ಹಾಳಾಗಿ ಹೋಗಲಿದೆ.
ಈ ಹಿಂದೆ ದೇಶದ ಮೊದಲ ಸ್ವತ್ಛ ನಗರಿ ಎಂಬ ಪಟ್ಟ ಪಡೆದಿದ್ದ ಮೈಸೂರು ಇದೀಗ 5ನೇ ಸ್ಥಾನಕ್ಕೆ ಇಳಿದಿದೆ. ಆದ್ದರಿಂದ ಮುಂದಿನ ಬಾರಿ ಮತ್ತೂಮ್ಮೆ ಸ್ವತ್ಛನಗರಿ ಎಂಬ ಪಟ್ಟ ಪಡೆಯಬೇಕಿದ್ದು, ಅದರಿಂದ ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಬಿಸಾಡದೇ ನಗರದ ಸ್ವತ್ಛತೆ ಕಾಪಾಡುವ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದರು.
ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶಕುಂತಲಾ ಮಣಿ ಮಾತನಾಡಿ, 45 ಸಾವಿರ ವೆಚ್ಚದಲ್ಲಿ 9 ಕಸದ ಬುಟ್ಟಿಗಳನ್ನು ನೀಡಿದ್ದೇವೆ. ನಗರವನ್ನು ಸ್ವತ್ಛವಾಗಿರಿ ಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ದೇವರಾಜ್ ಮಾರುಕಟ್ಟೆಯಲ್ಲಿ ಎರಡು ಹಾಗೂ ಉಳಿದ ಕಸದ ಬುಟ್ಟಿಗಳನ್ನು ಅರಸು ರಸ್ತೆಯಲ್ಲಿ ಸ್ಥಳ ಗುರುತಿಸಿ ಇಡಲು ತೀರ್ಮಾನಿಸಲಾಗಿದೆ.
ಇನ್ನರ್ ವ್ಹೀಲ್ ಕ್ಲಬ್ ಸದಸ್ಯರಾದ ಪುಷ್ಪಲತಾ, ನಾಗಲಕ್ಷೀ, ಸವಿತಾ, ಸೌಮ್ಯಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.