ಮಾಸಾಂತ್ಯಕ್ಕೆ ದಸರಾ ಆನೆಗಳ ಪಟ್ಟಿ ಸಿದ್ಧ: ಮಾಲತಿಪ್ರಿಯಾ
Team Udayavani, Jul 20, 2023, 1:28 PM IST
ಮೈಸೂರು: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು ಈ ತಿಂಗಳ ಅಂತ್ಯದ ಒಳಗಾಗಿ ದಸರೆಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಸಿದ್ಧವಾಗಲಿದೆ. ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮಾಲತಿಪ್ರಿಯಾ ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಆನೆಗಳ ಸಂಪೂರ್ಣ ಅಪಾಸಣೆ: ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳು ಈಗಾಗಲೇ ಮತ್ತಿಗೋಡು ಆನೆ ಶಿಬಿರಕ್ಕೆ ಭೇಟಿ ನೀಡಿ 9 ಆನೆಗಳನ್ನು ಪರಿಶೀಲಿಸಿದ್ದಾರೆ. ಆನೆಗಳ ಸಂಪೂರ್ಣ ಆರೋಗ್ಯದ ತಪಾಸಣೆ ನಡೆಯುತ್ತಿದೆ. ಆನೆಗಳು ಈಗ ಶಿಬಿರದಲ್ಲಿವೆ. ಕಾಡಿನ ಆನೆಗಳನ್ನು ನಾಡಿಗೆ ಸಾಗಿಸುವಾಗ ಅಗತ್ಯವಾದ ಎಲ್ಲ ಎಚ್ಚರಿಕೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆನೆಗಳ ವಯಸ್ಸು, ಅವುಗಳ ಪಾದ ಹೇಗಿವೆ? ಹೆಣ್ಣು ಆನೆಗಳು ಗರ್ಭ ಧರಿಸಿವೆಯೇ? ಈ ಕುರಿತು ಪರೀಕ್ಷಿಸ ಬೇಕಾಗುತ್ತದೆ. ಉತ್ತಮ ಆರೋಗ್ಯವಿರುವ ಆನೆಗಳನ್ನು ಮೈಸೂರು ದಸರಾ ಉತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಡಾ.ಮಾಲತಿಪ್ರಿಯಾ ತಿಳಿಸಿದರು.
ಕಳೆದ ಬಾರಿಯ ನಾಲ್ಕು ಆನೆಗಳು ಈ ಬಾರಿ ಇಲ್ಲ: ಮೈಸೂರು ದಸರೆ ಎಂದರೆ ಆನೆಗಳ ಆಯ್ಕೆ ಮಾಡುವುದೇ ಮೊಟ್ಟ ಮೊದಲ ಕಾರ್ಯವಾಗಿದೆ. ಕಳೆದ ಬಾರಿ ಮೈಸೂರು ದಸರಾದಲ್ಲಿ ಪಾಲ್ಗೊಂಡ ಆನೆಗಳಲ್ಲಿ ನಾಲ್ಕು ಆನೆಗಳು ಈ ಬಾರಿ ದಸರೆಯಲ್ಲಿ ಇರುವುದಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ 14 ಆನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಬಹುದು. ಕಳೆದ ಬಾರಿ ರಾಮಾಪುರ ಕ್ಯಾಂಪ್‌ನ ಆನೆ ಲಕ್ಷ್ಮೀ ಮೈಸೂರಿಗೆ ಬಂದ ನಂತರ ಗಂಡು ಮರಿಗೆ ಜನ್ಮ ನೀಡಿತ್ತು. ಹೀಗಾಗಿ, ಹೆಣ್ಣು ಆನೆಗಳು ಗರ್ಭ ಧರಿಸಿರುವ ಕುರಿತು ಈ ಬಾರಿ ಪರೀಕ್ಷಿಸಲಾಗುತ್ತಿದೆ. ಈ ಕುರಿತು ಉನ್ನತ ಅಧಿಕಾರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ತಿಂಗಳ ಅಂತ್ಯಕ್ಕೆ ದಸರಾ ಆನೆಗಳ ಪಟ್ಟಿ ಸಿದ್ಧವಾಗುತ್ತದೆ ಎಂದು ತಿಳಿಸಿದರು.
ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ ಅರ್ಜುನನಿಗೆ ವಯಸ್ಸಾದ ಕಾರಣ ಪಾಲ್ಗೊಳ್ಳುತ್ತಿಲ್ಲ. ಗೋಪಾಲಸ್ವಾಮಿ ಆನೆ ಕಾಡಾನೆ ದಾಳಿಯಿಂದ ಮೃತಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.