ಸ್ಥಳೀಯ ಸಂಸ್ಥೆ: ಪ್ರತಿನಿಧಿಗಳಿದ್ರೂ ಅಧಿಕಾರಿಗಳ ದರ್ಬಾರು


Team Udayavani, Jun 9, 2019, 3:00 AM IST

staliya

ಮೈಸೂರು: ಹುಣಸೂರು ನಗರಸಭೆ ಹೊರತುಪಡಿಸಿ ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು ನೂತನ ಚುನಾಯಿತ ಪ್ರತಿನಿಧಿಗಳು ಆಯ್ಕೆಯಾದರೂ ಈ ಸಂಸ್ಥೆಗಳಿಗೆ ಜನಪ್ರತಿನಿಧಿಗಳ ಆಡಳಿತದ ಭಾಗ್ಯ ಒದಗಿಬಂದಿಲ್ಲ.

2018ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಅವಧಿಪೂರ್ಣಗೊಂಡ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ 2018ರ ಆಗಸ್ಟ್‌ 29ರಂದು ಚುನಾವಣೆ ನಡೆಸಿ, ಸೆಪ್ಟೆಂಬರ್‌ 3ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಹೊರಬಿದ್ದಿತ್ತು.

ಆಡಳಿತಾಧಿಕಾರಿಗಳ ದರ್ಬಾರ್‌: ಈ ಪೈಕಿ ಜಿಲ್ಲೆಯ ತಿ.ನರಸೀಪುರ, ಪಿರಿಯಾಪಟ್ಟಣ ಹಾಗೂ ಎಚ್‌.ಡಿ.ಕೋಟೆ ಪುರಸಭೆಗಳಿಗೆ ಚುನಾವಣೆ ನಡೆದು ಚುನಾಯಿತ ಪ್ರತಿನಿಧಿಗಳು ಆಯ್ಕೆಯಾಗಿ ಬರೋಬ್ಬರಿ 11 ತಿಂಗಳಾದರೂ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ ನಡೆಸಲು ಸರ್ಕಾರ ಮೀನಮೇಷ ಎಣಿಸುತ್ತಿರುವುದರಿಂದ ಚುನಾಯಿತ ಪ್ರತಿನಿಧಿಗಳು ಅಧಿಕಾರವಿಲ್ಲದೆ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಲಾಗದೆ ಪರಿತಪಿಸುತ್ತಿದ್ದರೆ, ಹೊಸ ಚುನಾಯಿತ ಕೌನ್ಸಿಲ್‌ ಅಸ್ತಿತ್ವಕ್ಕೆ ಬಾರದಿರುವುದರಿಂದ ಸರ್ಕಾರವೇ ನೇಮಿಸಿರುವ ಆಡಳಿತಾಧಿಕಾರಿಗಳ ದರ್ಬಾರು ಮುಂದುವರಿದಿದೆ.

ಎಲ್ಲಾ ಕಡೆ ಆಡಳಿತಾಧಿಕಾರಿಗಳ ನೇಮಕ: ಹುಣಸೂರು ನಗರಸಭೆಯ ಚುನಾಯಿತ ಕೌನ್ಸಿಲ್‌ನ ಅವಧಿ 2019ರ ಮಾರ್ಚ್‌ 11ರಂದು ಮುಕ್ತಾಯವಾಗಿದ್ದು, ಮಾ.12ರಿಂದ ಆಡಳಿತಾಧಿಕಾರಿಯ ನೇಮಕವಾಗಿದೆ. ಅದೇ ರೀತಿ ನಂಜನಗೂಡು ನಗರಸಭೆಯ ಅವಧಿ ಮಾ.16ರಂದು ಮುಕ್ತಾಯ, 17ರಂದು ಆಡಳಿತಾಧಿಕಾರಿ ನೇಮಕ, ತಿ.ನರಸೀಪುರ ಪುರಸಭೆಯ ಅವಧಿ ಮಾ.11ರಂದು ಮುಕ್ತಾಯ, ಮಾ.12ರಂದು ಆಡಳಿತಾಧಿಕಾರಿ ನೇಮಕ,

ಪಿರಿಯಾಪಟ್ಟಣ ಪುರಸಭೆಯ ಅವಧಿ ಮಾ.12ರಂದು ಮುಕ್ತಾಯ, ಮಾ.13ರಂದು ಆಡಳಿತಾಧಿಕಾರಿ ನೇಮಕ, ಎಚ್‌.ಡಿ.ಕೋಟೆ ಪುರಸಭೆಯ ಅವಧಿ ಮಾ.9ರಂದು ಮುಕ್ತಾಯ, ಮಾ.10ರಂದು ಆಡಳಿತಾಧಿಕಾರಿ ನೇಮಕ, ಕೆ.ಆರ್‌.ನಗರ ಪುರಸಭೆಯ ಅವಧಿ ಮಾ.13ರಂದು ಮುಕ್ತಾಯ, ಮಾ.14ರಂದು ಆಡಳಿತಾಧಿಕಾರಿ ನೇಮಕ, ಬನ್ನೂರು ಪುರಸಭೆಯ ಅವಧಿಯ ಮಾ.13ರಂದು ಮುಕ್ತಾಯ, ಮಾ.14ರಂದು ಆಡಳಿತಾಧಿಕಾರಿಯ ನೇಮಕವಾಗಿದೆ.

ಬಲಾಬಲ: 2018ರ ಆಗಸ್ಟ್‌ 29ರಂದು ಮೊದಲ ಹಂತದಲ್ಲಿ ಮತದಾನ ನಡೆದಿದ್ದ ಜೆಡಿಎಸ್‌ ಶಾಸಕರಿರುವ ತಿ.ನರಸೀಪುರ ಪುರಸಭೆಯ 23 ವಾರ್ಡ್‌ಗಳ ಪೈಕಿ ಕಾಂಗ್ರೆಸ್‌ 10, ಬಿಜೆಪಿ-4, ಜೆಡಿಎಸ್‌-3 ಹಾಗೂ ಆರು ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಪಿರಿಯಾಪಟ್ಟಣ ಪುರಸಭೆಯ 23 ವಾರ್ಡ್‌ಗಳ ಪೈಕಿ ಜೆಡಿಎಸ್‌-14, ಕಾಂಗ್ರೆಸ್‌-08 ಹಾಗೂ ಓರ್ವ ಪಕ್ಷೇತರ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿ ಖಾತೆ ತೆರೆದಿಲ್ಲ. ಕಾಂಗ್ರೆಸ್‌ ಶಾಸಕರಿರುವ ಎಚ್‌.ಡಿ.ಕೋಟೆ ಪುರಸಭೆಯ 23 ವಾರ್ಡ್‌ಗಳ ಪೈಕಿ ಕಾಂಗ್ರೆಸ್‌ 11, ಜೆಡಿಎಸ್‌ 08, ಬಿಜೆಪಿ 01, ಬಿಎಸ್‌ಪಿ 01, ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ಎರಡನೇ ಹಂತದಲ್ಲಿ 2019ರ ಮೇ 29ರಂದು ಮತದಾನ ನಡೆದು 31ರಂದು ಫ‌ಲಿತಾಂಶ ಹೊರಬಿದ್ದಿರುವ, ಬಿಜೆಪಿ ಶಾಸಕರಿರುವ ನಂಜನಗೂಡು ನಗರಸಭೆಯ 31ವಾರ್ಡ್‌ಗಳ ಪೈಕಿ ಬಿಜೆಪಿ 15, ಕಾಂಗ್ರೆಸ್‌ 10, ಜೆಡಿಎಸ್‌ 3, ಹಾಗೂ ಮೂವರು ಪಕ್ಷೇತರರು ಗೆದ್ದು ಬಂದಿದ್ದಾರೆ.
ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಅವರ ಸ್ವಕ್ಷೇತ್ರ ಕೆ.ಆರ್‌.ನಗರ ಪುರಸಭೆಯ 23 ವಾರ್ಡ್‌ಗಳ ಪೈಕಿ ಕಾಂಗ್ರೆಸ್‌ 14, ಜೆಡಿಎಸ್‌ 08, ಬಿಜೆಪಿ 01 ಸ್ಥಾನ ಗಳಿಸಿದೆ.

ತಿ.ನರಸೀಪುರ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿರುವ ಬನ್ನೂರು ಪುರಸಭೆಯ 23 ವಾರ್ಡ್‌ಗಳ ಪೈಕಿ ಜೆಡಿಎಸ್‌ 12, ಕಾಂಗ್ರೆಸ್‌ 07, ಬಿಜೆಪಿ 02 ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ಆಡಳಿತ ನಡೆಸಲಾರದ ಪರಿಸ್ಥಿತಿ: 2018ರ ಸೆಪ್ಟೆಂಬರ್‌ನಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆದ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿತಾದರೂ ಚುನಾವಣೆ ದಿನಾಂಕ ಪ್ರಕಟಿಸುವ ವೇಳೆಗೆ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಪ್ರಕರಣ ಇತ್ಯರ್ಥವಾಗದೆ ಚುನಾಯಿತ ಸದಸ್ಯರು ಆಡಳಿತ ನಡೆಸಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿನಿಧಿಗಳಿಂದ ಅಧಿಕಾರಿಗಳಿಗೆ ಮನವಿ: ಇದರ ಪರಿಣಾಮ ನಗರದ ಮೂಲಭೂತ ಸಮಸ್ಯೆಗಳ ನಿವಾರಣೆ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿ ಕೆಲಸ ಮಾಡಿಸಬೇಕಿದ್ದ ನೂತನ ಚುನಾಯಿತ ಪ್ರತಿನಿಧಿಗಳು, ಜನ ಸಾಮಾನ್ಯರಂತೆಯೇ ಅಧಿಕಾರಿಗಳಿಗೆ ಮನವಿ ಮಾಡಿ ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಚುನಾಯಿತ ಕೌನ್ಸಿಲ್‌ ಅಸ್ತಿತ್ವಕ್ಕೆ ಬರದೇ ಇರುವುದರಿಂದ ಪುರಸಭೆ ಅಧಿಕಾರಿಗಳು ಇವರ ಮಾತಿಗೆ ಸೊಪ್ಪು ಹಾಕುತ್ತಿಲ್ಲ. ಇತ್ತ ತಮ್ಮನ್ನು ಚುನಾಯಿಸಿದ ವಾರ್ಡ್‌ನ ಜನರ ಸಮಸ್ಯೆಗೆ ಸಮರ್ಪಕವಾಗಿ ಸ್ಪಂದಿಸಲಾಗದೆ ಜನರಿಂದ ಶಾಪ ಹಾಕಿಸಿಕೊಳ್ಳಬೇಕಾಗಿ ಬಂದಿದೆ.

ನಮ್ಮ ಪುರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್‌ಗೆ ಹೋಗಿದ್ದರಿಂದ ಇನ್ನೂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಹೀಗಾಗಿ ನಾವು ಚುನಾಯಿತರಾಗಿದ್ದರೂ ಅಧಿಕಾರಿಗಳು ಸರಿಯಾಗಿ ಮಾಹಿತಿ ಕೊಡದಿರುವುದರಿಂದ ಕೆಲಸ ಮಾಡಲಾಗುತ್ತಿಲ್ಲ. ಸರ್ಕಾರ ಆದಷ್ಟು ಬೇಗ ಅಧ್ಯಕ್ಷರ ಚುನಾವಣೆ ನಡೆಸಿ, ಸದಸ್ಯರಿಗೆ ಅಧಿಕಾರ ಕೊಡಬೇಕು.
-ಕಿರಣ್‌, ಸದಸ್ಯ, ತಿ.ನರಸೀಪುರ ಪುರಸಭೆ

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.