ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು


Team Udayavani, Jun 4, 2023, 3:44 PM IST

ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು

ಮೈಸೂರು: ಮುಂದಿನ ಒಂದು ವರ್ಷದೊಳಗೆ ಜಿಲ್ಲೆಯ ಪ್ರತಿ ಮನೆಗೂ ನಲ್ಲಿಯ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲು ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಹೇಳಿದರು.

ಮೈಸೂರು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಮಾತನಾಡಿದರು.

ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ: ಮೈಸೂರು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಜಿಲ್ಲೆಯಲ್ಲಿ ನೀರಿನ ಮೂಲಗಳ ಸೌಲಭ್ಯ ಉತ್ತಮವಾಗಿದೆ. ಜಲಜೀವನ್‌ ಮಿಷನ್‌ ಯೋಜನೆಯಡಿ ಹಾಡ್ಯದಿಂದ 289 ಕೋಟಿ ರೂಪಾಯಿ ವೆಚ್ಚದಲ್ಲಿ ಪಿರಿಯಾಪಟ್ಟಣ ತಾಲೂ ಕಿನ 303 ಗ್ರಾಮಗಳ ಪ್ರತಿ ಮನೆಗೆ ನೀರನ್ನು ಒಂದೇ ಹಂತದಲ್ಲಿ ಒದಗಿಸಲಾಗುವುದು. ಇದೇ ರೀತಿ ಜಿಲ್ಲೆಯ ಎಲ್ಲ ತಾಲೂಕಿನ ಲ್ಲಿಯೂ ಜಲಜೀವನ್‌ ಮಿಷನ್‌ ಯೋಜನೆಯಡಿ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನೀರಿನ ಕೊರತೆ ಇಲ್ಲ: ನಗರ ಪ್ರದೇಶದಲ್ಲಿ ಅಮೃತ್‌ 1 ಯೋಜನೆಯಡಿ 4.5 ಕೋಟಿ ಲೀಟರ್‌ ನೀರು ಸಂಗ್ರಹ ಟ್ಯಾಂಕ್‌ ಗ ಳನ್ನು ನಿರ್ಮಿಸಲಾಗಿದೆ. ಅಮೃತ್‌ -2 ಯೋಜನೆಯಡಿ ಹೂಟಗಳ್ಳಿ ನಗರಸಭೆ ಹಾಗೂ 4 ಪಟ್ಟಣ ಪಂಚಾಯಿತಿಗಳಿಗೆ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮೈಸೂರು ನಗರ ಪ್ರದೇಶಕ್ಕೆ 250 ಎಂ.ಎಲ್.ಡಿ ನೀರಿನ ಅವಶ್ಯಕತೆ ಇದ್ದು ಈಗಾಗಲೇ 300 ಎಂ.ಎಲ್.ಡಿ ನೀರು ದೊರೆಯುತ್ತಿದೆ. ನೀರಿನ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು. ‌

ಶೇ.20 ರಷ್ಟು ಮಾತ್ರ ಪ್ರಗತಿ: ಆಯುಷ್ಮಾನ್‌ ಕಾರ್ಡ್‌ ವಿತರಣೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ. ಜಿಲ್ಲೆಗೆ 25 ಲಕ್ಷ ಗುರಿ ಇತ್ತು. ಆದರೆ 5.65 ಲಕ್ಷ ಗುರಿ ಸಾಧಿಸಿದ್ದು, ಶೇ.20 ರಷ್ಟು ಮಾತ್ರ ಪ್ರಗತಿ ಆಗಿದೆ. ಅದಾಲತ್‌ ರೀತಿಯಲ್ಲಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿವಾರು ಹಮ್ಮಿಕೊಂಡು ಗುರಿ ಸಾಧನೆ ಮಾಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಗಸ್ಟ್‌ ತಿಂಗಳಿಗೆ 100 ವರ್ಷ: ಮೈಸೂರು ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಿ ಮುಂದಿನ ವರ್ಷ ಆಗಸ್ಟ್‌ ತಿಂಗ ಳಿಗೆ 100 ವರ್ಷಗಳಾಗುತ್ತದೆ. ಮುಂದಿನ ವರ್ಷ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಕೆ.ಆರ್‌.ಆಸ್ಪತ್ರೆಯಲ್ಲಿ ಮೂಲ ಸೌಲಭ್ಯಗಳೊಂದಿಗೆ ವಿಶ್ರಾಂತಿ ಗೃಹವನ್ನು ನಿರ್ಮಿಸಬೇಕು. ಕೆ.ಆರ್‌. ಆಸ್ಪತ್ರೆಯ ನವೀಕರಣಕ್ಕೆ 89 ಕೋಟಿ ರೂ. ಗಳ ಅನುದಾನವನ್ನು ನೀಡಲಾಗಿತ್ತು. ಈ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು. ಆಸ್ಪತ್ರೆಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳ ಜೊತೆಗೆ ಇನ್ನೂ 20 ಹಾಸಿಗೆಗಳ ಸೌಲಭ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಹೃದ್ರೋಗ ತಜ್ಞ ವೈದ್ಯರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳುವಂತೆ ಆಸ್ಪತ್ರೆಯ ಡೀನ್‌ ಡಾ.ದಾಕ್ಷಾಯಿಣಿ ಅವರಿಗೆ ಸೂಚಿಸಿದರು.

ಮನವಿ ಸಲ್ಲಿಸಿ ಜಾಗ ಪಡೆದುಕೊಳ್ಳಬೇಕು: ಮೈಸೂರು ಜಿಲ್ಲೆಯಲ್ಲಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಶ್ರಯ ಮನೆ ಯೋಜನೆ ಅಧಿಕಾರಿಗಳು ಹಾಗೂ ಸ್ಲಂ ಬೋರ್ಡ್‌ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಡಿ ಹಾಸ್ಟೆಲ್‌ಗಳ ನಿರ್ಮಾ ಣಕ್ಕೆ ಜಾಗದ ಅವಶ್ಯಕತೆ ಇದ್ದರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಜಾಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ವಿತರಣೆ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಾತನಾಡಿ, ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕವು ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಆಯುಷ್ಮಾನ್‌ ಕಾರ್ಡ್‌ ಅಲ್ಲದೆ ಎಪಿಎಲ್, ಬಿಪಿಎಲ್‌ ಹಾಗೂ ಆಧಾರ್‌ ಕಾರ್ಡ್‌ಗಳನ್ನು ನೀಡಿ ಚಿಕಿತ್ಸೆ ಪಡೆಯಬಹುದು. ಕಳಪೆ ಬಿತ್ತನೆ ಬೀಜ ವಿತರಣೆ ಬಗ್ಗೆ ಎಚ್ಚರಿಕೆ ವಹಿಸಿ ಪರಿಶೀಲನೆ ನಡೆಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕರಾದ ಟಿ.ಎಸ್‌. ಶ್ರೀ ವತ್ಸ, ಹರೀಶ್‌ ಗೌಡ, ದರ್ಶನ್‌ ಧ್ರುವ ನಾರಾಯಣ್‌, ಜಿಪಂ ಸಿಇಒ ಕೆ.ಎಂ. ಗಾಯತ್ರಿ ಇದ್ದರು.

ನಾಲ್ಕು ಫ‌ುಡ್‌ಪಾರ್ಕ್‌ ಗೆ ಅನುಮೋದನೆ: ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಮಾತ ನಾಡಿ, ಮೈಸೂರು ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ. ಹೊಸದಾಗಿ 50 ಎಂ.ಎಲ್‌ ಡಿ ನೀರಿನ ಯೋಜನೆ ರೂಪಿಸಿದ್ದು, ಇದರಲ್ಲಿ ನಗರ ವ್ಯಾಪ್ತಿಗೆ 20 ಎಂ.ಎಲ್.ಡಿ ಅವಶ್ಯಕತೆ ಆಗಬಹುದು. ಉಳಿದ 30 ಎಂ.ಎಲ್.ಡಿ ನೀರನ್ನು ನಗರದ ಹೊರವಲಯದ ಪ್ರದೇಶಗಳಿಗೆ ನೀಡಲಾಗುವುದು. ನಗರ ವ್ಯಾಪ್ತಿಯಲ್ಲಿ 9 ಫ‌ುಡ್‌ಪಾರ್ಕ್‌ ಗ ಳನ್ನು ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ನಾಲ್ಕಕ್ಕೆ ಅನುಮೋದನೆ ದೊರೆತಿದ್ದು, ಇವುಗಳ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ‌

ಮಹಾನಗರ ಪಾಲಿಕೆಯಲ್ಲಿ ನೀರಿನ ಕರ ಸಂಗ್ರಹದಲ್ಲಿ ಏರಿಕೆಯಾಗಿದೆ . ಹಿಂದಿನ ವರ್ಷಗಳಲ್ಲಿ 50 ಕೋಟಿ ರೂ.ವ ರೆಗೆ ಸಂಗ್ರಹವಾಗುತ್ತಿತ್ತು. 2023ರ ಆರ್ಥಿಕ ವರ್ಷದಲ್ಲಿ 93 ಕೋಟಿ ರೂ. ಸಂಗ್ರಹವಾಗಿದೆ ಎಂದು ವಿವರಿಸಿದರು.

ಮುಂದಿನ ವರ್ಷ ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ : ಕೆ.ಆರ್‌.ಆ ಸ್ಪ ತ್ರೆಯ ಡೀನ್‌ ಡಾ.ದಾಕ್ಷಾಯಣಿ ಮಾತ ನಾಡಿ, ಮುಂದಿನ ವರ್ಷ ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಆಚರಣೆ ಮಾಡುತ್ತಿದ್ದು, 2023 ರ ಸೆಪ್ಟೆಂಬರ್‌ನಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕೆ.ಆರ್‌. ಆಸ್ಪತ್ರೆಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳು ಇವೆ. ಸೂಪರ್‌ ಸ್ಪೆಷಾ ಲಿಟಿ ಆಸ್ಪ ತ್ರೆ ಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.