ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಆಚರಣೆ

Team Udayavani, Feb 23, 2020, 3:00 AM IST

sutturu-sriu

ನಂಜನಗೂಡು: ಮಹಾ ಶಿವರಾತ್ರಿ ಪ್ರಯುಕ್ತ ಸುತ್ತೂರು ಶ್ರೀಕ್ಷೇತ್ರದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಶ್ರೀಗಳು ಭಕ್ತರ ಜೊತೆಗೆ ಶಿವ ಪೂಜೆ ನೆರವೇರಿಸಿದ್ದಲ್ಲದೆ, ಜೆಎಸ್‌ಎಸ್‌ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಮೂಹಿಕ ಶಿವಪೂಜೆ ನೆರವೇರಿತು.

ಶುಕ್ರವಾರ ಬೆಳಗ್ಗೆ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳವರ ಕತೃìಗದ್ದುಗೆ, ಶ್ರೀಮಹದೇಶ್ವರ, ಶ್ರೀಸೋಮೇಶ್ವರ, ಶ್ರೀವೀರಭದ್ರೇಶ್ವರ, ಶ್ರೀ ನಂಜುಂಡೇಶ್ವರ ಮತ್ತು ಶ್ರೀನಾರಾಯಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಕತೃಗದ್ದುಗೆಯಲ್ಲಿ ಶುಕ್ರವಾರ ಸಂಜೆ 6ಗಂಟೆಯಿಂದ ಶನಿವಾರ ಬೆಳಗಿನ ಜಾವ 6 ಗಂಟೆಯವರೆಗೆ ನಾಲ್ಕು ಜಾವಗಳಲ್ಲಿಯೂ ವಿಶೇಷ ಪೂಜೆಗಳು ಜರುಗಿದವು. ಸಂಜೆ 7ಗಂಟೆಗೆ ಶಿವದೀಕ್ಷೆ ,ರಾತ್ರಿ 9.30ಕ್ಕೆ ಬೆಳ್ಳಿರಥದ ಪ್ರಾಕಾರೋತ್ಸವ ಜರುಗಿತು.

ಸಂಜೆ 5ರಿಂದ ರಾತ್ರಿ 8.30ರವರೆಗೆ ಸುತ್ತೂರು ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ರಾತ್ರಿ 8.30 ರಿಂದ 9.30ರವರೆಗೆ ಮೈಸೂರು ಅವಳಿ ಸಹೋದರಿಯರಾದ ಕು.ವಿಸ್ಮಯ ಮತ್ತು ಕು.ನಿಸರ್ಗರವರಿಂದ ಭಕ್ತಿಗೀತೆಗಳ ಗಾಯನ ಹಾಗೂ ರಾತ್ರಿ 9.30ರಿಂದ 10.30ರವರೆಗೆ ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥರಾದ ಶ್ರೀಮತಿ ಆರತಿ ವಿ.ಬಾಲಸುಬ್ರಹ್ಮಣ್ಯರವರಿಂದ

ಶಿವತತ್ವ ವಿಷಯ ಕುರಿತು ಉಪನ್ಯಾಸ ನಡೆಯಿತು.ರಾತ್ರಿ 10.30ರಿಂದ ಬದನವಾಳು ಬಿ.ಶಿವಕುಮಾರಶಾಸ್ತ್ರಿ ಮತ್ತು ತಂಡದವರು ಶಿವಪಂಚಾಕ್ಷರಿ ಮಹಾತ್ಮೆ ಎಂಬ ಶಿವಕಥಾ ಸಂಕೀರ್ತನೆಯನ್ನು ನಡೆಸಿಕೊಟ್ಟರು. ಕತೃಗದ್ದುಗೆ ಮತ್ತು ಶ್ರೀಮಠದಲ್ಲಿ ಶುಕ್ರವಾರ ಬೆಳಗ್ಗೆ 6 ರಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ವಿವಿಧ ಭಜನಾ ತಂಡಗಳಿಂದ ಅಖಂಡ ಭಜನೆ ನಡೆಯಿತು.

ಶಿವದೀಕ್ಷೆ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ 100 ಕ್ಕೂ ಅಧಿಕ ಮಂದಿಗೆ ಶಿವದೀಕ್ಷೆ ನೆರವೇರಿಸಲಾಯಿತು. ಲಿಂಗಧಾರಣೆ ಬಳಿಕ ಆದಿ ಜಗದ್ಗುರು ಶಿವರಾತ್ರೀಶ್ವರರ ಗದ್ದುಗೆಯಲ್ಲಿ ನಡೆದ ಸಾಮೂಹಿಕ ಲಿಂಗಪೂಜೆಯಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.