ಮೈಸೂರು ವಿವಿ ಘಟಿಕೋತ್ಸವ: ಗಾರೆ ಕೆಲಸ ಮಾಡಿಕೊಂಡೇ 14 ಚಿನ್ನದ ಪದಕ ಗೆದ್ದ ಮಹದೇವಸ್ವಾಮಿ

Team Udayavani, Mar 23, 2022, 12:51 PM IST

ಮೈಸೂರು ವಿವಿ ಘಟಿಕೋತ್ಸವ: ಗಾರೆ ಕೆಲಸ ಮಾಡಿಕೊಂಡೇ 14 ಚಿನ್ನದ ಪದಕ ಗೆದ್ದ ಮಹದೇವಸ್ವಾಮಿ

ಮೈಸೂರು: ಕಷ್ಟಪಟ್ಟು, ಶ್ರದ್ದೆಯಿಂದ ಓದಿದರೆ ಸಾಧನೆ ಕಷ್ಟವಲ್ಲ ಎಂಬುದನ್ನು ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ ಪಿ. ಮಹದೇವಸ್ವಾಮಿ ಸಾಧಿಸಿ ತೋರಿಸಿದ್ದಾರೆ.

ಓದುವ ಹಂಬಲವಿದ್ದರೂ ಸೂಕ್ತ ಸೌಲಭ್ಯಗಳಿಲ್ಲದೆ, ಬಿಡುವಿನ ವೇಳೆಯಲ್ಲಿ ಗಾರೆ ಕೆಲಸ, ಪೇಂಟಿಂಗ್‌ ಮಾಡಿಕೊಂಡು ಓದಿ, 14 ಚಿನ್ನದ ಪದಕ ಹಾಗೂ 3 ನಗದು ಬಹುಮಾನವನ್ನು ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ ಪಡೆದುಕೊಂಡಿದ್ದಾರೆ.

ನಾಗವಳ್ಳಿ ಗ್ರಾಮದ ದಿ.ಪುಟ್ಟಬಸವಯ್ಯ ಮತ್ತು ನಾಗಮ್ಮ ಅವರ ಪುತ್ರ, ಡಾ.ಬಿ.ಆರ್‌.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದ ವಿದ್ಯಾರ್ಥಿ ಪಿ.ಮಹದೇವಸ್ವಾಮಿ ಅವರ ತಂದೆ 20 ವರ್ಷದ ಹಿಂದೆಯೇ ಮೃತಪಟ್ಟಿದ್ದರು. ತಂದೆ ನಿಧನಾ ನಂತರ ತಾಯಿ ಹಾಗೂ ಅಣ್ಣ ಕುಟುಂಬದ ಜವಾಬ್ದಾರಿ ಹೊತ್ತುಕೊಂಡರು. ಈ ಸಮಯದಲ್ಲಿ ಕಾಲೇಜಿಗೆ ಸೇರಿದ ಮಹದೇವಸ್ವಾಮಿ ರಜೆ ದಿನಗಳಲ್ಲಿ ಗಾರೆ ಕೆಲಸ, ಕೂಲಿ ಕೆಲಸ ಮಾಡುತ್ತಿದ್ದರು. ಎಂಎ ಕನ್ನಡದಲ್ಲಿ 2200 ಅಂಕಗಳಿಗೆ 1963 ಅಂಕ ಪಡೆದು, ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ನಿರೂಪಿಸಿದ್ದಾರೆ.

14 ಚಿನ್ನದ ಪದಕ ಬಂದಿರುವುದು ತುಂಬಾ ಖುಷಿಯಾಗಿದೆ. ನನ್ನ ಈ ಸಾಧನೆಗೆ ಪೋಷಕರು, ಅಧ್ಯಾಪಕರೇ ಕಾರಣ. ಕೆ-ಸೆಟ್‌ ಪಾಸ್‌ ಆಗಿದೆ. ಪಿಎಚ್‌ಡಿ ಮಾಡುತ್ತೇನೆ. ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆ ತೆಗೆದುಕೊಂಡು ಒಳ್ಳೆಯ ಉದ್ಯೋಗ ಪಡೆಯಬೇಕೆಂಬ ಆಸೆಯಿದೆ. ಯುಪಿಎಸ್ಸಿ ಪರೀಕ್ಷೆ ಕಠಿಣವಾಗಿರುವುದರಿಂದ ಉಚಿತವಾಗಿ ತರಬೇತಿ ಸಿಕ್ಕರೆ ಅನುಕೂಲವಾಗುತ್ತದೆ. ಪಿ.ಮಹದೇವಸ್ವಾಮಿ, ಚಿನ್ನದ ಪದಕ ವಿಜೇತ ವಿದ್ಯಾರ್ಥಿ.

ನನ್ನ ಪತಿ 20 ವರ್ಷದ ಹಿಂದೆಯೇ ಮೃತಪಟ್ಟರು. 6 ಮಕ್ಕಳನ್ನು ಸಾಕುವ ಜವಾಬ್ದಾರಿ ನನ್ನ ಮೇಲೆ ಬಿತ್ತು. ನಮಗೆ ಯಾರ ಬೆಂಬಲವೂ ಇರಲಿಲ್ಲ. ಕೂಲಿ ಕೆಲಸ ಮಾಡಿ ಅವರನ್ನು ಸಾಕಿದ್ದೇನೆ. ಅವರೂ ಅಷ್ಟೇ ಕಷ್ಟಪಟ್ಟು ಓದಿದ್ದಾರೆ. ಮಹದೇವಸ್ವಾಮಿ ಓದಿನೊಂದಿಗೆ ಗಾರೆ ಕೆಲಸವನ್ನೂ ಮಾಡುತ್ತಿದ್ದ. ಬೆಳಗ್ಗೆ 4 ಗಂಟೆಗೇ ಎದ್ದು ಓದುತ್ತಿದ್ದ. ಕಷ್ಟ ಬಿದ್ದಿರುವುದಕ್ಕೆ ಇಂದು ಈ ಸಾಧನೆ ಮಾಡಿದ್ದಾನೆ. ಇದೇ ರೀತಿ ಓದಿ ತಹಶೀಲ್ದಾರ್‌ ಆಗಲಿ. ನಾಗಮ್ಮ, ಚಿನ್ನದ ಪದಕ ವಿಜೇತ ಮಹದೇವಸ್ವಾಮಿ ತಾಯಿ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.