ಇ-ಕೆವೈಸಿ ಕಡ್ಡಾಯ ಮಾಡಿಸಿ: ರೈತರಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ
Team Udayavani, May 23, 2023, 2:12 PM IST
ಪಿರಿಯಾಪಟ್ಟಣ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ-ರಾಜ್ಯ ಸರ್ಕಾರದಿಂದ ರೈತರಿಗೆ ಆರ್ಥಿಕ ಬೆಂಬಲ ನೀಡುತ್ತಿದೆ. ಅದಕ್ಕಾಗಿ ರೈತರು ಪಿಎಂ ಕಿಸಾನ್ ಇ-ಕೆವೈಸಿ ಮಾಡಿಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೈ.ಪ್ರಸಾದ್ ತಿಳಿಸಿದರು.
ತಾಲೂಕಿನ ಹಿಟ್ನೆಹೆಬ್ಬಾಗಿರು ಗ್ರಾಮದಲ್ಲಿ ಏರ್ಪಡಿಸಿದ್ದ ಇ-ಕೆವೈಸಿ ಕ್ಯಾಂಪ್ ನಲ್ಲಿ ರೈತರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಧನ ಸಹಾಯ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ತಿಳಿಸುತ್ತಾ ಬಂದಿದ್ದರೂ ತಾಲ್ಲೂಕಿನಲ್ಲಿ 9 ಸಾವಿರ ರೈತರು ಇ-ಕೆವೈಸಿ ಮಾಡಿಸಿಲ್ಲ, ಈ ಯೋಜನೆಯಡಿ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ತಲಾ 2 ಸಾವಿರ, ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ. ಇ-ಕೆವೈಸಿ ಪೂರ್ಣಗೊಳೀಸದ ರೈತರಿಗೆ ಮುಂದಿನ ಕಂತುಗಳಲ್ಲಿ ಸರ್ಕಾರದ ಸಹಾಯ ಧನ ಸಿಗುವುದಿಲ್ಲ. ಪಿಎಂ ಕಿಸಾನ್ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಸರ್ಕಾರವು ಹಲವು ವಿಧಾನಗಳಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದು, ರೈತರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪಿಎಂ ಕಿಸಾನ್ ಪೋರ್ಟಲ್ ಹಾಗೂ ಮೊಬೈಲ್ ನಲ್ಲಿಯೂ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು, ಕೆಲವು ರೈತರಲ್ಲಿ ಹ್ಯಾಂಡ್ರೈಡ್ ಮೊಬೈಲ್ ಇಲ್ಲದಿರುವ ಕಾರಣ ಇಲ್ಲಿ ಕೇಳುವ ಮಾಹಿತಿಯನ್ನು ನಮೂದಿಸಲು ಕಷ್ಟವಾಗುತ್ತದೆ ಅಂಥವರ ಅನುಕೂಲಕ್ಕಾಗಿ ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ ಎಂದರು.
ಅಲ್ಲದೇ ಇ-ಕೆವೈಸಿ ಆಗದೆ ಇರುವವರ ಸಂಖ್ಯೆ ಹೆಚ್ಚಾಗಿರುವ ಕಾರಣ ಕೃಷಿ ಇಲಾಖೆ ಅಧಿಕಾರಿಗಳು ಆಯಾಯಾ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಅರಿವು ಮೂಡಿಸುವುದರ ಜೊತೆಗೆ ಸ್ಥಳದಲ್ಲೇ ಇ-ಕೆವೈಸಿ ಕ್ಯಾಂಪ್ ನಡೆಸುತ್ತಿದ್ದಾರೆ ರೈತರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಫೌತಿಯಾಗಿದ್ದಲ್ಲಿ ಫಲಾನುಭವಿಗಳು ಪೌತಿ ಖಾತೆಯನ್ನು ಹೊಂದುವ ವಾರಸುದಾರರು ಪಿಎಂ ಕಿಸಾನ್ ಯೋಜನೆಯಡಿ ನೊಂದಾಯಿಸಿಕೊಳ್ಳಲು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತರು, ಗ್ರಾಮಸ್ಥರು, ಸಾರ್ವಜನಿಕರು ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.