ಘೋಷಿಸಿದ್ದು ಹಲವು: ಅನುಷ್ಠಾನಗೊಂಡಿದ್ದು ಕೆಲವು


Team Udayavani, Mar 4, 2017, 1:04 PM IST

mys7.jpg

ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್‌ 15ರಂದು ರಾಜ್ಯ ಬಜೆಟ್‌ ಮಂಡಿಸಲಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಸಂಘಟನೆಗಳ, ಇಲಾಖೆಗಳ, ಕೈಗಾರಿಕೋದ್ಯಮಿಗಳ ಜತೆ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್‌ ಬಗ್ಗೆ ಜನರ ನಿರೀಕ್ಷೆಯೇನು? ಹಿಂದಿನ ಬಜೆಟ್‌ಗಳಲ್ಲಿ ಘೋಷಿಸಲಾಗಿರುವ ಯೋಜನೆಗಳ ಸ್ಥಿತಿಗತಿಗಳೇನು? ಎಂಬುದರ ಕುರಿತು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಮ್ಮದು.

ಮೈಸೂರು: ಹಣಕಾಸು ಖಾತೆಯನ್ನೂ ಹೊಂದಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದನೇ ಆಯವ್ಯಯ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯವರ ತವರು ಜಿಲ್ಲೆ ಮೈಸೂರಿನ ಜನರ ನಿರೀಕ್ಷೆ ಬೆಟ್ಟದಷ್ಟಿದೆ. 2016-17ನೇ ಸಾಲಿನ ಆಯವ್ಯಯದಲ್ಲಿ ಮೈಸೂರು ಜಿಲ್ಲೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದರು.

ಅವುಗಳಲ್ಲಿ ಕೆಲವಷ್ಟೇ ಅನುಷ್ಠಾನಗೊಂಡಿದ್ದು, ಹೆಚ್ಚಿನವು ಕಾಗದದಲ್ಲೇ ಉಳಿದಿವೆ. ರಾಜ್ಯದ ಪ್ರತಿ ಕಂದಾಯ ವಿಭಾಗಕ್ಕೊಂದರಂತೆ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು ನೂರು ಗ್ರಾಮಗಳನ್ನು ಮಾದರಿ ಕೃಷಿ ಗ್ರಾಮಗಳನ್ನಾಗಿ ಮಾಡಲು ಸುವರ್ಣ ಕೃಷಿ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗುವುದು.

ಈ ಗ್ರಾಮಗಳನ್ನು ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿಕೊಂಡು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಯವ್ಯಯ ಭಾಷಣದಲ್ಲಿ ಹೇಳಿದ್ದರು. ಮೈಸೂರು ಜಿಲ್ಲೆಯ ಮಟ್ಟಿಗೆ ಇದು ಘೋಷಣೆಯಾಗಿಯೇ ಉಳಿದಿದೆ. ಜಂಟಿ ಕೃಷಿ ನಿರ್ದೇಶಕರಿಗೆ ಇಂತಹದೊಂದು ಯೋಜನೆ ಘೋಷಣೆಯಾಗಿದೆ ಎಂಬುದೇ ತಿಳಿದಿಲ್ಲ.

ಮಹಿಳಾ ಉದ್ಯಮಿಗಳಿಗೆ ಹಂಚಿಕೆಯಾಗದ ಜಾಗ: ಮಹಿಳಾ ಉದ್ಯಮ ಶೀಲತೆಯನ್ನು ಪೋ›ತ್ಸಾಹಿಸುವ ದೃಷ್ಟಿಯಿಂದ ಮೈಸೂರಿನಲ್ಲಿ ಮಹಿಳಾ ಉದ್ದಿಮೆ ಪಾರ್ಕ್‌ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಯವ್ಯಯದಲ್ಲಿ ಹೇಳಲಾಗಿತ್ತು. ಇದಕ್ಕಾಗಿ ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡ್ಯ ಎರಡನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ 45 ಎಕರೆ ಜಾಗವನ್ನೂ ಗುರುತಿಸಿದ್ದು, 110 ಜನ ಮಹಿಳಾ ಉದ್ದಿಮೆದಾರರನ್ನೂ ಫ‌ಲಾನುಭ‌ವಿಗಳಾಗಿ ಆಯ್ಕೆ ಮಾಡಲಾಗಿದೆ.

ವಿಸ್ತೃತಾ ಯೋಜನಾ ವರದಿ ಸಿದ್ಧಗೊಂಡು ಆರು ತಿಂಗಳಾಗಿದೆ. ಆದರೆ, ಕೆಐಎಡಿಬಿ ಅಧಿಕಾರಿಗಳು ಆಯ್ಕೆಯಾದ ಮಹಿಳಾ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನಗಳನ್ನು ಹಂಚಿಕೆ ಮಾಡಲು ವಿಳಂಬ ಮಾಡುತ್ತಿರುವುದರಿಂದ ಯೋಜನೆ ನೆನೆಗುದಿಗೆ ಬಿದ್ದಿದೆ. ಇನ್ನು ಮೈಸೂರಿನ ಭಾರೀ ಕೈಗಾರಿಕಾ ಪ್ರದೇಶವನ್ನು ಮತ್ತು ಎಸ್ಟೇಟ್‌ಗಳನ್ನು ಕೈಗಾರಿಕಾ ಪಟ್ಟಣಗಳೆಂದು ಘೋಷಿಸುವ ಮೈಸೂರು ಕೈಗಾರಿಕಾ ಪಟ್ಟಣ ಪ್ರಾಧಿಕಾರ ಪ್ರಸ್ತಾವನೆಯೂ ಆಮೆಗತಿಯಲ್ಲಿದೆ.

ಇನ್ನು ಜಾರಿಯಾಗದ ಆದೇಶ: ಎನ್‌ಸಿಡಿಸಿ ಒಂದು ಮತ್ತು ಎರಡನೇ ಹಂತದ ಯೋಜನೆಯಡಿಯಲ್ಲಿ ಒಳನಾಡು ಮೀನುಗಾರಿಕೆಗಾಗಿ ಮೀನುಗಾರಿಕೆ ಸಹಕಾರ ಸಂಘಗಳು ಸಾಲ ಪಡೆದು, ಸುಸ್ತಿಯಾಗಿರುವ ಸಾಲದ ಅಸಲು ಮತ್ತು ಬಡ್ಡಿ ಮೊತ್ತ 473.05 ಲಕ್ಷ ರೂ.ಗಳನ್ನು ಮನ್ನಾ ಮಾಡಲಾಗುವುದು. ಇದರಿಂದ 5,340 ಸದಸ್ಯ ಮೀನುಗಾರರಿಗೆ ಅನುಕೂಲವಾಗಲಿದ್ದು, ಹೊಸ ಸಾಲ ಸೌಲಭ್ಯ ಪಡೆಯಲು ಅನುವಾಗುತ್ತದೆ ಎಂದು ಹೇಳಲಾಗಿತ್ತು. ಈ ಸಂಬಂಧ ಕರ್ನಾಟಕ ರಾಜ್ಯ ಸಹಕಾರ ಮೀನುಗಾರಿಕೆ ಮಹಾ ಮಂಡಳ ವತಿಯಿಂದ ಪ್ರಸ್ತಾವನೆ ಜತೆಗೆ ಕ್ಲೈಮು ಬಿಲ್‌ಗ‌ಳನ್ನು ಕಳುಹಿಸಿದೆ. ಆದರೆ, ಈವರೆಗೆ ಸರ್ಕಾರಿ ಆದೇಶ ಹೊರಡಿಸಲಾಗಿಲ್ಲ.

ಕಾಗದದಲ್ಲೇ ಉಳಿದ ಬಿದಿರುವನ: ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಹುಣಸೂರು ತಾಲೂಕಿನಲ್ಲಿ 150 ಎಕರೆ ಅರಣ್ಯ ಪ್ರದೇಶದಲ್ಲಿ  ಡಿ. ದೇವರಾಜು ಅರಸು ಬಿದಿರು ವನವನ್ನು ಟ್ರೀ ಪಾರ್ಕ್‌ ಯೋಜನೆಯಡಿ ಸ್ಥಾಪಿಸಿ ಅಭಿವೃದ್ಧಿ ಪಡಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ, 150 ಎಕರೆ ಭೂಮಿ ದೊರೆಯದಿರುವುದರಿಂದ ಮುಖ್ಯಮಂತ್ರಿಯವರ ಈ ಘೋಷಣೆ ಕಾಗದದಲ್ಲೇ ಉಳಿದಿದೆ. ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕಾಯಂ ವಸ್ತು ಪ್ರದರ್ಶನ ಕೇಂದ್ರ ನಿರ್ಮಿಸುವ ಘೋಷಣೆಯೂ ಕಾಗದದಲ್ಲೇ ಉಳಿದಿದೆ. 

ಮೈಸೂರು ನಗರದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಸಂಬಂಧ ಮರು ಟೆಂಡರ್‌ ಕರೆಯಲಾಗಿದೆ. ತಿ.ನರಸೀಪುರದಲ್ಲಿ ಹತ್ತು ಹಾಸಿಗೆಗಳ ಜಿಲ್ಲಾ ಆಯುಷ್‌ ಇಂಟಿಗ್ರೇಟೆಡ್‌ ಆಸ್ಪತ್ರೆಗಳನ್ನು 6 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸುವ ಸಂಬಂಧ ತಾಲೂಕಿನ ಆಲಗೂಡು ಗ್ರಾಮದ ಬಳಿ ಜಾಗ ನೀಡಲಾಗಿತ್ತು. ಆದರೆ, ಸ್ಥಳಾವಕಾಶ ಕಡಿಮೆ ಇದೆ ಎಂಬ ಕಾರಣಕ್ಕೆ ಬದಲಿ ಜಾಗ ಕೇಳಲಾಗಿದ್ದು, ಕುರಹಟ್ಟಿ ಗ್ರಾಮದ ಶಾಲೆಯ ಬಳಿ ಒಂದು ಎಕರೆ ಜಾಗ ಗುರುತಿಸಲಾಗಿದ್ದು, ಗ್ರಾಪಂ ಜಾಗ ಮಂಜೂರು ಮಾಡಬೇಕಿದೆ.

ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಹುಟ್ಟೂರಾದ ಬೆಟ್ಟದ ತುಂಗ ಹಾಗೂ ಕಲ್ಲಹಳ್ಳಿ ಗ್ರಾಮಗಳ ಅಭಿವೃದ್ದಿಗೆ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ಅನುದಾನ ಪೂರ್ಣ ಬಿಡುಗಡೆಯಾಗಿದ್ದು, ಬೆಟ್ಟದ ತುಂಗದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿ, ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಕಲ್ಲಹಳ್ಳಿಯಲ್ಲಿ ಈ ಕಾಮಗಾರಿಗಳು ಪ್ರಗತಿಯಲ್ಲಿವೆ. ಹುಣಸೂರು ಪಟ್ಟಣದಲ್ಲಿ ದೇವರಾಜ ಅರಸು ¸‌ವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಪಿರಿಯಾಪಟ್ಟಣದಲ್ಲಿ ¸‌ವನ ನಿರ್ಮಾಣ ಕಾರ್ಯ ಆರಂಭವಾಗಬೇಕಿದೆ.

ಪಿರಿಯಾಪಟ್ಟಣ ತಾಲೂಕು ಮುತ್ತಿನ ಮುಳಸೋಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ನೀರು ಎತ್ತಿ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಚಿವ ಸಂಪುಟದಲ್ಲಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆಯ ಒಪ್ಪಿಗೆ ದೊರೆಯಬೇಕಿದೆ. ಸದ್ಯಕ್ಕೆ ಒಪ್ಪಿಗೆ ದೊರೆತರೂ ಕೆರೆ ತುಂಬಿಸಲು ನೀರಿಲ್ಲದ ಪರಿಸ್ಥಿತಿ ಇರುವುದರಿಂದ ಮುಂದಿನ ಮಳೆಗಾಲದವರೆಗೆ ಈ ಯೋಜನೆ ಅನುಷ್ಠಾನ ಅಸಾಧ್ಯದ ಮಾತು.

ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಹುಟ್ಟೂರಾದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದ ತುಂಗ ಹಾಗೂ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗ್ರಾಮಗಳ ಅಭಿವೃದ್ಧಿಗೆ 20 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಅರಸು ಭವನ, ರಸ್ತೆ, ಚರಂಡಿ ಅಭಿವೃದ್ಧಿ, ನೀರು ಸರಬರಾಜು ಯೋಜನೆ ಸೇರಿದಂತೆ ಬೇರೆ ಬೇರೆ ಇಲಾಖೆಗಳಿಗೆ ಕಾಮಗಾರಿ ಹಂಚಿಕೆಯಾಗಿದೆ. ಜೂನ್‌ ಅಂತ್ಯದ ವೇಳೆಗೆ ಎಲ್ಲ ಕಾಮಗಾರಿ ಪೂರ್ಣಗೊಳ್ಳಲಿದೆ.
-ಸೋಮಶೇಖರ್‌, ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.