ಮಹದೇಶ್ವರ ಜಾತ್ರೆಗೆ ಹಲವು ನಿರ್ಬಂಧ: ಪ್ರತಿಭಟನೆ


Team Udayavani, Nov 10, 2017, 11:29 AM IST

m3-mahadeshwara.jpg

ನಂಜನಗೂಡು: ಮೈಸೂರು ಚಾಮರಾಜನಗರ ಜಿಲ್ಲೆಯ ಅಸಂಖ್ಯಾತ ಭಕ್ತರ ಶ್ರದ್ಧಾ  ಕೇಂದ್ರವಾದ ಬಂಡೀಪುರ ರಕ್ಷಿತಾ ಅರಣ್ಯದಲ್ಲಿರುವ ಬೆಲದಕುಪ್ಪೆ ಮಹದೇಶ್ವರರ  ಜಾತ್ರಾ ಮಹೋತ್ಸವಕ್ಕೆ ಅರಣ್ಯ ಇಲಾಖಾ ಅಧಿಕಾರಿಗಳು ಕಠಿಣ ನಿಬಂಧನೆ ವಿಧಿಸಿರುವುದನ್ನು ಖಂಡಿಸಿ ತಾಲೂಕಿನ ಹೆಡಿಯಾಲದ ಅರಣ್ಯಾಧಿಕಾರಿಗಳ ಕಾರ್ಯಾಲಯದ ಮುಂದೆ ಭಕ್ತರು ಪ್ರತಿಭಟನೆ ನಡೆಸಿದರು.

 ಗುರುವಾರ ಹೆಡಿಯಾಲದಲ್ಲಿ ಸೇರಿದ ಭಕ್ತರು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇಲಾಖೆ ಬೇಕಾಬಿಟ್ಟಿ ನಿರ್ಬಂಧಗಳಿಂದಾಗಿ ಭಕ್ತರ ಧಾರ್ಮಿಕ ಭಾವನೆಗೆ ಪೆಟ್ಟು ಬಿದ್ದಿದ್ದು ಕೂಡಲೇ ನಿರ್ಬಂಧಗಳನ್ನು ಹಿಂತೆಗೆದುಕೊಂಡು ಜಾತ್ರೆ ನಡೆಸಲು ಅನುವು ಮಾಡಿಕೊಡಿ ಎಂದು ಒತ್ತಾಯಿಸಿದರು.

ಬೃಹತ್‌ ಪ್ರತಿಭಟನೆ ಮಾಹಿತಿ ಅರಿತ ಎಸಿಎಫ್ ಪರಮೇಶ್‌, ಜಿಲ್ಲಾಧಿಕಾರಿಗಳಿಗೆ ಮಾಹಿತಿ ತಿಳಿಸಿ ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡರು. ಕೊನೆಗೆ ಪರಮೇಶ್‌ ಮಾತನಾಡಿ, ಜಾತ್ರೆ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಈ ಹಿಂದಿನಂತೆಯೇ ಈ ಬಾರಿಯೂ ಅದ್ಧೂರಿಯಾಗಿ ಜಾತ್ರೆ ನಡೆಸಿ ಎಂದು ಭರವಸೆ ನೀಡಿದರು.     

ವಿಧಾನ ಪರಿಷತ್‌ ಮಾಜಿ ಸದಸ್ಯ ಸಿದ್ದರಾಜು, ತಾಪಂ ಮಾಜಿ ಅಧ್ಯಕ್ಷ ಗಿರೀಶ್‌ ಮಾತನಾಡಿ, ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಪ್ರತಿಭಟನಾಕಾರರ ಮನವೊಲಿಸಿದರು. 

ಶಿರಮಳ್ಳಿ ಸಿದ್ದಪ್ಪ,ಮಹದೇವನಾಯಕ, ಶಿವಲಿಂಗೇಗೌಡ, ಹೆಡಿಯಾಲ ನಾಗೇಶ, ಮುತ್ತಿಗೆ ಹುಂಡಿಬಸವರಾಜಪ್ಪ, ಮೊತ್ತಬಸವರಾಜಪ್ಪ, ನಾಗಣ್ಣ, ಪ್ರಭುಸ್ವಾಮಿ, ಆರ್‌ಫ್ಒ ಸಂದೀಪ್‌, ಮಹಮ್ಮದ್‌ ಸುಜೀತ, ಗೋಪಾಲಕೃಷ್ಣ, ಸತೀಶ್‌, ಶಿವಮಾದಯ್ಯ, ಮಲ್ಲೇಶ ಮತ್ತಿತರರಿದ್ದರು.

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.