ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಪದಕ ಪ್ರದಾನ
Team Udayavani, Jan 28, 2018, 12:02 PM IST
ಮೈಸೂರು: ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಕೆಎಸ್ಸಾರ್ಟಿಸಿಯ 85 ಚಾಲಕರಿಗೆ ಬೆಳ್ಳಿ ಪದಕ, ನಗದು ಹಾಗೂ ಪ್ರಶಂಸಾಪತ್ರ ನೀಡಿ ಗೌರವಿಸಲಾಯಿತು.
ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ಗಣರಾಜ್ಯೋತ್ಸವದೊಂದಿಗೆ ಚಾಲಕರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಗ್ರಾಮಾಂತರ ಘಟಕ- 3ರಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ 32 ಗ್ರಾಂ ತೂಕದ ಬೆಳ್ಳಿ ಪದಕದೊಂದಿಗೆ 2,000ರೂ. ನಗದು ಹಾಗೂ ಪ್ರಶಂಸನಾ ಪತ್ರ ನೀಡಲಾಯಿತು.
ಜತೆಗೆ ಅಪರಾಧ ರಹಿತ ಸೇವೆ ಸಲ್ಲಿಸಿ ಸಂಸ್ಥೆಗೆ ಉತ್ತಮ ಆದಾಯ (ಇಪಿಕೆಎಂ) ತಂದುಕೊಟ್ಟ 23ಜನ ನಿರ್ವಾಹಕರಿಗೆ 2,000ರೂ. ನಗದು ಪುರಸ್ಕಾರದೊಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಸತತ 3 ವರ್ಷಗಳ ಕಾಲ ಸಂಸ್ಥೆಗೆ ಉತ್ತಮ ಆದಾಯ (ಇಪಿಕೆಎಂ) ತಂದು, ಏಪ್ರಿಲ್, ಮೇ, ಜೂನ್‌ನಲ್ಲಿ 75ದಿನ ಹಾಜರಾತಿ ಹೊಂದಿದ್ದ ಇಬ್ಬರು ನಿರ್ವಾಹಕರಿಗೆ ಬೆಳ್ಳಿ ಪದಕ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಕೆಎಸ್ಸಾರ್ಟಿಸಿ ಮೈಸೂರು ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವಾಸು, ಮಂಡಳಿ ನಿರ್ದೇಶಕ ಗೋವಿಂದರಾಜು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.