ಜಿಲ್ಲೆಯ ಮಠಕ್ಕೆ ಶಾ ಭೇಟಿ, ದಲಿತರೊಂದಿಗೆ ಸಂವಾದ
Team Udayavani, Mar 30, 2018, 12:20 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಗುರುವಾರ ರಾತ್ರಿ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಶುಕ್ರವಾರ ಬೆಳಗ್ಗೆ 9.20ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.
9.50ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡುವ ಆಮಿತ್ ಶಾ ಅವರು, ಸುಮಾರು ಅರ್ಧಗಂಟೆಗಳ ಕಾಲ ರಾಜವಂಶಸ್ಥರ ಜತೆಗೆ ಮಾತುಕತೆ ನಡೆಸಲಿದ್ದು, ನಂತರ ಪುರಭವನ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕ್ಯಾತಮಾರನಹಳ್ಳಿಗೆ ತೆರಳಿ ಕಳೆದ ವರ್ಷ ಹತ್ಯೆಗೀಡಾದ ಆರೆಸ್ಸೆಸ್ ಕಾರ್ಯಕರ್ತ ರಾಜು ಅವರ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಬೆಳಗ್ಗೆ 11ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಗರದ ಮೂರು ವಿಧಾನಸಭಾ ಕ್ಷೇತ್ರಗಳ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12ಗಂಟೆಗೆ ರಾಜೇಂದ್ರ ಕಲಾಮಂದಿರದಲ್ಲಿ ದಲಿತ ಮುಖಂಡರ ಜೊತೆಗೆ ಸಂವಾದ ನಡೆಸಿ, ಮಧ್ಯಾಹ್ನದ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಕೊಳ್ಳೇಗಾಲಕ್ಕೆ ತೆರಳಿ ಅಲ್ಲಿನ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 2.50ಕ್ಕೆ ಆಯೋಜಿಸಿರುವ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಚಾಮರಾಜ ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಎಸ್‌ಟಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ನಂಜನಗೂಡಿಗೆ ಆಗಮಿಸಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ರಾತ್ರಿ 7.30ಕ್ಕೆ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ತೆರಳಿ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿದ್ದಾರೆ. ಮಾ.31ರಂದು ಬೆಳಗ್ಗೆ 10ಗಂಟೆಗೆ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರ ಆವರಣದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ನಗರ ಬಿಜೆಪಿ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಷ್ಠಿ ಧಾನ್ಯ ಅಭಿಯಾನಕ್ಕೆ ಚಾಲನೆ: ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ ಅವರು, ಬೆಳಗ್ಗೆ 10.40ಕ್ಕೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರಾಜೇಂದ್ರಪ್ಪ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ, ಮುಷ್ಠಿ ಧಾನ್ಯ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12.10ಕ್ಕೆ ಮೇಲುಕೋಟೆಗೆ ತೆರಳಿ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.
ಮಧ್ಯಾಹ್ನ 1.10ಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾವಯವ ಕೃಷಿಕರು, ಮಹಿಳೆಯರ ಜತೆಗೆ ಸಂವಾದ ನಡೆಸಿ, ರೈತರೊಂದಿಗೆ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಮಂಡ್ಯದ ಶಶಿಕಿರಣ್ ಕನ್ವೆನನ್ ಹಾಲ್‌ನಲ್ಲಿ ಆಯೋಜಿಸಿರುವ ಐದು ಜಿಲ್ಲೆಗಳ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30ಕ್ಕೆ ಚನ್ನಪಟ್ಟಣದ ಕರಕುಶಲ ಪಾರ್ಕ್‌ಗೆ ಭೇಟಿ ನೀಡಲಿದ್ದು, ಸಂಜೆ 4.55ಕ್ಕೆ ಚನ್ನಪಟ್ಟಣದಲ್ಲಿ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ದಿಮೆದಾರರೊಂದಿಗೆ ಸಂವಾದ ನಡೆಸಲಿದ್ದಾರೆ.
ಅಮಿತ್ ಶಾ ಪ್ರವಾಸದ ವೇಳೆ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಮಾಜಿ ಸಚಿವ ಸಿ.ಟಿ.ರವಿ, ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಹಾಜರಿರುತ್ತಾರೆ ಎಂದು ಹೇಳಿದರು. ಮಾಜಿ ಸಚಿವ ಎಸ್.ಎ.ರಾಮದಾಸ್, ಪಕ್ಷದ ಮುಖಂಡರಾದ ಎಚ್.ವಿ.ರಾಜೀವ, ಹೇಮಂತ್ ಕುಮಾರ್ ಗೌಡ, ಸತೀಶ್ ಮೊದಲಾದವರು ಸುದ್ದಿಗೋಷ್ಠಿàಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.