ತಾ.ಹಂತದಲ್ಲಿ ಕಂಟ್ರೋಲ್ ರೂಂ ತೆರೆಯಿರಿ
Team Udayavani, May 25, 2023, 2:54 PM IST
ಮೈಸೂರು: ಪೂರ್ವ ಮುಂಗಾರು ಮಳೆ ಆರಂಭವಾಗಿದ್ದು ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಜನ, ಜಾನುವಾರುಗಳ ಕ್ಲಿಷ್ಟಕರ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಹಂತದ ಅಧಿಕಾರಿ, ಸಿಬ್ಬಂದಿ ಸನ್ನದ್ಧರಾಗಿರಬೇ ಕು, ಕರ್ತವ್ಯ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕಾದೀತು, ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮುಂಗಾರು ಮಳೆ ಸಿದ್ಧತೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಾವುಗಳು ಕಾರ್ಯನಿರ್ವಹಿಸುತ್ತಿದ್ದು, ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು, ಈ ಹಿಂದೆ ತೊಂದರೆಗೊಳಗಾಗಿದ್ದ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕಾಳಜಿ ಕೇಂದ್ರ ತೆರೆಯಿರಿ: ಕಾಳಜಿ ಕೇಂದ್ರಗಳನ್ನು ತೆರೆಯುವುದು, ಅಗತ್ಯವಿದ್ದಲ್ಲಿ ಜನರ ಸ್ಥಳಾಂತರಕ್ಕೆ ಸಿದ್ಧರಾಗಿರಬೇಕು, ಅಪಾಯಕಾರಿ ಮರಗಳನ್ನು, ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವುಗೊಳಿಸುವುದು, ರಸ್ತೆಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ, ಶಿಥಿಲಾವಸ್ಥೆಯಲ್ಲಿರುವ ಮನೆಗಳ ಶಾಲಾ ಕಟ್ಟಡಗಳಿಂದ ಯಾವುದೇ ತೊಂದರೆಯಾಗಬಾರದು ಎಂದರು.
24/7 ಕಾರ್ಯ ನಿರ್ವಹಿಸಬೇಕು: ತಾಲೂಕು ಹಂತದಲ್ಲಿ ಕಂಟ್ರೋಲ್ ರೂಂ ತೆರೆದು 24/7 ಕಾರ್ಯ ನಿರ್ವಹಿಸಬೇಕು, ಯಾವುದೇ ಜೀವಹಾನಿ ಪ್ರಕರಣಗಳಿಗೆ 48 ಗಂಟೆಯೊಳಗೆ ಪರಿಹಾರ ಪಾವತಿಸಲು ವಿಳಂಬವಾಗಬಾರದು ಹಾಗೂ ಈಗಾಗಲೇ ತಾಲೂಕು ಮಟ್ಟದಲ್ಲಿರುವ ವಿಪತ್ತು ನಿರ್ವಹಣಾ ತಂಡಗಳನ್ನು ಸಕ್ರಿಯಗೊಳಿಸಿ ಎಂದರು.
ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಿ: ಕೆರೆ ದಂಡೆಗಳನ್ನು ಪರೀಕ್ಷಿಸಿ ಎಲ್ಲಾದರೂ ಸೋರಿಕೆ ಇದ್ದರೆ ತಕ್ಷಣ ಸರಿಪಡಿಸಿ, ಕೆರೆಗಳ ಅಕ್ಕಪಕ್ಕದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ತಿಳಿಸಿದರು. ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಲು ತಮ್ಮಲ್ಲಿ ಸಾಕಷ್ಟು ಹಣ ಇದ್ದು ಜಂಟಿ ಸರ್ವೆ ವರದಿ ಪಡೆದು ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಿ ಎಂದರು.
ಜನರಲ್ಲಿ ಜಾಗೃತಿ ಮೂಡಿಸಿ: ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಅಗತ್ಯ ಬೋಟ್‌ಗಳು, ಮುಳುಗು ತಜ್ಞರು ಹಾಗೂ ಅಗತ್ಯ ಪರಿಕರ ಗಳೊಂದಿಗೆ ಪರಿಸ್ಥಿತಿ ನಿಭಾಯಿಸಲು ಸಿದ್ಧರಿರಬೇಕು ಹಾಗೂ ಸಿಡಿಲು ಸಂಭವಿಸಿದಾಗ ರಕ್ಷಿಸಿಕೊಳ್ಳಲು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿ ನಗರದ 65 ವಾರ್ಡ್‌ಗಳ ಪೈಕಿ 6 ವಾರ್ಡ್ ಗಳ ಕೆಲವು ಕಡೆ ಸಮಸ್ಯೆಗಳಿದ್ದು ತಕ್ಷಣಕ್ಕೆ ಪರಿಹರಿಸಲಾಗಿದೆ ಎಂದರು.
ಜಿಪಂ ಸಿಇಒ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಉಪವಿಭಾಗಾಧಿಕಾರಿ ಕಮಲಾಬಾಯಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.