ಸಂತಾನ ಹರಣ ಚಿಕಿತ್ಸೆಗೆ ಪುರುಷರ ಹಿಂದೇಟು


Team Udayavani, Nov 24, 2020, 3:56 PM IST

ಸಂತಾನ ಹರಣ ಚಿಕಿತ್ಸೆಗೆ ಪುರುಷರ ಹಿಂದೇಟು

ಮೈಸೂರು: ಜನಸಂಖ್ಯಾ ಸ್ಫೋಟ ತಡೆಯುವ ಸಂತಾನ ಹರಣ ಚಿಕಿತ್ಸೆ (ಎನ್‌ಎಸ್‌ವಿ)ಗೆ ಒಳಪಡುತ್ತಿರುವ ಪುರುಷರ ಸಂಖ್ಯೆ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು,ಈ ವರ್ಷ ಕೋವಿಡ್ ಆರ್ಭಟದಿಂದಾಗಿ ಕೇವಲ ಇಬ್ಬರು ಮಾತ್ರ ಎನ್‌ಎಸ್‌ವಿಗೆ ಒಳಪಟ್ಟಿದ್ದಾರೆ.

ಎನ್‌ಎಸ್‌ವಿ ಚಿಕಿತ್ಸೆ ಮಾಡಿಸಿಕೊಂಡರೆ ಲೈಂಗಿಕ ಹಾಗೂ ದುಡಿಯುವ ಶಕ್ತಿ ಕುಂದುತ್ತದೆ ಎಂಬ ಅಪನಂಬಿಕೆಗೆ ಕಟ್ಟು ಬಿದ್ದಿರುವ ಪುರುಷರು ಎನ್‌ಎಸ್‌ವಿಗೆ ಹಿಂದೇಟು ಹಾಕುತ್ತಿದ್ದಾರೆ. ಎನ್‌ಎಸ್‌ವಿ ವಿಚಾರ ಎತ್ತಿದರೆ ಪುರುಷರು ಮಾರು ದೂರ ಓಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಸ್ವಯಂ ಪ್ರೇರಣೆಯಿಂದ ಸಂತಾನ ಹರಣ ಚಿಕಿತ್ಸೆಗೆ ಒಳಪಡುತ್ತಾರೆ. ಮಹಿಳೆಯರಲ್ಲಿ ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿದೆ. ಆದರೆ, ಪುರುಷರು ಇನ್ನೂ ಮೂಢನಂಬಿಕೆಗೆ ಜೋತು ಬಿದ್ದಿದ್ದು,ಕುಟುಂಬ ಯೋಜನೆಯಲ್ಲಿ ಪುರುಷರು ಮಹಿಳೆಯರಷ್ಟೇ ಪ್ರಧಾನ ಪಾತ್ರ ವಹಿಸಲು ನಿರಾಸಕ್ತಿ ತೋರುತ್ತಿದ್ದಾರೆ. ಎನ್‌ಎಸ್‌ವಿ (ನೋ ಸ್ಕಾಲ್‌ಪೆಲ್‌ ವ್ಯಾಸೆಕ್ಟಮಿ) ಅನುಷ್ಠಾನದಲ್ಲಿ ಮೈಸೂರು ಜಿಲ್ಲೆ ರಾಜ್ಯದಲ್ಲಿ ತುಂಬಾ ಹಿಂದಿದೆ. ಪ್ರತಿ ತಿಂಗಳು ಜಿಲ್ಲೆಯಲ್ಲಿ ಒಂದರಿಂದ ಒಂದೂ ವರೆ ಸಾವಿರದಷ್ಟು ಮಹಿಳೆಯರು ಸಂತಾನ ಹರಣ ಚಿಕಿತ್ಸೆಗೆ ಒಳಪಡುತ್ತಿ ದ್ದಾರೆ. ಆದರೆ, ಈ ಪೈಕಿ ಪುರುಷರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ.

ಜಿಲ್ಲೆಯಲ್ಲಿ 2015-14 ನೇ ಸಾಲಿನಲ್ಲಿ 30 ಮಂದಿ,2016-17ನೇ ಸಾಲಿನಲ್ಲಿ20,2017- 18ನೇ ಸಾಲಿನಲ್ಲಿ 20 ಮಂದಿ, 2018-19ರಲ್ಲಿ4 ಮಂದಿ, 2019-20ರಲ್ಲಿ 16 ಮಂದಿ ಪುರುಷರು ಮಾತ್ರ ಸಂತಾನ ಹರಣ ಚಿಕಿತ್ಸೆ ಒಳಪಟ್ಟಿದ್ದಾರೆ. ಈ ಬಾರಿ ಕೇವಲ ಇಬ್ಬರು ಮಾತ್ರ ಈ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇಂದಿನಿಂದ ಸಪ್ತಾಹ: ಜನರಲ್ಲಿ ಪುರುಷರ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆ ಯಾದ್ಯಂತ ನ.24 (ಇಂದಿನಿಂದ) ಏಳು ದಿನದ ವರೆಗೆ ಪುರುಷರ ಸಂತಾನಹರಣ ಶಸ್ತ್ರ ಚಿಕಿತ್ಸೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಬಳಿಕ ಸೇವಾ ಸಪ್ತಾಹ ನಡೆಯಲಿದೆ.

ಎನ್‌ಎಸ್‌ವಿ ಅಂದರೇನು? :  ನೋ ಸ್ಕಾಲ್‌ಪೆಲ್‌ ವ್ಯಾಸೆಕ್ಟಮಿ ಚಿಕಿತ್ಸೆಯು ಅತ್ಯಂತ ಸರಳ ಚಿಕಿತ್ಸೆ. ಈ ಚಿಕಿತ್ಸಾ ಪದ್ಧತಿಯಿಂದ ವೃಷಣದಲ್ಲಿ ಉತ್ಪತ್ತಿಯಾಗುವ ವೀರ್ಯಾಣುಗಳು ಸಂಭೋಗಕ್ರಿಯೆಯಲ್ಲಿ ಮಹಿಳೆಯ ಗರ್ಭಾಶಯ ತಲುಪದಂತೆ ಮಾಡುತ್ತದೆ. ಈ ಚಿಕಿತ್ಸೆಯಲ್ಲಿ ವೃಷಣದಿಂದ ವೀರ್ಯಾಣು ಸಾಗಿಸುವ ನಾಳ ಕತ್ತರಿಸಿ ಅದರ ಎರಡೂ ಕೊನೆಯ ಭಾಗಗಳನ್ನು ಗಂಟು ಹಾಕಲಾಗುವುದು. ಇದರಿಂದ ವೀರ್ಯಾಣುಗಳು ವೃಷಣದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಇದು ಗಾಯ ಮತ್ತು ಹೊಲಿಗೆ ಇಲ್ಲದ ಚಿಕಿತ್ಸೆಯಾಗಿದ್ದು,ಕೇವಲ 5 ರಿಂದ10 ನಿಮಿಷದಲ್ಲಿ ಚಿಕಿತ್ಸೆ ಮುಗಿದು ಕೇವಲ ಅರ್ಧಗಂಟೆಯಲ್ಲಿ ಮನೆಗೆ ಹೋಗಬಹುದು. ಎನ್‌ಎಸ್‌ವಿ ಚಿಕಿತ್ಸೆಯಿಂದ ಲೈಂಗಿಕ ಹಾಗೂ ದೈಹಿಕ ಶಕ್ತಿಕುಂದುವುದಿಲ್ಲ. ಸುಲಭದ ಕೆಲಸವಾಗಿದ್ದರೆ 48 ಗಂಟೆಗಳ ನಂತರ ಆರಂಭಿಸಬಹುದು. ಸೈಕಲ್‌ ತುಳಿಯುವುದು ಅಥವಾ ಇಂತಹದೇ ಬೇರೆಕೆಲಸಗಳಾಗಿದ್ದಲ್ಲಿ 7 ದಿನಗಳ ನಂತರ ಮಾಡಬಹುದುಎಂದು ವೈದ್ಯರು ಹೇಳುತ್ತಾರೆ.

ಹಿಂದೇಟು ಹಾಕಲು ಕಾರಣವೇನು ? : ಎನ್‌ಎಸ್‌ವಿಯಿಂದಲೈಂಗಿಕ ಹಾಗೂದುಡಿಯುವ ಶಕ್ತಿ ಕುಂದುತ್ತದೆ ಎಂಬತಪ್ಪು ತಿಳಿವಳಿಕೆ ಸಾಕಷ್ಟು ಮಂದಿಯಲ್ಲಿದೆ. ಚಿಕಿತ್ಸೆ ಮಾಡಿಸಿಕೊಂಡ ನೂರಾರು ಮಂದಿಯಲ್ಲಿ ಈ ರೀತಿಯ ಯಾವುದೇ ಲಕ್ಷಣಗಳು ಇದುವರೆಗೆ ಕಾಣಿಸಿಕೊಂಡಿಲ್ಲ. ಈ ಬಗ್ಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮ ನಡೆಸಿದರೂಸಾಕಷ್ಟು ಮಂದಿ ನಿರಾಸಕ್ತಿ ತೋರಲು ಮತ್ತೂಂದು ಪ್ರಮುಖ ಕಾರಣ, ಅದೆಲ್ಲ ಮಹಿಳೆಯರಿಗೆ ಬಿಟ್ಟವಿಚಾರ ಎಂಬತಾತ್ಸರ ಭಾವನೆಯೂ ಇದೆ. ಈ ಭಾವನೆ ದೂರವಾಗಬೇಕಾಗಿದೆ.

ಎನ್‌ಎಸ್‌ವಿ ಚಿಕಿತ್ಸೆಕುರಿತು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಜನರಿಗೆ ಚಿಕಿತ್ಸಾ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ ಇದ್ದರೂ ಚಿಕಿತ್ಸೆ ಮಾಡಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ವರ್ಷ ಇಲ್ಲಿಯವರೆಗೆ ಇಬ್ಬರು ಮಾತ್ರ ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಇಂದಿನಿಂದ ಈ ಬಗ್ಗೆ ಜಾಗೃತಿ ಮೂಡಿಸಲು ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಡಾ.ಪಿ.ರವಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ.

 

ಸತೀಶ್‌ ದೇಪುರ

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.