Ksheera Bhagya; ಇನ್ನು ಮುಂದೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್: ಸಚಿವ ಮಧು ಬಂಗಾರಪ್ಪ
Team Udayavani, Feb 6, 2024, 11:33 AM IST
ಮೈಸೂರು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿಗೆ ರಾಗಿ ಮಾಲ್ಟ್ ಹಾಕಿ ಪೂರೈಕೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕ್ಷೀರ ಭಾಗ್ಯ ಯೋಜನೆ ಜಾರಿಯಲ್ಲಿದೆ. ವಾರಕ್ಕೆ ಮೂರು ದಿನ ಹಾಲು ಕೊಡುತ್ತಿದ್ದೇವೆ. ಆ ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲು ಚಿಂತನೆ ಮಾಡಿದ್ದೇನೆ. ಮೈಸೂರಿನ ಸಿಎಫ್ಟಿಆರ್ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಶೀರ್ಘದಲ್ಲಿಯೇ ಈ ಯೋಜನೆ ಜಾರಿಗೆ ಬರಲಿದೆ. ಈ ಹಿಂದೆ ವಾರದಲ್ಲಿ ಒಂದು ಮೊಟ್ಟೆ ಕೊಡುತ್ತಿದ್ದರು, ಆದರೆ ನಾವು ಎರಡು ಮೊಟ್ಟೆ ಕೊಡುತ್ತಿದ್ದೇವೆ. ಮಕ್ಕಳ ಪೌಷ್ಠಿಕಾಂಶ ಜಾಸ್ತಿ ಮಾಡಲು ಪ್ರಯತ್ನ ಮಾಡಿದ್ದೇವೆ ಎಂದರು.
ನನ್ನದು ಸವಾಲಿನ ಇಲಾಖೆ: ನನ್ನ ಇಲಾಖೆ ತುಂಬಾ ದೊಡ್ಡದು. ಸಿಎಂ ನನಗೆ ಬೇರೆ ಖಾತೆ ನಿಗದಿ ಮಾಡಿದ್ದರು. ಆದರೆ ಡಿ.ಕೆ.ಶಿವಕುಮಾರ್ ಅವರು ಟಫ್ ಇಲಾಖೆ ಕೊಡಿ ಎಂದು ಹೇಳಿದ್ದರು. ಡಿಕೆ ಶಿವಕುಮಾರ್ ನನ್ನ ತಂದೆಯವರಿಗೆ ಆತ್ಮೀಯರು. ಸುರ್ಜೇವಾಲ ಅವರೂ ಒಪ್ಪಿದರು. ನನ್ನ ಇಲಾಖೆ ಸವಾಲಿನ ಇಲಾಖೆ, ಸಮಸ್ಯೆಗಳೂ ಇವೆ. 58,000 ಸರ್ಕಾರಿ ಶಾಲೆಗಳಿವೆ. ಒಟ್ಟು 1.20 ಕೋಟಿ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣದಲ್ಲಿ ಅವಕಾಶ ಮುಖ್ಯ ಎಂದರು.
ಮೂರು ಪರೀಕ್ಷೆ ಜಾರಿಗೆ ತಂದಿದ್ದೇವೆ. ಇದರಿಂದ ದ್ವಿತೀಯ ಪಿಯುಸಿಯಲ್ಲಿ ಮೂರನೇ ಪರೀಕ್ಷೆಗೆ 1.20 ಹಾಜರಾದರು. ಈ ಪೈಕಿ 42,000 ವಿದ್ಯಾರ್ಥಿಗಳು ಪಾಸಾದರು. ಎಸ್ಎಸ್ಎಲ್ಸಿಗೂ ಇದೇ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಮಾರ್ಕ್ಸ್ ಕಾರ್ಡ್ನಲ್ಲಿ ಸಪ್ಲಮೆಂಟರಿ ಎನ್ನುವ ಪದ ಬಳಕೆ ನಿಷೇಧಿಸಿದ್ದೇವೆ ಎಂದು ಮೈಸೂರಿನಲ್ಲಿ ಮಧು ಬಂಗಾರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.