ಚಾಮುಂಡೇಶ್ವರಿಯಲ್ಲಿ ಸಚಿವ ಜಿಟಿಡಿ ಪ್ರವಾಸ
Team Udayavani, Jan 11, 2019, 6:09 AM IST
ಮೈಸೂರು: ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಸ್ವಕ್ಷೇತ್ರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಇಲವಾಲ ಮತ್ತು ಜಯಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಮೈಸೂರು ತಾಲೂಕು ಇಲವಾಲ ಹೋಬಳಿ ಶೆಟ್ಟಿನಾಯಕನಹಳ್ಳಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಿದ್ದಾರೆ. ನಂತರ ಅಂಗನವಾಡಿ ಹಾಗೂ ಗ್ರಂಥಾಲಯ ಕಟ್ಟಡ ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ಮಾಣಿಕ್ಯಪುರದಲ್ಲಿ, 8.30ಕ್ಕೆ ಕಮರಹಳ್ಳಿಯಲ್ಲಿ, 9.30ಕ್ಕೆ ದೊಡ್ಡಮಾರನಗೌಡನಹಳ್ಳಿಯಲ್ಲಿ, ಬೆಳಗ್ಗೆ 10.30ಕ್ಕೆ ಮಾರಯ್ಯನಹುಂಡಿ ಗ್ರಾಮದಲ್ಲಿ, ಬೆಳಗ್ಗೆ 11.30ಕ್ಕೆ ನುಗ್ಗಹಳ್ಳಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜಯಪುರ ಹೋಬಳಿ ಮಾದಹಳ್ಳಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಹಾಗೂ ಗ್ರಾಮ ವಿಕಾಸ ಯೋಜನೆಯಡಿ ಕಾಮಗಾರಿಗೆ ಚಾಲನೆ ಹಾಗೂ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಜಯಪುರ ಹೋಬಳಿ ಅನಗನಹಳ್ಳಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಹಾಗೂ ಗ್ರಾಮ ವಿಕಾಸ ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಜಯಪುರ ಹೋಬಳಿ ತಿಬ್ಬಯ್ಯನಹುಂಡಿ ಗ್ರಾಮದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಮತ್ತು ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಜಯಪುರ ಹೋಬಳಿಯ ಮೂಗನಹುಂಡಿ ಹಾಗೂ ನಗರ್ತಹಳ್ಳಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಯಪುರ ಹೋಬಳಿಯ ದೇವಗಳ್ಳಿಯಲ್ಲಿ ಸಂಜೆ 4 ಗಂಟೆಗೆ ಮುಳ್ಳೂರು ಗ್ರಾಮ ಹಾಗೂ ಸಂಜೆ 5 ಗಂಟೆಗೆ ಗೋಪಾಲಪುರದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.