ಸಂಪುಟ ಪುನಾರಚನೆ ಉಸಾಬರಿ ನಮಗ್ಯಾಕೆ? ಸಚಿವ ಕೆ ಸುಧಾಕರ್
Team Udayavani, Nov 11, 2020, 3:26 PM IST
ಮೈಸೂರು: ಉಪಚುನಾವಣೆ ಫಲಿತಾಂಶ ಬಂದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಈ ನಡುವೆ ಮೈಸೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಕೆ ಸುಧಾಕರ್ , ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಏನು ಮಾಡಬೇಕೆನ್ನುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಸಂಪುಟ ಪುನಾರಚನೆ ಉಸಾಬರಿ ನಮಗ್ಯಾಕೆ ಎಂದು ಪ್ರಶ್ನಿಸಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟ ಪನಾರಚನೆ ವಿಚಾರದಲ್ಲಿ ನಾವು ನೀವು ಮಾತನಾಡೋದು ಏನಿದೆ? ಮುಖ್ಯಮಂತ್ರಿಗಳು ಈಗಾಗಲೇ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ದೆಹಲಿಗೆ ತೆರಳುವ ವಿಚಾರವನ್ನೂ ಬಹಿರಂಗ ಪಡಿಸಿದ್ದಾರೆ. ಸೂಕ್ತ ಸಂದರ್ಭದಲ್ಲಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ನಾನು ಅಸಹಾಯಕ
ಚುನಾವಣೆ ರ್ಯಾಲಿಗಳಲ್ಲಿ ಮಾಸ್ಕ್ -ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ನಾನು ಕೂಡಾ ಅಸಹಾಯಕ. ಕೋವಿಡ್-19 ಬಗ್ಗೆ ಈಗಾಗಲೇ ಮಾರ್ಗಸೂಚಿ ಇದೆ. ನಾನು ಕೂಡ ಕಡ್ಡಾಯವಾಗಿ ಪಾಲಿಸುವಂತೆ ಎಲ್ಲರಿಗೂ ಹೇಳುತ್ತಿದ್ದೇನೆ. ಇದು ನಮಗೂ ಅನ್ವಯ ಆಗುತ್ತದೆ. ರಾಜಕೀಯ ಪಕ್ಷಗಳ ರ್ಯಾಲಿಗಳ ವಿಚಾರದಲ್ಲೂ ಸರ್ಕಾರಕ್ಕೆ ಸೂಚನೆ ಕೊಟ್ಟಿದ್ದೆ. ಆದರೆ ಇದು ಪಾಲನೆ ಆಗಿಲ್ಲ ಎಂದು ನನಗೂ ಬೇಸರವಿದೆ ಎಂದರು.
ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಹಾಗೂ ನಾಯಕರಿಗೆ ಸಾಮೂಹಿಕ ಜವಾಬ್ದಾರಿ ಇರಬೇಕು. ಅದನ್ನು ಮರೆತಿರುವುದು ದುರಾದೃಷ್ಟ. ಈ ಬಗ್ಗೆ ದಂಡ ಹಾಕಲು ಅಧಿಕಾರಿಗಳಿಗೆ ತಿಳಿಸುತ್ತೇನೆ. ದಂಡ ಎಲ್ಲರಿಗೂ ಅನ್ವಯ ಆಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.