ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
Team Udayavani, Jul 2, 2024, 12:04 PM IST
ಮೈಸೂರು: ಸರಕಾರಿ ಕಾರ್ಯಕ್ರಮಕ್ಕೆ ಬಂದಿರುವ ಸ್ವಾಮೀಜಿಗಳು ಕಾರ್ಯಕ್ರಮದ ಕುರಿತು ಮಾತನಾಡುವ ಬದಲು ರಾಜಕೀಯ ಮಾತನಾಡಿದರೆ ಹೇಗೆ ಎಂದು ಡಿಕೆಶಿ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದ ಸ್ವಾಮೀಜಿ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರು ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಂಗಳೂರು, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ರಾಜ್ಯದ 31 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆಯಾಗಿದೆ. 31 ಜಿಲ್ಲೆಗಳಲ್ಲಿ 208 ಮಿಮಿ ವಾಡಿಕೆ ಮಳೆಯ ನಿರೀಕ್ಷೆ ಇತ್ತು. ಇಡಿ ರಾಜ್ಯದ್ಯಂತ 205ಮಿಮಿ ಮಳೆ ಆಗಿದೆ. ಜನಸಾಮಾನ್ಯರ ಆಸ್ತಿ, ಪ್ರಾಣಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳ ಸಭೆ ಕರೆದಿದ್ದೇವೆ. ಜೊತೆಗೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವ ಹಿನ್ನೆಲೆ.
ಮುಂಜಾಗ್ರತ ಕ್ರಮ ಕೈಗೊಳ್ಳಲು ಒಂಭತ್ತು ಜಿಲ್ಲೆಯ ಡಿಸಿ, ತಹಸೀಲ್ದಾರ್ ಗಳ ಸಭೆ ನಡೆಸಿ ಮಳೆಯಿಂದ ಯಾವುದೇ ಹಾನಿಯಾಗದ ರೀತಿಯಲ್ಲಿ ಕ್ರಮ ವಹಿಸಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಿದರು.
ಸಭೆಯ ಬಳಿಕ ಡಿಸಿಎಂ ವಿಚಾರಡಾ ಕುರಿತು ಪರೋಕ್ಷವಾಗಿ ಸಚಿವ ರಾಜಣ್ಣ ವಿರುದ್ದ ಅಸಮಾಧಾನ ಹೊರ ಹಾಕಿದ ಸಚಿವರು ಯಾರಿಗಾದರೂ ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಆ ವಿಚಾರವನ್ನು ಪಕ್ಷದ ವರಿಷ್ಠರ ಬಳಿ ಹೇಳಿಕೊಳ್ಳಬೇಕು ಅದನ್ನು ಬಿಟ್ಟು ಮಾಧ್ಯಮದವರ ಮುಂದೆ ತಮ್ಮ ಆಸೆ ಹೇಳಿಕೊಂಡರೆ ಏನೂ ಪ್ರಯೋಜನ ಹೇಳಿ? ನಿಮ್ಮ ಮುಂದೆ ಹೇಳಿಕೊಂಡರೆ ನೀವೇನಾದರೂ ಸ್ಥಾನ ಕೊಡಿಸ್ತಿರಾ? ಸ್ಥಾನಮಾನದ ವಿಚಾರವನ್ನು ವರಿಷ್ಠರ ಬಳಿ ಮಾತ್ರ ಚರ್ಚೆ ಮಾಡಬೇಕು. ಮಾಧ್ಯಮದ ಬಳಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೂ ಒಳ್ಳೆಯದು ಜನರಿಗೂ ಒಳ್ಳೆಯದು. ಅದು ಬಿಟ್ಟು ವೈಯಕ್ತಿಕ ವಿಚಾರ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೆ ನಷ್ಟ. ನಮ್ಮ ನಾಯಕರು ಎಚ್ಚರಿಕೆ ಕೊಟ್ಟ ಮೇಲೂ ಕೆಲವರು ಡಿಸಿಎಂ ವಿಚಾರದ ಬಗ್ಗೆ ಮಾತಾಡ್ತಿದ್ದಾರೆ. ನಮ್ಮ ವರಿಷ್ಠರಿಗೆ ತಾಳ್ಮೆ ಹೆಚ್ಚು. ಆದರೆ ಅವರು ಎಲ್ಲವನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಇನ್ನು ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂಬ ಸ್ವಾಮೀಜಿ ಹೇಳಿಕೆ ವಿಚಾರದ ಬಗ್ಗೆ ಹೇಳಿಕೆ ತಿರುಗೇಟು ಕೊಟ್ಟ ಸಚಿವರು ಸ್ವಾಮೀಜಿಗಳು ಯಾವ ವಿಚಾರವನ್ನು ಎಲ್ಲಿ ಮಾತಾಡಬೇಕು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ. ಸರಕಾರಿ ಸಮಾರಂಭಕ್ಕೆ ಬಂದು ರಾಜಕೀಯ ವಿಚಾರ ಮಾತಾಡಿದರೆ ಹೇಗೆ? ಸ್ವಾಮೀಜಿ ತಮ್ಮ ಮಠದಲ್ಲಿ ಆ ವಿಚಾರ ಮಾತಾಡಲಿ.
ತಮ್ಮ ಭಕ್ತರ ಮುಂದೆ ಅದನ್ನು ಹೇಳಲಿ. ಯಾರಿಗೆ ಯಾವ ವಿಚಾರ ಎಲ್ಲಿ ಮಾತಾಡಬೇಕು ಎಂದು ಹೇಳುವ ಸ್ಥಿತಿ ಬಂದಿದ್ದೆ ಇದೇ ಬೇಸರದ ವಿಚಾರ ಎಂದು ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಸರಕಾರಿ ಜಾಗಗಳ ರಕ್ಷಿಸುವ ಸರ್ವೆ ಶುರುವಾಗಿದೆ. ಒಟ್ಟು 14 ಲಕ್ಷ ಸರಕಾರಿ ಜಾಗಗಳಿವೆ. ಇವುಗಳಲ್ಲಿ ಒತ್ತುವರಿ ಎಷ್ಟು ಆಗಿದೆ ಎಂಬ ಸರ್ವೆ ಶುರು ಮಾಡಿದ್ದೇವೆ.
ಜುಲೈ ಅಂತ್ಯಕ್ಕೆ ಸರ್ವೆ ಮುಗಿಯಲಿದೆ. ನಂತರ ಒತ್ತುವರಿ ತೆರವು ಆರಂಭಿಸುತ್ತೇವೆ. ಸಾರ್ವಜನಿಕವಾಗಿ ಒತ್ತುವರಿ ಜಾಗದ ವಿಚಾರ ತಿಳಿಸಿ ತೆರವು ಮಾಡ್ತಿವಿ. ರಾಜ್ಯದಲ್ಲಿ ಈಗ ಸಮೃದ್ಧಿಯಾದ ಮಳೆಯಾಗಿದೆ. ಇದುವರೆಗೂ ಒಟ್ಟು 20 ಜನ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ನಷ್ಟ ಹೆಚ್ಚಾದರೆ ಪರಿಹಾರ ಕೇಳ್ತಿವಿ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ: Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.